ಕಲಬುರಗಿ: ಬೆಂಗಳೂರಿಗೆ ಗನ್​​ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೋಲಿಸರ ಫೈರಿಂಗ್​

ಕಳೆದ ಶುಕ್ರವಾರ (ಸೆ.13) ರಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಕಲಬುರಗಿ: ಬೆಂಗಳೂರಿಗೆ ಗನ್​​ ಸಪ್ಲೈ ಮಾಡುತ್ತಿದ್ದ ಕೊಲೆ ಆರೋಪಿ ಮೇಲೆ ಪೋಲಿಸರ ಫೈರಿಂಗ್​
ಆರೋಪಿ ಲಕ್ಷ್ಮಣ
Follow us
| Updated By: ವಿವೇಕ ಬಿರಾದಾರ

Updated on:Sep 21, 2024 | 9:57 AM

ಕಲಬುರಗಿ, ಸೆಪ್ಟೆಂಬರ್​ 21: ಕಳೆದ ಶುಕ್ರವಾರ ಆಳಂದ (Alanda) ತಾಲೂಕಿನ ಜಿಡಗಾ ಕ್ರಾಸ್​ ಬಳಿ ಗ್ರಾಮ ಪಂಚಾಯಿತು ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಲಕ್ಷ್ಮಣ ಗುಂಡೇಟು ತಿಂದ ಆರೋಪಿ.  ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಒಡೆಯರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿದ್ದ ಆರೋಪಿ ಲಕ್ಷ್ಮಣನನ್ನು ಬಂಧಿಸಲು ಹೋಗಿದ್ದಾರೆ. ಈ ವೇಳೆ ಆರೋಪಿ ಲಕ್ಷ್ಮಣ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದನು. ಆತ್ಮರಕ್ಷಣೆಗಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಆರೋಪಿ ಲಕ್ಷ್ಮಣ ಬಲಗಾಲಿಗೆ ಗುಂಡು ಹೊಡೆದಿದ್ದಾರೆ.

ಆರೋಪಿ ಲಕ್ಷ್ಮಣ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಯ ವಿವಿಧಡೆ ಬಂದೂಕು ಸರಬರಾಜು ಮಾಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಅಕ್ರಮ ಶಸ್ತ್ರಾಸ್ತ ಪೂರೈಕೆ ಸೇರಿದಂತೆ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್​ಗಳಿವೆ. ವಿಶ್ವನಾಥ್​ ಜಮಾದಾರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ ವಿರುದ್ಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕಲಬುರಗಿಯ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು!

ಗ್ರಾ.ಪಂ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಕೊಲೆ

ವಿಶ್ವನಾಥ್​​​ ಜಮಾದಾರ್ ಕಳೆದ ಶುಕ್ರವಾರ ಬೆಳಿಗ್ಗೆ ಮಗನನ್ನು ಶಾಲೆಗೆ ಬಿಟ್ಟು ಬರುತ್ತೇನೆ ಅಂತ ಬೈಕ್ ಮೇಲೆ ಹೋಗಿದ್ದರು. ಮಗನನ್ನು ಶಾಲೆಗೆ ಬಿಟ್ಟು ಜಿಡಗಾ ಕ್ರಾಸ್ ಬಳಿ ಬೈಕ್ ಮೇಲೆ ಬರುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಿಶ್ವನಾಥ್​ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದರು.

ವಿಶ್ವನಾಥ್​ ಅವರ ತೆಲೆಗೆ ಮೂರು ಗುಂಡು ಹೊಡೆದಿದ್ದರು. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದರು. ನಿರ್ಜನ ಪ್ರದೇಶದಲ್ಲಿ ವಿಶ್ವನಾಥ್​ ಅವರನ್ನು ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ವಿಶ್ವಾನಥ್​ ಮೃತದೇಹ ಕಂಡ ದಾರಿಹೋಕರು ಪೊಲೀಸರಿಗೆ ವಿಚಾರ ತಿಳಿಸಿದ್ದರು. ಕೂಡಲೇ ಆಳಂದ ಪೊಲೀಸರು ಸ್ಥಳಕ್ಕೆ ಬಂದು, ಮಾಹಿತಿ ಕಲೆ ಹಾಕಿದರು.

ಆಳಂದ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 am, Sat, 21 September 24

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು