ಕಲಬುರಗಿ: ರೈತ ಮಹಿಳೆಯ ಬರ್ಬರ ಕೊಲೆ; ಅತ್ಯಾಚಾರ ಮಾಡಿ, ಹತ್ಯೆ ಮಾಡಿರುವ ಶಂಕೆ

ಗ್ರಾಮೀಣ ಭಾಗದಲ್ಲಿ ಇಂದಿಗೂ ಮಹಿಳೆಯರು ಮನೆ ಕೆಲಸದ ಜೊತೆೆ ಕೃಷಿ ಕೆಲಸವನ್ನು ಕೂಡ ಮಾಡುತ್ತಾರೆ. ಅದೇ ರೀತಿ ನಿನ್ನೆ(ಮಾ.19) ಮುಂಜಾನೆ ಮಹಿಳೆಯೋರ್ವಳು ತನ್ನದೇ ಕೃಷಿ ಜಮೀನಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆಯಾದರೂ ಕೂಡಾ ಬಾರದೇ ಇದ್ದಾಗ ಕುಟುಂಬದವರು ಜಮೀನಿಗೆ ಹೋಗಿ ನೋಡಿದಾಗ ಶಾಕ್ ಆಗಿದ್ದರು. ಕೃಷಿ ಜಮೀನಿನಲ್ಲಿಯೇ ಮಹಿಳೆ ಬರ್ಬರವಾಗಿ ಕೊಲೆಯಾಗಿದ್ದಾಳೆ.

ಕಲಬುರಗಿ: ರೈತ ಮಹಿಳೆಯ ಬರ್ಬರ ಕೊಲೆ; ಅತ್ಯಾಚಾರ ಮಾಡಿ, ಹತ್ಯೆ ಮಾಡಿರುವ ಶಂಕೆ
ಮೃತ ಮಹಿಳೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 21, 2023 | 1:57 PM

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಹರನಾಳ ಬಿ ಗ್ರಾಮದ ನಲವತ್ತೈದು ವರ್ಷದ ಅನಸೂಯಾ ಎನ್ನುವ ಮಹಿಳೆಯ ಬರ್ಬರ ಕೊಲೆಯಾಗಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ಅನಸೂಯಾ, ಪ್ರತಿ ದಿನ ತನ್ನ ಸಹೋದರಿ ಜೊತೆಗೆ ಸೇರಿಕೊಂಡು ಕೃಷಿ ಜಮೀನಿಗೆ ಹೋಗುತ್ತಿದ್ದಳು. ಜಮೀನಿನಲ್ಲಿ ಕೆಲಸ ಮುಗಿಸಿ, ನಂತರ ಸಂಜೆ ಮನೆಗೆ ಬರುತ್ತಿದ್ದಳು. ಪ್ರತಿದಿನ ಸಹೋದರಿ ಜೊತೆಗೆ ಹೊಲಕ್ಕೆ ಹೋಗಿ ಬರುತ್ತಿದ್ದ ಅನಸೂಯಾ, ನಿನ್ನೆ(ಮಾ.19) ಸಹೋದರಿ ಮನೆಯಲ್ಲಿದ್ದು ತಾಯಿಯ ಆರೈಕೆ ಕೆಲಸ ಮಾಡಿದ್ರೆ, ಇತ್ತ ಅನಸೂಯಾ ಮುಂಜಾನೆ 10 ಗಂಟೆಗೆ ಜಮೀನಿಗೆ ಹೋಗಿದ್ದಳು. ಆದರೆ ಎಂದಿನಂತೆ ಸಂಜೆ ಆರು ಗಂಟೆಗೆ ಬರಬೇಕಾದ ಅನಸೂಯ, ಸಮಯ ಆದರೂ ಮರಳಿ ಮನೆಗೆ ಬಾರದ ಇದ್ದಾಗ ಕುಟುಂಬದವರು ಆತಂಕಗೊಂಡಿದ್ದಾರೆ. ಅನಸೂಯಾಳ ಸಹೋದರಿಯ ಪುತ್ರ ಜಮೀನಿಗೆ ಹೋಗಿ ನೋಡಿದಾಗ ಅನಸೂಯ ಮಲಗಿದ ಸ್ಥಿತಿಯಲ್ಲಿದ್ದಿದ್ದನ್ನು ನೋಡಿ, ಆಕೆ ಮಲಗಿರಬಹುದು ಎಂದು ಎಬ್ಬಿಸಲು ಹೋದಾಗ ಗೊತ್ತಾಗಿದೆ ಅನಸೂಯಾಳ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿ ಬರ್ಬರವಾಗಿ ಕೊಲೆ ಮಾಡಿದ್ದಾನೆಂದು.

ಅನಸೂಯಾ ಇಪ್ಪತ್ತು ವರ್ಷದ ಹಿಂದೆ ವಿಜಯಪುರ ಮೂಲದ ವ್ಯಕ್ತಿ ಜೊತೆ ವಿವಾಹವಾಗಿತ್ತು. ಆದರೆ ಕೌಟುಂಬಿಕ ಕಲಹದಿಂದ ಅನಸೂಯಾ ಅನೇಕ ವರ್ಷಗಳ ಹಿಂದೆಯೇ ಗಂಡನ ಮನೆ ಬಿಟ್ಟು ಬಂದು ತಾಯಿಯ ತವರು ಮನೆಯಲ್ಲಿಯೇ ಇದ್ದಳು. ಮಕ್ಕಳು ಕೂಡ ಇಲ್ಲ. ಹೀಗಾಗಿ ತಾಯಿ, ಸಹೋದರ, ಸಹೋದರಿಯರ ಜೊತೆಗೆ ವಾಸವಾಗಿದ್ದಳು. ಪ್ರತಿನಿತ್ಯ ಮುಂಜಾನೆ ಜಮೀನಿಗೆ ಹೋಗಿ ಕೃಷಿ ಕೆಲಸ ಮಾಡಿ ಬರ್ತಿದ್ದಳು. ಆದರೆ ನಿನ್ನೆ(ಮಾ.19) ಬರ್ಬರವಾಗಿ ಕೊಲೆಯಾಗಿದ್ದಾಳೆ.

ಇದನ್ನೂ ಓದಿ:ಚಿತ್ರದುರ್ಗ: ಕೆರೆಯಲ್ಲಿ ಯುವಕನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​; ಗೆಳೆಯರೇ ಸೇರಿ ಕೊಲೆ ಮಾಡಿದ್ದಾರೆಂದು ಆರೋಪ

ಇನ್ನು ಅನಸೂಯಾಳ ಮೇಲಿದ್ದ ಬಟ್ಟೆಗಳು ಅಸ್ಥವ್ಯಸ್ಥವಾಗಿದ್ದರಿಂದ ಮತ್ತು ಆಕೆಯ ಕಿವಿಯಲ್ಲಿದ್ದ ಓಲೆಯೊಂದು ಕೂಡ ಇರದೇ ಇರೋದರಿಂದ ಯಾರಾದರು ಅತ್ಯಾಚಾರ ಮಾಡಿ ಕೊಲೆ ಮಾಡಿದ್ರಾ ಅಥವಾ ಚಿನ್ನಾಭರಣಕ್ಕಾಗಿ ಕೊಲೆ ಮಾಡಿದ್ದಾರಾ ಎನ್ನುವ ಅನುಮಾನ ಮೂಡಿದೆ. ಯಾಕಂದರೆ ಗ್ರಾಮದಲ್ಲಿ ಯಾರ ಜೊತೆ ಕೂಡ ಅನಸೂಯಾ ಮತ್ತು ಅವರ ಕುಟುಂಬದವರು ವೈಷಮ್ಯವನ್ನು ಹೊಂದಿರಲಿಲ್ಲವಂತೆ. ಯಾರ ಜೊತೆ ಜಗಳವೂ ಆಗಿರಲಿಲ್ಲ. ಆದರೆ ಬರ್ಬರವಾಗಿ ಕೊಲೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದಡೆ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣ, ಕೊಲೆ ಮಾಡಿದವರು ಯಾರು ಎನ್ನುವುದರ ಬಗ್ಗೆ ತನಿಖೆ ಕೂಡ ನಡೆಸುತ್ತಿದ್ದಾರೆ. ಇದರ ಜೊತೆಗೆ ಅನಸೂಯಾಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆಯಾ ಎನ್ನುವ ಬಗ್ಗೆ ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ. ಆದರೆ ಕೃಷಿ ಜಮೀನಿಗೆ ಹೋದಾಗ ಮಹಿಳೆಯ ಬರ್ಬರ ಕೊಲೆಯಾಗಿರುವುದು ಗ್ರಾಮೀಣ ಭಾಗದ ಮಹಿಳೆಯರಲ್ಲಿ ಆತಂಕ ಸೃಷ್ಟಿಮಾಡಿದೆ. ಹೀಗಾಗಿ ಪೊಲೀಸರು ಆರೋಪಿಗಳ ಬಂಧಿಸುವ ಕೆಲಸ ಮಾಡುವುದರ ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸವನ್ನು ಕೂಡ ಮಾಡಬೇಕಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:53 pm, Tue, 21 March 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್