AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ತಲೆ ಮರೆಸಿಕೊಂಡಿದ್ದ ಆರೋಪಿ 13 ವರ್ಷಗಳ ಬಳಿಕ ಬಂಧನ

ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ 2011ರ ಏಪ್ರಿಲ್‌ 13ರಂದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ 27 ಜನ ಆರೋಪಿಗಳು ಸೇರಿಕೊಂಡು ಇಬ್ಬರನ್ನು ಕೊಲೆ ಮಾಡಿದ್ದರು. ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿದ್ದ ಶರಣಪ್ಪ ಮೊಗಲಪ್ಪ ಎಂಬಾತನನ್ನು ತಲೆಮರೆಸಿಕೊಂಡಿದ್ದ. ಇದೀಗ ಬರೊಬ್ಬರಿ 13 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ: ತಲೆ ಮರೆಸಿಕೊಂಡಿದ್ದ ಆರೋಪಿ 13 ವರ್ಷಗಳ ಬಳಿಕ ಬಂಧನ
ಬಂಧಿತ ಆರೋಪಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Mar 01, 2024 | 4:30 PM

Share

ಕಲಬುರಗಿ, ಮಾ.01: ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶರಣಪ್ಪ ಮೊಗಲಪ್ಪ ಎಂಬಾತನನ್ನು ಸೇಡಂ ತಾಲೂಕಿನ ಮುಧೋಳ(Mudhol) ಠಾಣೆಯ ಪೊಲೀಸರು 13 ವರ್ಷಗಳ ಬಳಿಕ ಬಂಧಿಸಿದ್ದಾರೆ. ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ 2011ರ ಏಪ್ರಿಲ್‌ 13ರಂದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ 27 ಜನ ಆರೋಪಿಗಳು ಸೇರಿಕೊಂಡು ಲಕ್ಷ್ಮಪ್ಪ ಚಿನ್ನಯ್ಯ ಮತ್ತು ನರಸಪ್ಪ ಚಿನ್ನಯ್ಯ ಅವರನ್ನು ಕೊಲೆ ಮಾಡಿದ್ದರು.

ಈ ಪ್ರಕರಣದಲ್ಲಿ 27 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ 27 ಆರೋಪಿಗಳ ಪೈಕಿ ಆರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಲಾಗಿತ್ತು. ಉಳಿದವರ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ, ಪ್ರಕರಣ ನಡೆದ ದಿನದಿಂದ ಶರಣಪ್ಪ ತಲೆ ಮರೆಸಿಕೊಂಡಿದ್ದ. ಕೊನೆಗೂ ಆತನ ಪತ್ತೆಗೆ ತಂಡ ರಚಿಸಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಗೋಲ್ ಗುಂಬಜ್ ಎಕ್ಸ್‌ಪ್ರೆಸ್​ನಲ್ಲಿ ಕಾನ್ಸ್​​ಟೇಬಲ್​ಗೆ ಚೂರಿ ಇರಿತ: ಆರು ಮಂದಿಯ ಬಂಧನ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರಿನಲ್ಲಿ ಕಿಡಿಗೇಡಿಗಳು ರಾಗಿ ಹುಲ್ಲಿನ ಬಣವೆಗೆ ಬೆಂಕಿ ಹಚ್ಚಿದ ಘಟನೆಗೆ ನಡೆದಿದೆ. ರೈತ ಭೈಲಪ್ಪ ಅವರಿಗೆ ಸೇರಿದ ಎರಡು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಹುಲ್ಲಿನ ಬಣವೆ ಇದಾಗಿದ್ದು, ರೈತನಿಗೆ ತಲೆನೋವಾಗಿ ಪರಿಣಮಿಸಿದೆ. ಮೂಕ ಪ್ರಾಣಿಗಳು ತಿನ್ನುವ ಆಹಾರಕ್ಕೂ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ದುರಂತವಾಗಿದೆ. ಇನ್ನು ನೋಡ ನೋಡುತ್ತಿದ್ದಂತೆ ಬಣವೆ ಸುಟ್ಟು ಭಸ್ಮವಾಗಿದೆ. ಈ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Fri, 1 March 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ