ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 11, 2024 | 5:09 PM

ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಸೊಸೆ ಹೊಡೆದಿರುವಂತಹ ಅಮಾನವೀಯ ಘಟನೆಯೊಂದು ನಗರದಲ್ಲಿ ನಡೆದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರಿ ಎಂಬುವವರಿಂದ ಕೃತ್ಯವೆಸಲಾಗಿದೆ. ಸಿಸಿಟಿವಿ ಆಧರಿಸಿ ಪತಿ ಠಾಣೆಗೆ ದೂರು ನೀಡಿದ್ದು, ಕಂಕನಾಡಿ ಪೊಲೀಸರಿಂದ ಉಮಾಶಂಕರಿ ಬಂಧನ ಮಾಡಲಾಗಿದೆ. 

ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ
ಮಾವನ ಮೇಲೆ ಹಲ್ಲೆ ಮಾಡಿದ ಸೊಸೆ
Follow us on

ಮಂಗಳೂರು, ಮಾರ್ಚ್​ 11: ವೃದ್ಧ ಮಾವ (father-in-law) ನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಸೊಸೆ ಹೊಡೆದಿರುವಂತಹ ಅಮಾನವೀಯ ಘಟನೆಯೊಂದು ನಗರದಲ್ಲಿ ನಡೆದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರಿ ಎಂಬುವವರಿಂದ ಕೃತ್ಯವೆಸಲಾಗಿದೆ. ಮಾವ ಪದ್ಮನಾಭ ಸುವರ್ಣ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ. ಪತಿ ವಿದೇಶದಲ್ಲಿದ್ದು ಮನೆಯಲ್ಲಿ ಮಾವ ಅತ್ತೆ ಮಾತ್ರ ಇದ್ದರು. ಸಿಸಿಟಿವಿ ಆಧರಿಸಿ ಪತಿ ಠಾಣೆಗೆ ದೂರು ನೀಡಿದ್ದು, ಕಂಕನಾಡಿ ಪೊಲೀಸರಿಂದ ಉಮಾಶಂಕರಿಯನ್ನು ಬಂಧಿಸಲಾಗಿದೆ.

ಶರ್ಟ್​ನ್ನು ಸೋಫಾ ಮೇಲೆ ಇಟ್ಟ ವಿಚಾರಕ್ಕೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಮಾವ ಪದ್ಮನಾಭ ಸುವರ್ಣ (87) ತಮ್ಮ ಶರ್ಟ್ ಬಿಚ್ಚಿ ಸೋಫಾ ಮೇಲೆ ಇಟ್ಟಿದ್ದರು. ಅದನ್ನು ನೋಡಿ ಕೆಂಡವಾಗಿದ್ದ ಪಾಪಿ ಸೊಸೆ‌. ‘ಹೋಗಿ ಸಾಯಿ’ ಎಂದು ಹಲ್ಲೆ‌ ಮಾಡಿದ್ದಾರೆ. ಸದ್ಯ ಉಮಾಶಂಕರಿ ವಿರುದ್ಧ ವೃದ್ಧರ ಮಗಳು ಪ್ರಿಯಾ ಎಂಬುವವರಿಂದ ಕೊಲೆಯತ್ನ ದೂರು ದಾಖಲು ಮಾಡಲಾಗಿದೆ.

ಪೆಂಡಾಲ್​ ಹಾಕಿದ್ದ ಹಣ ಕೇಳಿದ್ದಕ್ಕೆ ಕುಟುಂಬಸ್ಥರ ಮೇಲೆ ಹಲ್ಲೆ

ಕೋಲಾರ: ಪೆಂಡಾಲ್​ ಹಾಕಿದ್ದ ಹಣವನ್ನು ಕೇಳಿದ್ದಕ್ಕೆ ಮನೆಯ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ಜಿಲ್ಲೆಯ ಮಾಲೂರು ತಾಲ್ಲೂಕು ದೊಡ್ಡಶಿವಾರ ಗ್ರಾಮದಲ್ಲಿ ನಡೆದಿತ್ತು. ದೊಡ್ಡಶಿವಾರ ಗ್ರಾಮದ ಜಯರಾ ಹಾಗೂ ಅವರ ಪತ್ನಿ ಕೆಂಪಮ್ಮ ಮೇಲೆ ಹಲ್ಲೆ ಮಾಡಿದ್ದರು. ಗ್ರಾಮದ ಆಂಜಿ,
ವೆಂಕಟಪ್ಪ, ಅನಿಲ್​, ಪ್ರತಾಪ್ ಸೇರಿ ಹಲವರಿಂದ ಹಲ್ಲೆ ಮಾಡಲಾಗಿತ್ತು.

ಇದನ್ನೂ ಓದಿ: ಪ್ರೀತಿಸಲು ನಿರಾಕರಿಸಿದಕ್ಕೆ ಯುವತಿಯನ್ನು ಅಪಹರಿಸಿದ ಪಾಗಲ್​ಪ್ರೇಮಿ: ವಿದ್ಯಾರ್ಥಿನಿ ರಕ್ಷಿಸಿ ಕರೆತಂದ ಹಾವೇರಿ ಪೊಲೀಸ್​​

ಪೆಂಡಾಲ್​ ಹಾಕಿದ್ದ 3000 ಹಣ ಕೇಳಿದ್ದಕ್ಕೆ ಹಲ್ಲೆ ಮಾಡಿ ದೌರ್ಜನ್ಯ ಮಾಡಲಾಗಿದೆ ಎಂದು
ಆರೋಪಿಸಲಾಗಿತ್ತು. ಇನ್ನು ಘಟನೆಯಲ್ಲಿ ಗಾಯಗೊಂಡವರು ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಮಾಲೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ​

ಸಾಣೀಕೆರೆಯಲ್ಲಿ ಕಲಾವಿದ ಸಂತೋಷ ಹೃದಯಾಘಾತದಿಂದ ಸಾವು

ಚಿತ್ರದುರ್ಗ: ಹೃದಯಾಘಾತದಿಂದ ಕಲಾವಿದ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣೀಕೆರೆ ಗ್ರಾಮದಲ್ಲಿ ನಡೆದಿದೆ. ಸಾಣೀಕೆರೆ ಗ್ರಾಮದಲ್ಲಿ ಕಲಾವಿದ ಸಂತೋಷ್ (35) ಮೃತ ಕಲಾವಿದ. ನಾಟಕ ಪ್ರದರ್ಶನಕ್ಕೆ ಸಾಣೀಕೆರೆಗೆ ಆಗಮಿಸಿದ್ದರು. ದುರ್ಗಾಂಬಿಕಾ ಕೃಪಾ ಪೋಷಿತ ನಾಟಕ ಮಂಡಳಿಯ ಕಲಾವಿದ. ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದರು.

ಮೊದಲ ಸಲ ನಾಟಕ ಪ್ರದರ್ಶನ ಯಶಸ್ವಿಯಾಗಿ ಪೂರೈಸಿದ್ದರು. 2ನೇ ಬಾರಿ ನಾಟಕ ಪ್ರದರ್ಶನಕ್ಕೆ ಸಿದ್ಧಗೊಳ್ಳುವ ವೇಳೆ ಹೃದಯಾಘಾತದಿಂದ ಸಾವಾಗಿದೆ. ನಿನ್ನೆ ರಾತ್ರಿ ವೇಳೆ ಸಾಣೀಕೆರೆ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Mon, 11 March 24