ಕಲಬುರಗಿ: ಸಿಲಿಂಡರ್​ ಸ್ಫೋಟ: ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ‌ ಇಟಗಾ ಗ್ರಾಮದಲ್ಲಿ ಸಿಲಿಂಡರ್​ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌ಗಳಾಗಿರುವಂತಹ ಘಟನೆ ನಡೆದಿದೆ. ಖಾಸಗಿ ಆಸ್ಪತ್ರೆಗೆ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್​ ಭೇಟಿ ನೀಡಿದ್ದು, ಗಾಯಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಗಾಯಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಆಸ್ಪತ್ರೆ ಆಡಳಿತ ಮಂಡಳಿಗೆ ಹೇಳಿದ್ದಾರೆ. 

ಕಲಬುರಗಿ: ಸಿಲಿಂಡರ್​ ಸ್ಫೋಟ: ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌
ಸಿಲಿಂಡರ್​ ಸ್ಫೋಟ
Edited By:

Updated on: Jan 27, 2024 | 4:21 PM

ಕಲಬುರಗಿ, ಜನವರಿ 27: ಸಿಲಿಂಡರ್​ ಸ್ಫೋಟ (Cylinder explosion) ಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ‌ಗಳಾಗಿರುವಂತಹ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ‌ ಇಟಗಾ ಗ್ರಾಮದಲ್ಲಿ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ತಾಯಿ‌ ಮಕ್ಕಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೇವಸ್ಥಾನದಲ್ಲಿ ಹಚ್ಚಿದ ದೀಪದಿಂದ ಸಿಲಿಂಡರ್ ಸ್ಫೋಟಗೊಂಡಿದೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದುರಂತ ಹಿನ್ನೆಲೆ ಕಲಬುರಗಿ ಖಾಸಗಿ ಆಸ್ಪತ್ರೆಗೆ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್​ ಭೇಟಿ ನೀಡಿದ್ದು, ಗಾಯಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಗಾಯಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಆಸ್ಪತ್ರೆ ಆಡಳಿತ ಮಂಡಳಿಗೆ ಅಜಯ್ ಸಿಂಗ್ ಹೇಳಿದ್ದಾರೆ.

KSRTC ಬಸ್​ ಡಿಕ್ಕಿ: ಟಾಟಾಏಸ್​ ಚಾಲಕ ಸಾವು, 7 ಜನರಿಗೆ ಗಾಯ

ಚಾಮರಾಜನಗರ: ಕೆಎಸ್ಆರ್​ಟಿಸಿ ಬಸ್ ಮತ್ತು ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ಚಾಲಕ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಬಳಿ ಘಟನೆ ನಡೆದಿದೆ. ಹಂಗಳ ಗ್ರಾಮದಿಂದ ಚಿಕ್ಕಲ್ಲೂರು ಜಾತ್ರೆಗೆ ಟಾಟಾ ಏಸ್​ನಲ್ಲಿದ್ದ ಜನರು ತೆರಳುತ್ತಿದ್ದರು.

ಇದನ್ನು ಓದಿ: ಕೊರೊನಾದಿಂದ ಕೆಲಸ ಕಳಕೊಂಡ ಇಂಜಿನಿಯರ್ ಮೈಸೂರಿನಲ್ಲಿ ಅದ್ಭುತ ನಕಲಿ ನೋಟು ತಯಾರಿಸುತ್ತಿದ್ದ; ಹರಿಹರ ಪೊಲೀಸರಿಗೆ ಸಿಕ್ಕಿಬಿದ್ದ!

ಚಾಮರಾಜನಗರದಿಂದ ಗುಂಡ್ಲುಪೇಟೆಗೆ ಕೆಎಸ್ಆರ್​ಟಿಸಿ ಬಸ್ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಮಹಿಳೆಯರು ಸೇರಿದಂತೆ ಏಳು ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತೆರಕಣಾಂಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೈಕ್​ಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಬಸ್: ಚಾಲಕ, ಇಬ್ಬರು ಪ್ರಯಾಣಿಕರಿಗೆ ಗಾಯ

ವಿಜಯಪುರ: ರಸ್ತೆಯಲ್ಲಿ ಅಡ್ಡ ಬಂದ ಬೈಕ್​​ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಸರ್ಕಾರಿ ಬಸ್ ಪಲ್ಟಿಯಾಗಿರುವಂತಹ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಕ್ರಾಸ್ ಬಳಿ ನಡೆದಿದೆ. ಬಸ್ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಜಮಖಂಡಿಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ ಟಚ್​ ಆಗಿ ಬೈಕ್​ನಿಂದ ಬಿದ್ದಿದ್ದ ಸವಾರನ ಮೇಲೆ ಹರಿದ ಬಸ್

ಕಲಬುರಗಿ: ಆಟೋ ಟಚ್​ ಆಗಿ ಬೈಕ್​ನಿಂದ ಬಿದ್ದಿದ್ದ ಸವಾರನ ಮೇಲೆ KSRTC ಬಸ್ ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ನಗರದ ಹುಮನಾಬಾದ್ ರಸ್ತೆಯಲ್ಲಿ ನಡೆದಿದೆ. ಸೋಮಶೇಖರ್(34) ಮೃತ ಬೈಕ್​ ಸವಾರ.

ದಾಲ್‌ಮೀಲ್‌ನಲ್ಲಿ ಕೆಲಸ ಮುಗಿಸಿ ಹೊರಟಿದ್ದಾಗ ದುರಂತ ಸಂಭವಿಸಿದೆ. ಬೀದರ್ ಕಡೆಯಿಂದ ಕಲಬುರಗಿ ಕಡೆಗೆ KSRTC ಬಸ್ ಬರುತ್ತಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us