Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡಲು ದುಪ್ಪಟ್ಟು ಹಣ ವಸೂಲಿ; ನೌಕರನನ್ನು ತರಾಟೆಗೆ ತೆಗೆದುಕೊಂಡ ಜನ

ಬೇಲೂರಿನ ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಭ್ರಷ್ಟಾಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಿಂದ ಅಕ್ರಮವಾಗಿ ಹಣ ವಸೂಲಿಮಾಡುತ್ತಿದ್ದ ನೌಕರನಿಗೆ ಸ್ಥಳಿಯರು ತರಾಟೆಗೆ ತೆಗದುಕೊಂಡಿದ್ದಾರೆ.

Crime News: ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡಲು ದುಪ್ಪಟ್ಟು ಹಣ ವಸೂಲಿ; ನೌಕರನನ್ನು ತರಾಟೆಗೆ ತೆಗೆದುಕೊಂಡ ಜನ
ಬೇಲೂರು ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡಲು ದುಪ್ಪಟ್ಟು ಹಣ ವಸೂಲಿ
Follow us
TV9 Web
| Updated By: Rakesh Nayak Manchi

Updated on:Oct 11, 2022 | 10:46 AM

ಹಾಸನ: ಬೇಲೂರಿನ ಅಂಚೆ ಕಛೇರಿಯಲ್ಲಿ ಆದಾರ್ ಕಾರ್ಡ್ ಮಾಡಿಕೊಡುವ ನೆಪದಲ್ಲಿ ಭ್ರಷ್ಟಾಚಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಾರ್ವಜನಿಕ ರಿಂದ ಅಕ್ರಮವಾಗಿ ಹಣ ವಸೂಲಿಮಾಡುತ್ತಿದ್ದ ನೌಕರನಿಗೆ ಸ್ಥಳಿಯರು ತರಾಟೆಗೆ ತೆಗದುಕೊಂಡಿದ್ದಾರೆ. ಅಂಚೆ ಇಲಾಖೆಯ ಬೇಲೂರು ಶಾಖೆ ನೌಕರ ಮಿಥುನ್ ವಿರುದ್ದ ಅಕ್ರಮ ಹಣ ವಸೂಲಿ ಆರೋಪ ಮಾಡಲಾಗಿದ್ದು, ಇದನ್ನು ಪ್ರಶ್ನಿಸಿದಾಗ ಮಿಥುನ್ ತಪ್ಪೊಪ್ಪಿಗೆ ಕೇಳಿಕೊಂಡಿದ್ದಾನೆ. ಫೋನ್ ನಂಬರ್ ಅಪ್ಡೇಟ್ ಮಾಡಲು 50.ರೂ ಬದಲಾಗಿ 120 ರೂ. ವಸೂಲಿ ಮಾಡುತ್ತಿದ್ದು, ಉಚಿತ ಆದಾರ್ ಕಾರ್ಡ್ ಮಾಡಿಕೊಡಬೇಕಿದ್ದರು ಅದಕ್ಕೆ ಅನಧಿಕೃತವಾಗಿ 200 ರೂ. ವಸೂಲಿ ಮಾಡಿಕೊಳ್ಳುತ್ತಿದ್ದ. ಬಯೊಮೆಟ್ರಿಕ್ ಅಪ್ಡೇಟ್​ಗಾಗಿ 100 ಬದಲಾಗಿ 200 ರೂ. ವಸೂಲಿ ಮಾಡುತ್ತಿದ್ದ. ಆದರೆ ಇದಕ್ಕೆ ಯಾವುದಕ್ಕೂ ರಶೀದಿ ನೀಡದೆ ಜನರನ್ನು ವಂಚಿಸುತ್ತಿದ್ದನು. ಈ ಬಗ್ಗೆ ಅದಿಕಾರಿಗೆ ಮುತ್ತಿಗೆ ಹಾಕಿದ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಮಿಥುನ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ಹಲವು ತಿಂಗಳಿನಿಂದ ಇದೇ ರೀತಿ ಹಣ ವಸೂಲಿ ಆರೋಪ ಮಾಡುತ್ತಿರುವ ಆರೋಪ ಈತನ ಮೇಲಿದ್ದು, ಸೂಕ್ತ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಕಾರು ಪಲ್ಟಿಯಾಗಿ ಇಬ್ಬರು ಸಾವು

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ ಘಟನೆ ತಾಲೂಕಿನ ಮರೆವಾಡ ಗ್ರಾಮದ ಬಳಿ ನಡೆದಿದೆ. ಮುನವಳ್ಳಿ ಗ್ರಾಮದ ಯಶವಂತ ಯಲಿಗಾರ (26) ಹಾಗೂ ಅಕ್ಷಯ ಕಡಕೋಳ (26) ಸಾವನ್ನಪ್ಪಿದವರು. ಸ್ಥಳಕ್ಕೆ ಆಗಮಿಸಿದ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಡರಾತ್ರಿ ಯಶವಂತ ಮತ್ತು ಅಕ್ಷಯ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ಮರೆವಾಡ ಗ್ರಾಮದ ಧಾರವಾಡ- ಸವದತ್ತಿ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.

ಸ್ನೇಹಿತರಿಗೆ ಮೆಸೇಜ್ ಮಾಡಿ ಆತ್ಮಹತ್ಯೆ

ಚಾಮರಾಜನಗರ: ಸ್ನೇಹಿತರಿಗೆ ಮೆಸೇಜ್ ಮಾಡಿದ ನಂತರ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಬಳಿಯ ಕಲ್ಲುಕಟ್ಟೆ ಡ್ಯಾಂನಲ್ಲಿ ನಡೆದಿದೆ. ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ ಕಲ್ಲಹಳ್ಳಿ ಗ್ರಾಮದ ಸಚಿನ್, ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತನ್ನ ಮೂವರು ಸ್ನೇಹಿತರಿಗೆ ಮೆಸೆಜ್ ಮಾಡಿದ್ದಾನೆ. ಪ್ರಕರಣ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Tue, 11 October 22

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ