ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರ ನಿದ್ರೆಯಲ್ಲಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವತಿ

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಅಂಜಲಿ ಕುಮಾರ್(20) ಎಂದು ಗುರುತಿಸಲಾದ ಆರೋಪಿಯು ತನ್ನ 24 ವರ್ಷದ ಗೆಳೆಯ ಧರ್ಮೆನ್ ಓರಾನ್‌ ನಿದ್ದೆ ಮಾಡುತ್ತಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ.

ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯಕರ ನಿದ್ರೆಯಲ್ಲಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಯುವತಿ
ಸಾವು
Follow us
|

Updated on:Oct 24, 2023 | 9:57 AM

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಅಂಜಲಿ ಕುಮಾರ್(20) ಎಂದು ಗುರುತಿಸಲಾದ ಆರೋಪಿಯು ತನ್ನ 24 ವರ್ಷದ ಗೆಳೆಯ ಧರ್ಮೆನ್ ಓರಾನ್‌ ನಿದ್ದೆ ಮಾಡುತ್ತಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ.

ಜಾರ್ಖಂಡ್‌ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು ಸೋಮವಾರ ಬಂಧಿಸಲಾಗಿದ್ದು, ಆಕೆಯ ರಕ್ತದ ಕಲೆಯುಳ್ಳ ಬಟ್ಟೆ ಮತ್ತು ಕೊಲೆಗೆ ಬಳಸಿದ ಕೊಡಲಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಸುರ್ಜೀತ್ ಕುಮಾರ್ ತಿಳಿಸಿದ್ದಾರೆ.

ಪಿಟಿಐ ವರದಿಯ ಪ್ರಕಾರ , ಅಂಜಲಿಯು ಧರ್ಮನ್ ಜೊತೆ ಸಂಬಂಧ ಹೊಂದಿದ್ದಳು ಮತ್ತು ಆತನನ್ನು ಮದುವೆಯಾಗಲು ಬಯಸಿದ್ದಳು. ಆದರೂ ಆತ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದ. ನಂತರ ಜಿಗುಪ್ಸೆಗೊಂಡ ಅಂಜಲಿ ಕೊಲೆಗೆ ಯೋಜನೆ ರೂಪಿಸಿ ಧರ್ಮನ್‌ನನ್ನು ಶನಿವಾರ ಪೊದೆಗಳಿಂದ ಆವೃತವಾದ ಏಕಾಂತ ಸ್ಥಳಕ್ಕೆ ಕರೆಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪ್ರೀತಿಸಿ ಮದುವೆಯಾದವನಿಂದಲೇ ಮಹಿಳಾ ಪೊಲೀಸ್ ಕೊಲೆ; ಸಿಂಧೂರವನ್ನು ಅಳಿಸಿ, ಶವ ಬೆತ್ತಲೆಗೊಳಿಸಿದ ಗಂಡ!

ಸ್ವಲ್ಪ ಹೊತ್ತು ಮಾತನಾಡಿದ ನಂತರ ಧರ್ಮೇನ್ ನೆಲದ ಮೇಲೆ ಮಲಗಿದ್ದ ಅದೇ ಸಂದರ್ಭದಲ್ಲಿ ಅಂಜಲಿ ಅಲ್ಲೇ ಇದ್ದ ಕೊಡಲಿಯಿಂದ ಧರ್ಮನ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ.

ಕೊಲೆ ಮಾಡಿದ ಬಳಿಕ ಅಂಜಲಿ ಶವವನ್ನು ಪೊದೆಯಲ್ಲಿ ಬಚ್ಚಿಟ್ಟು ಸ್ಥಳದಿಂದ ತೆರಳಿದ್ದಳು. ಭಾನುವಾರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. 48 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ, ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:57 am, Tue, 24 October 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು