AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ವ್ಯಕ್ತಿಯೊಬ್ಬ ಬುದ್ಧಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಯಾರೂ ಇಲ್ಲದಿರುವುದನ್ನು ಅರಿತ ಆರೋಪಿ ಮನೆಗೆ ನುಗ್ಗಿ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾನೆ.

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ
ಕ್ರೈಂ
Follow us
ನಯನಾ ರಾಜೀವ್
|

Updated on: Aug 02, 2024 | 8:42 AM

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಈ ಮೊದಲೇ ಆಕೆ ಬುದ್ಧಿಮಾದ್ಯಳು ಎಂಬುದನ್ನು ಅರಿತಿದ್ದ 50 ವರ್ಷದ ಆರೋಪಿ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಮನೆಗೆ ನುಗ್ಗಿದ್ದ ಆರೋಪಿ ಏನೂ ಅರಿಯದ ಮಹಿಳೆಗೆ ಹಿಂಸೆ ಕೊಟ್ಟಿದ್ದಲ್ಲೆ ಅತ್ಯಾಚಾರವೆಸಗಿದ್ದಾನೆ. ನಂತರ ಮಹಿಳೆಯ ಕುಟುಂಬದವರು ಮನೆಗೆ ಹಿಂದಿರುಗಿದಾಗ ಆಕೆಗೆ ರಕ್ತಸ್ರಾವವಾಗುತ್ತಿರುವುದನ್ನು ಗಮನಿಸಿದರು.

ಮಹಿಳೆ ತನಗೆ ತಿಳಿದ ಎಲ್ಲಾ ವಿಚಾರವನ್ನು ಕುಟುಂಬದವರ ಬಳಿ ಹೇಳಿಕೊಂಡಿದ್ದಾರೆ. ನಂತರ, ಪೊಲೀಸ್ ದೂರು ದಾಖಲಿಸಲಾಗಿದೆ, ಮತ್ತು ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಬಿಹಾರದ ನಳಂದದಲ್ಲಿ ವೈದ್ಯರ ಶವ ಪತ್ತೆ; ಹೊಡೆದು ಕೊಂದ ದುಷ್ಕರ್ಮಿಗಳು

ಇಂಥದ್ದೇ ಘಟನೆ ಮಂಗಳೂರಿನಲ್ಲಿ ನಡೆದಿತ್ತು 2023ರ ಏಪ್ರಿಲ್​ ತಿಂಗಳಲ್ಲಿ ವ್ಯಕ್ತಿಯೊಬ್ಬ ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ, ಸೂರಿಂಜೆ ನಿವಾಸಿ ರಾಜಾ ಭಟ್ ಎಂಬಾತ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈತ ಅತ್ಯಾಚಾರವೆಸಗಿದ್ದ, ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ ಬಳಿಕ ಆತ ಪರಾರಿಯಾಗಿದ್ದ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ