Indore Crime: ಮದುವೆಯಾಗಲು ಒಲ್ಲೆ ಎಂದ ಯುವತಿಗೆ ಗನ್ ತೋರಿಸಿದ, ಮಧ್ಯೆ ಬಂದ ವ್ಯಕ್ತಿಗೆ ಗುಂಡು ಹಾರಿಸಿ ಕೊಂದೇಬಿಟ್ಟ

|

Updated on: Feb 10, 2023 | 8:38 AM

ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಯುವತಿಯ ಹಣೆಗೆ ಗನ್ ಇಟ್ಟು ಬೆದರಿಕೆ ಹಾಕುತ್ತಿದ್ದ, ಆ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ವ್ಯಕ್ತಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ.

Indore Crime: ಮದುವೆಯಾಗಲು ಒಲ್ಲೆ ಎಂದ ಯುವತಿಗೆ ಗನ್ ತೋರಿಸಿದ, ಮಧ್ಯೆ ಬಂದ ವ್ಯಕ್ತಿಗೆ ಗುಂಡು ಹಾರಿಸಿ ಕೊಂದೇಬಿಟ್ಟ
Firing
Follow us on

ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ಯುವತಿಯ ಹಣೆಗೆ ಗನ್ ಇಟ್ಟು ಬೆದರಿಕೆ ಹಾಕುತ್ತಿದ್ದ, ಆ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ವ್ಯಕ್ತಿ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಇಂದೋರ್​ನಲ್ಲಿ ನಡೆದಿದೆ. ಈ ಘಟನೆ ಗುರುವಾರ ನಗರದಲ್ಲಿ ಪ್ರತಿಭಟನೆಗೆ ಕಾರಣವಾಗಿತ್ತು. ಬುಧವಾರ ಸಂಜೆ ರೈಲ್ವೇ ನಿಲ್ದಾಣದ ಹೊರಗೆ ಯುವತಿ ತನ್ನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರಿಂದ ಆರೋಪಿ ರಾಹುಲ್ ಯಾದವ್ ಕಂಟ್ರಿಮೇಡ್ ಪಿಸ್ತೂಲ್ ತೋರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕೆಯ ಸಹೋದ್ಯೋಗಿ ಸಂಸ್ಕಾರ್ ವರ್ಮಾ (20) ಮಧ್ಯಪ್ರವೇಶಿಸಲು ಪ್ರಯತ್ನಿಸಿದರು ಎಂದು ಸರ್ಕಾರಿ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಹಟೇಕರ್ ತಿಳಿಸಿದ್ದಾರೆ.

ಯಾದವ್ ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ವರ್ಮಾ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಯಾದವ್ ಮತ್ತು ಅವರ ಕುಟುಂಬ ಸದಸ್ಯರು ನಾಪತ್ತೆಯಾಗಿದ್ದಾರೆ, ತನಿಖೆ ನಡೆಯುತ್ತಿದೆ ಎಂದು ಇನ್ಸ್‌ಪೆಕ್ಟರ್ ಹೇಳಿದರು.

ಶರ್ಮಾ ಅವರ ಸಾವಿನ ನಂತರ ಜನರು ಗುರುವಾರ ಪೊಲೀಸ್ ನಿಯಂತ್ರಣ ಕೊಠಡಿಯ ಹೊರಗೆ ಪ್ರತಿಭಟನೆ ನಡೆಸಿದರು, ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದರು.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ