Crime News: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ ಕೊಂದ ಯುವಕ!

| Updated By: ಸುಷ್ಮಾ ಚಕ್ರೆ

Updated on: Oct 07, 2022 | 5:14 PM

ಯುವತಿಯನ್ನು ಮದುವೆಯಾಗಲು ಬಯಸಿದ್ದ ಅದೇ ಊರಿನ ವ್ಯಕ್ತಿ ಶುಕ್ರವಾರ ಬೆಳಿಗ್ಗೆ ಆಕೆಯ ಮನೆಗೆ ನುಗ್ಗಿ, ಆಕೆ ಮಲಗಿದ್ದಾಗ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

Crime News: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿ ಕೊಂದ ಯುವಕ!
ಸಾಂದರ್ಭಿಕ ಚಿತ್ರ
Follow us on

ಜಾರ್ಖಂಡ್: ಜಾರ್ಖಂಡ್‌ನ (Jharkhand) ದುಮ್ಕಾ ಜಿಲ್ಲೆಯಲ್ಲಿ 22 ವರ್ಷದ ಯುವತಿ ತನ್ನನ್ನು ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ಆಕೆಯನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಶುಕ್ರವಾರ ನಡೆದಿದೆ. ಬೆಂಕಿ (Fire) ಹಚ್ಚಿದ್ದರಿಂದ ಅರೆಬರೆ ಸುಟ್ಟುಹೋಗಿದ್ದ ಜರ್ಮುಂಡಿ ಪ್ರದೇಶದ ಭಾಲ್ಕಿ ಗ್ರಾಮದ ನಿವಾಸಿಯಾದ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಆದರೆ, ಆಕೆ ಸುಟ್ಟ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈಗಾಗಲೇ ಮದುವೆಯಾಗಿದ್ದ ಆರೋಪಿ ಆಕೆಯನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದ. ಆದರೆ, ಆಕೆ ಒಪ್ಪದಿದ್ದುದರಿಂದ ಹತಾಶೆಗೊಂಡು ಆಕೆಯನ್ನು ಕೊಲ್ಲಲು ಪ್ರಯತ್ನಿಸಿದ್ದ. ಆತನನ್ನು ಈಗ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಆ ಯುವತಿಯನ್ನು ಮದುವೆಯಾಗಲು ಬಯಸಿದ್ದ ಅದೇ ಊರಿನ ವ್ಯಕ್ತಿ ಶುಕ್ರವಾರ ಬೆಳಿಗ್ಗೆ ಆಕೆಯ ಮನೆಗೆ ನುಗ್ಗಿ, ಆಕೆ ಮಲಗಿದ್ದಾಗ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅವಳನ್ನು ತಕ್ಷಣ ಅವಳ ಕುಟುಂಬದ ಸದಸ್ಯರು ಫುಲೋ ಜಾನೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಆಕೆಗೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದಿದ್ದರಿಂದ ಆಕೆಯನ್ನು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಯಿತು. ಆದರೆ, ಆಕೆಯ ಜೀವ ಉಳಿಯಲಿಲ್ಲ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು

ಇದೇ ಜಿಲ್ಲೆಯ ಮತ್ತೊಬ್ಬ ಅಪ್ರಾಪ್ತ ಬಾಲಕಿಯನ್ನು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿ ಕೊಂದ ಕೆಲವೇ ವಾರಗಳ ಬಳಿಕ ಈ ಘಟನೆ ನಡೆದಿದೆ. ಆ ಹುಡುಗಿ ಕೆಲವು ದಿನಗಳ ನಂತರ ಸಾವನ್ನಪ್ಪಿದಳು. ಇದೀಗ ಮತ್ತೆ ಅದೇ ರೀತಿಯ ಘಟನೆ ನಡೆದಿದೆ.

ಕಳೆದ ತಿಂಗಳು 14 ವರ್ಷದ ಬುಡಕಟ್ಟು ಬಾಲಕಿಯೊಬ್ಬಳು ದುಮ್ಕಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ಮಾಡಿ ಕೊಂದಿದ್ದಾರೆ ಎಂದು ಆಕೆಯ ತಾಯಿ ಆರೋಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ