AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ.

ಕಲಬುರಗಿ: ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
ಮೃತ ಬಿಜೆಪಿ ಕಾರ್ಯಕರ್ತ
ವಿವೇಕ ಬಿರಾದಾರ
|

Updated on:May 11, 2023 | 1:42 PM

Share

ಕಲಬುರಗಿ: ಜಿಲ್ಲೆಯ ಚಿಂಚೋಳಿ (Chincholi) ತಾಲೂಕಿನ ಸಲಗರ ಬಸಂತಪುರ ಗ್ರಾಮದ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದೆ. ಸಲಗರ ಬಸಂತಪುರ ಗ್ರಾಮದ ರಾಮು ರಾಠೋಡ್(45) ಮೃತ ದುರ್ದೈವಿ. ರಾಮು ನಿನ್ನೆ (ಮೇ.10) ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಪೋಲಿಂಗ್ ಬೂತ್ (Polling Booth) ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ. ಇಂದು (ಮೇ.11) ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ರಾಮು ಅವರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಕುಟುಂಬದಸ್ಥರು ಆರೋಪ ಮಾಡಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಪ್ರಿಯಕರನಿಂದ ಹಲ್ಲೆ

ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿನಯ್ ಕುಮಾರ್ (25) ಕೊಲೆ ಆರೋಪಿ. ಬಾಲಕಿ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಿದ್ದಾನೆ. ಕೂಡಲೇ ಬಾಲಕಿಯನ್ನ ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಾಲಕಿ ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೊದಲ ಬಾರಿಗೆ ಋತುಮತಿಯಾದ ತಂಗಿ, ರಕ್ತ ನೋಡಿ ತಪ್ಪು ತಿಳಿದು ಥಳಿಸಿ ಹತ್ಯೆ ಮಾಡಿದ ಅಣ್ಣ

ಬೆಳ್ಳಂ‌ ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳ್ಳಂ‌ ಬೆಳಗ್ಗೆ ಕಾರು ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ ಸಂಭವಿಸಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ತಾಲೂಕಿನ ರಾಜಾನುಕುಂಟೆ ಕಾಕೋಳು ರಸ್ತೆಯ ಚಲ್ಲಹಳ್ಳಿ ಬಳಿ ನಡೆದಿದೆ. ಚಲ್ಲಹಳ್ಳಿ ಗ್ರಾಮದ ರಾಮಯ್ಯ (39) ನಾಗರಾಜ್ (42) ಮೃತ ದುರ್ದೈವಿಗಳು. ಇನ್ನು ಅಪಘಾತದ ರಬಸಕ್ಕೆ ಬೈಕ್ ಮತ್ತು ಕಾರಿನ ಮುಂಬಾಗ ಜಖಂ ಆಗಿದ್ದು, ರಸ್ತೆಯಿಂದ ನೂರು ಮೀಟರ್ ದೂರದಲ್ಲಿ ಬಿದ್ದಿದೆ.

ಕಾರು ಟಿಟಿ ವಾಹನ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಕಾರು, ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು.

ಹೊನ್ನಾವರದಿಂದ ಸಂಬಂಧಿಕರ ಮದುವೆ ನಿಮಿತ್ತ ಗಿರಿಧರ್ ಕುಟುಂಬ ತೆರಳುವಾಗ, ಎದುರುಗಡೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಟಿಟಿ ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Thu, 11 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ