Jharkhand: ಅತ್ಯಾಚಾರ ಯತ್ನ, ಒಲ್ಲೆ ಎಂದಿದ್ದಕ್ಕೆ ಕೋಪಗೊಂಡು ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ

| Updated By: ನಯನಾ ರಾಜೀವ್

Updated on: Jan 23, 2023 | 8:23 AM

ಅತ್ಯಾಚಾರ ಯತ್ನ ಸಫಲವಾಗಿಲ್ಲ ಎಂದು ಮಹಿಳೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿತ್ತು. ಇದೀಗ ಘಟನೆ ನಡೆದು ಒಂದು ತಿಂಗಳ ಬಳಿಕ ಮಹಿಳೆಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

Jharkhand: ಅತ್ಯಾಚಾರ ಯತ್ನ, ಒಲ್ಲೆ ಎಂದಿದ್ದಕ್ಕೆ ಕೋಪಗೊಂಡು ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ
ಪೊಲೀಸ್
Image Credit source: Istockphoto.com
Follow us on

ಅತ್ಯಾಚಾರ ಯತ್ನ ಸಫಲವಾಗಿಲ್ಲ ಎಂದು ಮಹಿಳೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿತ್ತು. ಇದೀಗ ಘಟನೆ ನಡೆದು ಒಂದು ತಿಂಗಳ ಬಳಿಕ ಮಹಿಳೆಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಜನವರಿ 7 ರಂದು ಹಜಾರಿಬಾಗ್​ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯು ಶೇ.70ರಷ್ಟು ಸುಟ್ಟುಹೋಗಿದ್ದಳು. ಅತ್ಯಾಚಾರ ಯತ್ನವನ್ನು ವಿರೋಧಿಸಿದ್ದಕ್ಕಾಗಿ ನಾಲ್ವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.
ಈ ಆರೋಪಿಗಳಲ್ಲಿ ಮೂವರು ಆಕೆಯ ಸಂಬಂಧಿಕರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (RIMS) ಚಿಕಿತ್ಸೆ ನೀಡಲಾಗುತ್ತಿತ್ತು.

ಹಜಾರಿಬಾಗ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಮನೋಜ್ ರತನ್ ಚೋಥೆ ಅವರು ಭಾನುವಾರ ಬೆಳಿಗ್ಗೆ ಮಹಿಳೆ RIMS ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಹಜಾರಿಬಾಗ್ ಪೊಲೀಸರು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದರು. ಆದರೆ, ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ತನಿಖೆ ಮುಂದುವರಿದಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್​ಪಿ ತಿಳಿಸಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಆರೋಪಿಗಳಲ್ಲದೆ, ಘಟನೆಯಲ್ಲಿ ಸಂತ್ರಸ್ತೆಯ ಪತಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ನಾಲ್ವರು ಆರೋಪಿಗಳಲ್ಲಿ ಮೂವರು ಸಂಬಂಧಿಕರು ಸಹ ಸೇರಿದ್ದಾರೆ ಎಂದು ಎಸ್‌ಪಿ ಹೇಳಿದರು, ಸಹಾಯಕ್ಕಾಗಿ ಕೂಗಿದಾಗ ನೆರೆಹೊರೆಯವರು ತನ್ನನ್ನು ರಕ್ಷಿಸಿದರು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಳು. ಆದರೆ ಪತಿ ತನ್ನನ್ನು ರಕ್ಷಿಸಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಪತಿಗೆ ಈಗಾಗಲೇ ಮದುವೆಯಾಗಿದ್ದು, ಸಂತ್ರಸ್ತೆ ಆತನ ನಾಲ್ಕನೇ ಪತ್ನಿ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬ ಮಹಿಳೆ ಮತ್ತು ಅವಳು ಸಂತ್ರಸ್ತೆಯ ಸೊಸೆಯಾಗಿರುವುದರಿಂದ ಅತ್ಯಾಚಾರಕ್ಕೆ ಯತ್ನಿಸಿದ ಮಹಿಳೆಯ ಆರೋಪದ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅತ್ತಿಗೆಯ ಪುತ್ರರೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಆರೋಪಿ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ
ಪೊಲೀಸ್ ಪ್ರಕರಣದ ತನಿಖೆ ನಡೆಸುತ್ತಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅನುಜ್ ಓರಾನ್ ಮಾತನಾಡಿ, ಎಫ್‌ಐಆರ್‌ನಲ್ಲಿ ಸಂತ್ರಸ್ತೆ ಮಾಡಿರುವ ಆರೋಪಗಳು ನಮ್ಮ ಪ್ರಾಥಮಿಕ ತನಿಖೆಗೆ ಹೊಂದಿಕೆಯಾಗುವುದಿಲ್ಲ.

ಆರೋಪಿಗಳ ವಿರುದ್ಧ ನಮಗೆ ಇದುವರೆಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಗಾಗಿ ಕಾಯುತ್ತಿದ್ದೇವೆ ಎಂದರು. ಇದೇ ವೇಳೆ ಸಂತ್ರಸ್ತೆಯ ಕುಟುಂಬಸ್ಥರು ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ