ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು

ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ ಕರ್ನಾಟಕದ ಕೋಲಾರ ಹಾಗೂ ಮಂಡ್ಯದಲ್ಲಿ ನಡೆದಿವೆ.

ಕೋಲಾರ, ಮಂಡ್ಯದಲ್ಲಿ ನಡೆಯಿತು ಒಂದೇ ರೀತಿಯ ಹತ್ಯೆ; ಅಪ್ಪ-ಅಮ್ಮನಿಂದಲೇ ಕೊಲೆಯಾದರು ನಾಲ್ವರು ಕಂದಮ್ಮಗಳು
ಪ್ರತ್ಯೇಕ ಘಟನೆಗಳಲ್ಲಿ ಹತ್ಯೆಯಾದ ಮಕ್ಕಳು
Follow us
Ganapathi Sharma
|

Updated on: Jun 22, 2023 | 2:56 PM

ಬೆಂಗಳೂರು: ಅಪ್ಪ ಹಾಗೂ ಅಮ್ಮನಿಂದಲೇ ನಾಲ್ವರು ಕಂದಮ್ಮಗಳು ಹತ್ಯೆಯಾದ ಪ್ರತ್ಯೇಕ ಘಟನೆ (Crime News) ಕರ್ನಾಟಕದ ಕೋಲಾರ (Kolar) ಹಾಗೂ ಮಂಡ್ಯದಲ್ಲಿ (Mandya) ನಡೆದಿವೆ. ಮಹಿಳೆಯೊಬ್ಬರು ತನ್ನಿಬ್ಬರೂ ಮಕ್ಕಳನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಎರಡು ದಿನ ಹಿಂದೆ ಕೋಲಾರದಲ್ಲಿ ನಡೆದಿದ್ದು ಮತ್ತೊಂದೆಡೆ, ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಉಪ್ಪಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸುಗುಣಾ (35) ಎಂಬಾಕೆ ತನ್ನ ಪತಿ ಮುರಳಿಯೊಂದಿಗೆ ಜಗಳವಾಡಿದ ನಂತರ ಮಕ್ಕಳಾದ ಪ್ರೀತಂ ಗೌಡ (12) ಮತ್ತು ನಿಶಿತಾ (5) ಅವರನ್ನು ಕೊಲೆ ಮಾಡಿದ್ದಾರೆ. ನಂತರ ಡೆತ್​​ನೋಟು ಬರೆದು ಸಹೋದರನಿಗೆ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸುಗುಣ ಅವರ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಆಕೆಯ ಪತಿ ಮುರಳಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಸುಗುಣ ಮತ್ತು ಮುರಳಿ 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಬ್ಬರೂ ಸಾರಿಗೆ ಸಂಸ್ಥೆ ನೌಕರರು.

ಮತ್ತೊಂದೆಡೆ, ಶ್ರೀಕಾಂತ್ ಎಂಬ ವ್ಯಕ್ತಿ ತನ್ನ ಪತ್ನಿ ಲಕ್ಷ್ಮೀಗೆ ಗಂಭೀರವಾಗಿ ಹಲ್ಲೆ ಮಾಡಿದ್ದಲ್ಲದೆ, 3 ವರ್ಷದ ಆದಿತ್ಯ ಹಾಗೂ 4 ವರ್ಷದ ಅಮೂಲ್ಯ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಗುರುವಾರ ಮುಂಜಾನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: Kolar Crime: ಸರ್ಕಾರಿ ಕೆಲಸದಲ್ಲಿದ್ದ ಅನ್ಯೋನ್ಯ ದಂಪತಿ, ಇಬ್ಬರು ಮಕ್ಕಳು, ಆದರೆ ತಾಯಿಯ ಮುಂಗೋಪಕ್ಕೆ ಕುಟುಂಬವೇ ಬಲಿ

ಈ ಕುಟುಂಬ ಕಲಬುರಗಿ ಜಿಲ್ಲೆ ಜೇವರ್ಗಿಯಿಂದ ಬಂದು ಆಲೆಮನೆಯಲ್ಲಿ ಕೆಲಸ ಮಾಡುತ್ತಿತ್ತು. ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ್ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್