Crime News: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು

ಇಂದೋರ್​ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಬೆತ್ತಲೆಗೊಳಿಸಿ 30 ನಿಮಿಷಗಳ ಕಾಲ ನೃತ್ಯ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅಪರಾಧ ನಡೆದ 2 ತಿಂಗಳ ನಂತರ ಕೇಸ್ ದಾಖಲಿಸಲಾಗಿದೆ.

Crime News: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು
ಸಾಂದರ್ಭಿಕ ಚಿತ್ರ
Follow us
|

Updated on: Sep 03, 2024 | 10:21 PM

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ, ಬೆಲ್ಟ್‌ನಿಂದ ಹೊಡೆದು ಅರ್ಧ ಗಂಟೆಗಳ ಕಾಲ ಬೆತ್ತಲೆಯಾಗಿ ನೃತ್ಯ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 2 ತಿಂಗಳ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಗಳು ಜೂನ್ 11ರಂದು ತನ್ನನ್ನು ಬಲವಂತವಾಗಿ ಗೋಡೌನ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಕನಾಡಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟಿವಿಯಲ್ಲಿ ಅಶ್ಲೀಲ ವೀಡಿಯೋ ನೋಡಿದ ನಂತರ ಆರೋಪಿಗಳು ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ

ಈ ದೂರನ್ನು ಪೊಲೀಸರು ಆರಂಭದಲ್ಲಿ ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿ ಆ ಮಹಿಳೆ ಮಧ್ಯಪ್ರದೇಶ ಹೈಕೋರ್ಟ್‌ಗೆ ತೆರಳಿದ ನಂತರ ಸೋಮವಾರ ತಡರಾತ್ರಿ ಐವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜುಲೈ 17ರಂದು ತಾನು ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ.

ಆಕೆಯ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಮಹಿಳೆಯ ದೂರನ್ನು 90 ದಿನಗಳಲ್ಲಿ ವಿಲೇವಾರಿ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕನಾಡಿಯಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ಸೂಚಿಸಿತು. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಮದುವೆಯ ಶಾಪಿಂಗ್​ಗೆ ಹೋಗುತ್ತಿದ್ದವರ ಹತ್ಯೆ; ಪಂಜಾಬ್‌ನ ಫಿರೋಜ್‌ಪುರದಲ್ಲಿ ತ್ರಿವಳಿ ಕೊಲೆ

ಇದೇ ವೇಳೆ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಡಳಿತ ಪಕ್ಷದ ಒತ್ತಡದಿಂದಾಗಿ ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ನೀಲಭ್ ಶುಕ್ಲಾ ಆರೋಪಿಸಿದ್ದಾರೆ. ಆದರೆ, ಮಧ್ಯಪ್ರದೇಶ ರಾಜ್ಯ ಬಿಜೆಪಿ ವಕ್ತಾರ ನರೇಂದ್ರ ಸಲೂಜಾ ಅವರು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ ಮತ್ತು ನ್ಯಾಯದ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ