Crime News: ಹೆಂಡತಿಗೆ ಹೊಡೆದ ಸೈನಿಕನನ್ನು ಶೂಟ್ ಮಾಡಿ ಕೊಂದ ಮಾವ

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ವೈವಾಹಿಕ ಜಗಳದ ಕಾರಣದಿಂದ ಹೆಂಡತಿಯನ್ನು ಹೊಡೆದ ಭಾರತೀಯ ಯೋಧನನ್ನು ಆತನ ಮಾವನೇ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ.

Crime News: ಹೆಂಡತಿಗೆ ಹೊಡೆದ ಸೈನಿಕನನ್ನು ಶೂಟ್ ಮಾಡಿ ಕೊಂದ ಮಾವ
ಸಾಂದರ್ಭಿಕ ಚಿತ್ರImage Credit source: istock
Follow us
ಸುಷ್ಮಾ ಚಕ್ರೆ
|

Updated on: May 11, 2024 | 8:05 PM

ಶ್ರೀನಗರ: ತನ್ನ ಮಗಳ ಮೇಲೆ ಹಲ್ಲೆ ಮಾಡಿದ ಅಳಿಯನನ್ನು ವ್ಯಕ್ತಿಯೊಬ್ಬರು ಕೊಲೆ (Murder) ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ರಿಯಾಸಿಯ ಕೆಂಬಾಲ್ ದಂಗಾ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಸಮೀಪದ ಪನಾಸಾ ಗ್ರಾಮದ ನಿವಾಸಿ ದೌಲತ್ ರಾಮ್ ರಜೆಯ ಮೇಲೆ ಮನೆಗೆ ಬಂದಿದ್ದ ಸೇನಾ ಯೋಧ ಅಮಿತ್ ಸಿಂಗ್ (Amit Singh) ಅವರನ್ನು ಭೇಟಿಯಾಗಲು ಆಗಮಿಸಿದ್ದರು. ಆಗ ಈ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ವೈವಾಹಿಕ ವಿವಾದಕ್ಕೆ ಸಂಬಂಧಿಸಿದಂತೆ ಸೇನಾ ಯೋಧನನ್ನು ಆತನ ಮಾವ ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸರ ಪ್ರಕಾರ, ಗ್ರಾಮ ರಕ್ಷಣಾ ಪಡೆ (ವಿಡಿಜಿ) ಸದಸ್ಯ ದೌಲತ್ ರಾಮ್ ತನ್ನ 303 ರೈಫಲ್‌ನಿಂದ ತನ್ನ ಅಳಿಯ ಅಮಿತ್ ಸಿಂಗ್‌ಗೆ ಗುಂಡು ಹಾರಿಸಿದ್ದಾರೆ. ಇದರ ಪರಿಣಾಮವಾಗಿ ಅವರಿಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಾವೇರಿ: ಮಗ ಪ್ರಿಯತಮೆಯೊಂದಿಗೆ ಓಡಿಹೋಗಿದ್ದಕ್ಕೆ ಮಹಿಳೆಯ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಕೆಲವು ದೀರ್ಘಕಾಲದ ವೈವಾಹಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಅಮಿತ್ ಸಿಂಗ್ ತನ್ನ ಪತ್ನಿ (ರಾಮ್‌ನ ಮಗಳು) ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಕೋಪಗೊಂಡ ರಾಮ್ ತನ್ನ ಅಳಿಯನಿಗೆ ಬುದ್ಧಿ ಕಲಿಸಲು ಮಗಳ ಮನೆಗೆ ಬಂದಿದ್ದಾರೆ. ಈ ವೇಳೆ ಜಗಳಗಳಾಗಿದ್ದು, ಕೋಪದ ಭರದಲ್ಲಿ ರಾಮ್ ತನ್ನ ಅಳಿಯನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು.

ಗುಂಡು ಹಾರಿಸಿದ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ, ದೈಹಿಕ ಹಲ್ಲೆಯಿಂದ ಗಾಯಗೊಂಡಿದ್ದ ಅಮಿತ್ ಸಿಂಗ್ ಮತ್ತು ಅವರ ಪತ್ನಿಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸಲ್ಲು ನಿವಾಸದ ಮೇಲೆ ಗುಂಡು ಹಾರಿಸಿದವರಿಗೆ ಸಿಕ್ಕಿತ್ತು ಲಕ್ಷ ಲಕ್ಷ ಹಣ; ಮೂರನೇ ಆರೋಪಿ ಅರೆಸ್ಟ್

ಪ್ರಾಥಮಿಕ ಚಿಕಿತ್ಸೆಯ ನಂತರ, ಸಿಂಗ್ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು (ಜಿಎಂಸಿ) ಆಸ್ಪತ್ರೆಗೆ ಉಲ್ಲೇಖಿಸಲಾಯಿತು ಆದರೆ ಜಮ್ಮುವಿಗೆ ತೆರಳುವ ಮಾರ್ಗದಲ್ಲಿ ಅವರು ಸಾವನ್ನಪ್ಪಿದರು ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿ ದೌಲತ್ ರಾಮ್ ಅವರನ್ನು ಬಂಧಿಸಲಾಗಿದೆ ಮತ್ತು ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ