ಕಲಬುರಗಿ: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನನ್ನ ಕೊಂದ ಮೊಮ್ಮಗ

ಕಲಬುರಗಿ(Kalaburagi) ತಾಲೂಕಿನ ಜವಳಗಾ ಬಿ ಗ್ರಾಮದಲ್ಲಿ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನಲೆ ಅಜ್ಜನನ್ನೇ ಮೊಮ್ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಕಲಬುರಗಿ: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನನ್ನ ಕೊಂದ ಮೊಮ್ಮಗ
ಕೊಲೆಯಾದ ಅಜ್ಜ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 28, 2023 | 2:47 PM

ಕಲಬುರಗಿ, ನ.28: ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನಲೆ ಅಜ್ಜನನ್ನೇ ಮೊಮ್ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ(Kalaburagi) ತಾಲೂಕಿನ ಜವಳಗಾ ಬಿ ಗ್ರಾಮದಲ್ಲಿ ನಡೆದಿದೆ. ಸಿದ್ರಾಮಪ್ಪ ಕಾಮನ್ (75) ಕೊಲೆಯಾದ ರ್ದುದೈವಿ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಆಕಾಶ್ ಕಾಮನ್ (22) ಎಂಬಾತನನ್ನು ಬಂಧಿಸಲಾಗಿದೆ.

ಘಟನೆ ವಿವರ

ನಿನ್ನೆ(ನ.27) ಸಿದ್ರಾಮಪಪ್ಪ ಸಹೋದರಿ ಸಾವನ್ನಪ್ಪಿದ ಹಿನ್ನಲೆ ಸಿದ್ರಾಮಪಪ್ಪ ಕುಟುಂಬ ಮತ್ತು ಸರೋಜಾ ಕುಟುಂಬ ಕಲಬುರಗಿ ತಾಲ್ಲೂಕಿನ ಕುಮಿಸಿ ಗ್ರಾಮಕ್ಕೆ ತೆರಳಿದ್ದರು. ಕ್ರೂಸರ್ ವಾಹನದಲ್ಲಿ ವಾಪಸ್ ಬರುವಾಗ ಸರೋಜಾ ಅವರು ಸಿದ್ರಾಮಪಪ್ಪನಿಗೆ ಗಾಡಿಯ ಮೇಲೆ ಕೂರುವಂತೆ ಹೇಳಿದ್ದರು. ವಯಸ್ಸಾದವನಿಗೆ ಗಾಡಿಯ ಮೇಲೆ ಕೂರುವಂತೆ ಹೇಳಿದಕ್ಕೆ ಸಿದ್ರಾಮಪ್ಪ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಈ ವಿಷಯವನ್ನು ಸರೋಜಾ ತನ್ನ ಮಗನಿಗೆ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಮಗ ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರುಣ ಘಟನೆ ನಡೆದಿದೆ.

ಇದನ್ನೂ ಓದಿ:ಶಾಲೆ ರಜೆ ಸಲುವಾಗಿ ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ; ಮೂವರು ಅಸ್ವಸ್ಥ

ಬೈಕ್​ನಿಂದ ಬಿದ್ದ ಮಹಿಳೆ‌ಯ ಮೇಲೆ ಹರಿದ ಸಿಲಿಂಡರ್ ಲಾರಿ; ಸ್ಥಳದಲ್ಲೇ ಸಾವು

ಬಳ್ಳಾರಿ: ಬೈಕ್​ನಿಂದ ಬಿದ್ದ ಮಹಿಳೆ‌ಯ ಮೇಲೆ ಸಿಲಿಂಡರ್ ಲಾರಿ ಹರಿದು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಕೋರ್ಟ್​ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಿಂಗಮ್ಮ(52) ಮೃತ ರ್ದುದೈವಿ. ಸಿರುಗುಪ್ಪಗೆ ತಾಲೂಕು ಕಚೇರಿಗೆ ದಂಪತಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಆಯಾತಪ್ಪಿ ​ಕೆಳಗೆ ಬಿದ್ದಿದ್ದಾರೆ. ವೇಳೆ ಹಿಂಬದಿಯಿಂದ ಬಂದ ಸಿಲಿಂಡರ್ ಲಾರಿ,  ಮಹಿಳೆಯ ತಲೆಯ ಮೇಲೆ ಹರಿದಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us