AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಡಿಫ್ರೆಂಟ್ ಆಗಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊನೆಗೂ ಸಂಪಿಗೇಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೃತಿಕ್ ಗೌಡ(20), ನಿತಿನ್ ಗೌಡ(21), ಸುಮಂತ್(20), ದರ್ಶನ್(20) ಬಂಧಿತ ಆರೋಪಿಗಳು.

ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Apr 16, 2022 | 11:36 AM

Share

ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಫ್ರೆಂಟ್ ಆಗಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊನೆಗೂ ಸಂಪಿಗೇಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೃತಿಕ್ ಗೌಡ(20), ನಿತಿನ್ ಗೌಡ(21), ಸುಮಂತ್(20), ದರ್ಶನ್(20) ಬಂಧಿತ ಆರೋಪಿಗಳು. ಬಂಧಿತರ ಬಳಿಯಿದ್ದ 5 ಲಕ್ಷ ರೂಪಾಯಿ ಮೌಲ್ಯದ ಕಾರು, ಒಂದು ಬೈಕ್, ಮೊಬೈಲ್, 18 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವು ಇನ್ನು ಮತ್ತೊಂದು ಕಡೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನೇ ಟಾರ್ಗೆಟ್ ಮಾಡಿ 10 ಕಾರುಗಳ ಗಾಜು ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ. ಬಾಗಲಗುಂಟೆ, ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವಾಗಿದೆ. ಸಂಗೀತ್ ಕುಮಾರ್, ಅನಂತಸ್ವಾಮಿ, ಮಂಜುನಾಥ ನಾಯ್ಕ, ಸಚಿನ್, ದಿನೇಶ್, ಭೈರೇಗೌಡ, ತಿಲಕ್ ರಾಜ್, ಬಸವರಾಜು, ಹರ್ಷ, ಅರುಣ್‌ ಎಂಬುವರಿಗೆ ಸೇರಿದ ಕಾರುಗಳಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರ ಗ್ಯಾಂಗ್ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ದೋಚಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7 ಕಾರುಗಳು, ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ 3 ಕಾರಿನ ಗಾಜು ಒಡೆದು ಕೃತ್ಯ ಎಸಗಲಾಗಿದೆ.

ತಂದೆ-ಮಗನಿಂದ ಗಾಂಜಾ ಮಾರಾಟ ದಂಧೆ ಬೆಂಗಳೂರಿನಲ್ಲಿ ತಂದೆ-ಮಗನಿಂದ ಗಾಂಜಾ ಮಾರಾಟ ದಂಧೆ ನಡೆಯುತ್ತಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸಾದಿಕ್ನನ್ನು ಬಂಧಿಸಿದ್ದಾರೆ. ಪರಾರಿಯಾದ ಸಾದಿಕ್ ತಂದೆಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಆರೋಪಿ ಸಾದಿಕ್ನಿಂದ 52 ಲಕ್ಷ ರೂಪಾಯಿ ಮೌಲ್ಯದ 100 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಹೆಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳು ಒಡಿಶಾದಿಂದ ತಮಿಳುನಾಡಿಗೆ ಗಾಂಜಾ ತರಿಸಿಕೊಳ್ಳುತ್ತಿದ್ದರು. ನಂತರ ತಮಿಳುನಾಡಿನಿಂದ ಬೆಂಗಳೂರಿಗೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದರು.

ಮರಕ್ಕೆ ನೇಣುಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಬಾಗಲವಾಡ ಗ್ರಾಮದ ಶರಣಬಸವ(35) ಮರದ ಬಳಿ ಬೈಕ್ ನಿಲ್ಲಿಸಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ ತುಮಕೂರು ಶಿರಾ ತಾಲೂಕಿನ ಮಾನಗೆರೆ ಬಳಿ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತವಾಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕ್ರೇನ್ ಮೂಲಕ ಲಾರಿಗಳನ್ನು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತೆ.

ನಾಗದೇವತೆ ಮೂರ್ತಿ ಧ್ವಂಸಗೊಳಿಸಿದ ದುಷ್ಕರ್ಮಿಗಳು ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ವಾಸುಕಿ ಸುಬ್ರಹ್ಮಣ್ಯ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಭಕ್ತರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ರೇಪ್​ ಕೇಸ್​; ಟಿಎಂಸಿ ಮುಖಂಡನ ಪುತ್ರನೇ ಪ್ರಮುಖ ಆರೋಪಿ, ಡಿಎನ್​ಎ ಟೆಸ್ಟ್​ಗೆ ಮುಂದಾದ ಸಿಬಿಐ

Music: ವೈಶಾಲಿಯಾನ; ‘ಇದನ್ನು ನೀವು ‘ಹರಾಮ್’ ಎಂದರೆ, ನಾನು ಮತ್ತಷ್ಟು ಹರಾಮ್…’ ಎಂದಿದ್ದರು ಬಿಸ್ಮಿಲ್ಲಾ ಖಾನ್

Published On - 11:28 am, Sat, 16 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ