ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ

ಕೋಮು ಸೌಹಾರ್ದ ಕದಡಲು ಪರಸ್ಪರ ಹಲ್ಲೆ ನಡೆಸಿ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಮು ಸಂಘರ್ಷಕ್ಕೆ ಯತ್ನ; ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ
ಕೋಮು ಸಂಘರ್ಷಕ್ಕೆ ಯತ್ನಿಸಿದ ಆರೋಪಿಗಳು ಅರೆಸ್ಟ್
Follow us
TV9 Web
| Updated By: Rakesh Nayak Manchi

Updated on:Oct 15, 2022 | 8:46 AM

ಕಾರವಾರ: ಭಟ್ಕಳದಲ್ಲಿ ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತ ಹಿಂದೂ ಕಾರ್ಯಕರ್ತರಾಗಿದ್ದಾರೆ. ಇಬ್ಬರೂ ವಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ ನಡೆಸಿ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿರುವುದು ತಿಳಿದುಬಂದ ಹಿನ್ನೆಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಸೋಮಯ್ಯ ಮತ್ತು ವೆಂಕಟೇಶ ಎಂಬವರು ಭಟಟ್ಕಳದಲ್ಲಿ ಕೋಮು ಸೌಹಾರ್ದತೆ ಕದಡಲು ಮತ್ತು ಶಾಂತಿ ಭಂಗ ಮಾಡಲು ಇಬ್ಬರೂ ವಯಕ್ತಿಕ ಕಾರಣಕ್ಕೆ ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ನವೀನ್ ಸೋಮಯ್ಯ ನಾಯ್ಕನಿಗೆ ನವೀನ್ ವೆಂಕಟೇಶ ನಾಯ್ಕ ಕೀ ಚೈನ್​ನಿಂದ ತಲೆಗೆ ಹಲ್ಲೆ ನಡೆಸುತ್ತಾನೆ. ಬಳಿಕ ಹಲ್ಲೆಯನ್ನು ಅನ್ಯ ಕೋಮಿನವರು ಮಾಡಿದ್ದಾರೆ ಎಂದು ಆರೋಪಿಸಿ ನವೀನ್ ಸೋಮಯ್ಯ ಮುರುಡೇಶ್ವರ ಠಾಣೆಗೆ ಸುಳ್ಳು ದೂರು ನೀಡಿದ್ದಾನೆ.

ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಆರಂಭಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ. ಭಟ್ಕಳ ಠಾಣೆಯ ಸಿಪಿಐ ಮಹಾಬಲೇಶ್ವರ ನಾಯಕ ತಂಡವು ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ಭಟ್ಕಳದಲ್ಲಿ ಕೋಮು ಸಂಘರ್ಷ ಮೂಡಿಸಿ ಶಾಂತಿ ಕದಡಲು ಪ್ರಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.

ಕಾರುಗಳನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರೇ ಎಚ್ಚರ

ಬೆಂಗಳೂರು: ಹೈ ಎಂಡ್ ಕಾರುಗಳನ್ನ ಅಡವಿಟ್ಟು ಸಾಲ ತೆಗೆದುಕೊಳ್ಳುವವರು ಎಚ್ಚರವಾಗಿರಿ. ಏಕೆಂದರೆ ಕಾರನ್ನು ಅಡಮಾನ ಇಟ್ಟರೆ ನಿಮ್ಮ ಕಾರು ಯಾರಿಗೂ ಮಾರಾಟವಾಗಬಹುದು. ಹೀಗಾಗಿ ತುರ್ತಾಗಿ ಹಣದ ಅವಶ್ಯಕತೆ ಬಿದ್ದಾಗ ಕಾರು ಅಡವಿಟ್ಟು ಹಣ ಪಡೆಯುವ ಮುನ್ನ ನೂರಾರು ಬಾರಿ ಯೋಚಿಸಿ. ಕಾರು ಮಾಲೀಕರಿಗೆ ಗೊತ್ತಿಲ್ಲದಂತೆ ಅಡವಿಟ್ಟ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಆರು ಆರೋಪಿಗಳನ್ನು ಪುಲಕೇಶಿ ನಗರ ಪೊಲೀಸರು  ಬಂಧಿಸಿದ್ದಾರೆ. ನದೀಮ್, ಉಮರ್ ಫಾರುಕ್ ಸೇರಿ 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಆದಿ ಕೇಶವಲು ಮೊಮ್ಮಗ ಗೀತಾವುಷ್ಣು ಕಾರನ್ನ ಕೂಡ ಬೇರೆಯವರಿಗೆ ಮಾರಾಟ ಮಾಡಿದ್ದರು. ಕಾರನ್ನ ಮಾರಾಟ ಮಾಡುವಾಗ ನಂಬರ್ ಫ್ಲೇಟ್ ಹಾಗೂ ಡಾಕ್ಯುಮೆಂಟ್ಸ್ ಚೇಂಜ್ ಮಾಡಿ ಮಾರಾಟ ಮಾಡುತ್ತಿದ್ದರು. ಸದ್ಯ ಬಂಧಿತರಿಂದ ಒಟ್ಟು 14 ಹೈ ಎಂಡ್ ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಯಾ ಬಣವೆಗೆ ಕಿಡಿಗೇಡಿಗಳಿಂದ ಬೆಂಕಿ

ಬೀದರ್: ರಾಶಿ ಮಾಡಲು ಹಾಕಿದ್ದ ಸೋಯಾ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶಗೊಳಿಸಿದ ಘಟನೆ ಬಸವಕಲ್ಯಾಣ ತಾಲೂಕಿನ ಘಾಟಹಿಪ್ಪರ್ಗಾ ಗ್ರಾಮದಲ್ಲಿ ನಡೆದಿದೆ. ಸಂಜು ಕುಮಾರ್ ಎಂಬ ರೈತ ತನ್ನ 12 ಎಕರೆ ಜಮೀನಿನಲ್ಲಿ 5 ‌ಲಕ್ಷ ರೂಪಾಯಿ ಮೌಲ್ಯದ ಸೋಯಾ ಬೆಳೆದಿದ್ದರು. ಕಿಡಿಗೇಡಿಗಳ ಕಣ್ಣು ಇದರ ಮೇಲೆ ವಕ್ರದೃಷ್ಟಿ ಬಿದ್ದು ರಾಶಿ ಮಾಡಲು ಕೂಡಿ ಹಾಕಿದ್ದ ಬಣವೆಗೆ ಬೆಂಕಿ ಹಚ್ಚಿ ಭಸ್ಮ ಮಾಡಿದ್ದಾರೆ. ನೊಂದ ರೈತ ಸಂಜು ಆರೋಪಿಗಳನ್ನು ಬಂಧಿಸುವಂತೆ ಮೂಡಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನೀರಿನ ಟ್ಯಾಂಕರ್ ಲಾರಿ ಪಲ್ಟಿ

ಬೆಂಗಳೂರು: ನಗರದ ಡೈರಿ ಸರ್ಕಲ್ ಮೇಲ್ಸೇತುವೆ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದು ಬಿಎಂಆರ್​ಸಿಎಲ್ ಕಾಮಗಾರಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಶುಕ್ರವಾರ ರಾತ್ರಿ ಅತಿವೇಗದಿಂದ ಲಾರಿ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ವಾಹನಗಳ ಸಂಚಾರವಿರಲಿಲ್ಲ‌‌‌. ರಸ್ತೆಗೆ ಅಡ್ಡಲಾಗಿ ಬಿದ್ದ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಜಯನಗರ ಸಂಚಾರಿ ಪೊಲೀಸರು ಲಾರಿ ತೆರವು ಕಾರ್ಯ ಮಾಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:46 am, Sat, 15 October 22

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್