ಕಲಬುರಗಿ, ಮಾ.01: ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶರಣಪ್ಪ ಮೊಗಲಪ್ಪ ಎಂಬಾತನನ್ನು ಸೇಡಂ ತಾಲೂಕಿನ ಮುಧೋಳ(Mudhol) ಠಾಣೆಯ ಪೊಲೀಸರು 13 ವರ್ಷಗಳ ಬಳಿಕ ಬಂಧಿಸಿದ್ದಾರೆ. ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ 2011ರ ಏಪ್ರಿಲ್ 13ರಂದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ 27 ಜನ ಆರೋಪಿಗಳು ಸೇರಿಕೊಂಡು ಲಕ್ಷ್ಮಪ್ಪ ಚಿನ್ನಯ್ಯ ಮತ್ತು ನರಸಪ್ಪ ಚಿನ್ನಯ್ಯ ಅವರನ್ನು ಕೊಲೆ ಮಾಡಿದ್ದರು.
ಈ ಪ್ರಕರಣದಲ್ಲಿ 27 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ 27 ಆರೋಪಿಗಳ ಪೈಕಿ ಆರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಮೂವರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಲಾಗಿತ್ತು. ಉಳಿದವರ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ, ಪ್ರಕರಣ ನಡೆದ ದಿನದಿಂದ ಶರಣಪ್ಪ ತಲೆ ಮರೆಸಿಕೊಂಡಿದ್ದ. ಕೊನೆಗೂ ಆತನ ಪತ್ತೆಗೆ ತಂಡ ರಚಿಸಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಗೋಲ್ ಗುಂಬಜ್ ಎಕ್ಸ್ಪ್ರೆಸ್ನಲ್ಲಿ ಕಾನ್ಸ್ಟೇಬಲ್ಗೆ ಚೂರಿ ಇರಿತ: ಆರು ಮಂದಿಯ ಬಂಧನ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಕೆರೆಕತ್ತಿಗನೂರಿನಲ್ಲಿ ಕಿಡಿಗೇಡಿಗಳು ರಾಗಿ ಹುಲ್ಲಿನ ಬಣವೆಗೆ ಬೆಂಕಿ ಹಚ್ಚಿದ ಘಟನೆಗೆ ನಡೆದಿದೆ. ರೈತ ಭೈಲಪ್ಪ ಅವರಿಗೆ ಸೇರಿದ ಎರಡು ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಹುಲ್ಲಿನ ಬಣವೆ ಇದಾಗಿದ್ದು, ರೈತನಿಗೆ ತಲೆನೋವಾಗಿ ಪರಿಣಮಿಸಿದೆ. ಮೂಕ ಪ್ರಾಣಿಗಳು ತಿನ್ನುವ ಆಹಾರಕ್ಕೂ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ದುರಂತವಾಗಿದೆ. ಇನ್ನು ನೋಡ ನೋಡುತ್ತಿದ್ದಂತೆ ಬಣವೆ ಸುಟ್ಟು ಭಸ್ಮವಾಗಿದೆ. ಈ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:23 pm, Fri, 1 March 24