ಮಂಗಳೂರು: ಡಜನ್ಗೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್ಗಳು ಡ್ರಗ್ಸ್ ಮಾರುತ್ತಿದ್ದ ವೇಳೆ ಅರೆಸ್ಟ್
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಡಜನ್ಗೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳು, ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ವೇಳೆ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ 19 ಗ್ರಾಂ ಎಮ್ಡಿಎಮ್ಎ ಮತ್ತು 1.92 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳೂರು, ಜನವರಿ 03: ನಗರದಲ್ಲಿ ಡ್ರಗ್ಸ್ (Drugs) ಮಾರುತ್ತಿದ್ದ ಆರೋಪಿಗಳನ್ನು ಕಂಕನಾಡಿ ಪೊಲೀಸರು (Police) ಮಂಗಳೂರಿನ (Mangaluru) ಪಡೀಲು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಜಾಲ್ ನಿವಾಸಿ ಅಶ್ಪಕ್ ಅಲಿಯಾಸ್ ಜುಟ್ಟು ಅಶ್ಪಕ್ (27), ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳು. ಕುಖ್ಯಾತ ಕ್ರಿಮಿನಲ್ ಹಿನ್ನೆಲೆ ಉಳ್ಳವರಾದ ಆರೋಪಿಗಳು ನಗರದಲ್ಲಿ ಡ್ರಗ್ಸ್ ಮಾರುತ್ತಿದ್ದರು. ಈ ವಿಚಾರ ತಿಳಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಬಳಿ ಇದ್ದ 19 ಗ್ರಾಂ ಎಮ್ಡಿಎಮ್ಎ ಮತ್ತು 1.92 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜುಟ್ಟು ಅಶ್ಪಕ್ ಮೇಲೆ 6 ಠಾಣೆಗಳಲ್ಲಿ ಕೊಲೆ ಯತ್ನ, ದರೋಡೆ, ಸುಲಿಗೆ, ಗಲಾಟೆ ಸೇರಿದಂತೆ 12 ವಿವಿಧ ಪ್ರಕರಣಗಳು ದಾಖಲಾಗಿದೆ. ಉಮ್ಮರ್ ಫಾರೂಕ್ ಮೇಲೆ ಕೊಲೆ ಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನ ಸೇರಿದಂತೆ 12 ಪೊಲೀಸ್ ಠಾಣೆಗಳಲ್ಲಿ 25 ಪ್ರಕರಣಗಳು ದಾಖಲಾಗಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:08 am, Wed, 3 January 24