ಇಂದೋರ್: ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಗೆ ಕೈವಾರದಿಂದ 180 ಬಾರಿ ಇರಿದ ಸಹಪಾಠಿಗಳು

ಮಧ್ಯಪ್ರದೇಶದ ಇಂದೋರ್‌ನ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರ(ಕಂಪಾಸ್)ದಿಂದ108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಂದ ತನಿಖಾ ವರದಿ ಕೇಳಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇಂದೋರ್: ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಗೆ ಕೈವಾರದಿಂದ 180 ಬಾರಿ ಇರಿದ ಸಹಪಾಠಿಗಳು
ಕೈವಾರImage Credit source: NDTV
Follow us
ನಯನಾ ರಾಜೀವ್
|

Updated on: Nov 27, 2023 | 3:22 PM

ಮಧ್ಯಪ್ರದೇಶದ ಇಂದೋರ್‌ನ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಕೈವಾರ(ಕಂಪಾಸ್)ದಿಂದ108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸರಿಂದ ತನಿಖಾ ವರದಿ ಕೇಳಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದ ವೇಳೆ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಕೈವಾರದಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಸಿಡಬ್ಲ್ಯೂಸಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ಹೇಳಿದ್ದಾರೆ.

ಪ್ರಕರಣ ಆಘಾತಕಾರಿಯಾಗಿದೆ. ಇಷ್ಟು ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ, ಎಂದು ಅವರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯೂಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ ಮತ್ತು ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂದು ಕಂಡುಹಿಡಿಯಲಾಗುತ್ತಿದೆ.

ಮತ್ತಷ್ಟು ಓದಿ: ಕೋಲಾರ: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್​ ಹತ್ಯೆ

ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆಯಲ್ಲಿ ನಡೆದ ದಾಳಿಯಿಂದ ಬಾಲಕ ಭಯಗೊಂಡಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ. ಶಾಲೆಯ ಆಡಳಿತ ಮಂಡಳಿ ತರಗತಿಯ ದೃಶ್ಯಾವಳಿಯನ್ನು ನೀಡುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದರು.

ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಮಕ್ಕಳು 10 ವರ್ಷದೊಳಗಿನವರಾಗಿದ್ದು, ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ