Karnataka Crime News: ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ, ಚಿಕ್ಕಮಗಳೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್​ಗೆ ಸೇರಿದ ಟಿಪ್ಪರ್​ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ.

Karnataka Crime News: ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ, ಚಿಕ್ಕಮಗಳೂರಿನಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 16, 2021 | 7:01 PM

ಕೊಪ್ಪಳ: ಕೊಪ್ಪಳದ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ 52 ವರ್ಷದ ಶ್ರೀಧರ್ ಅಂಗಡಿ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಇವರು ಕೊಪ್ಪಳ ನಗರದ ಬಸವನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಶ್ರೀಧರ್ ಅಂಗಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಆತ್ಮಹತ್ಯೆ ಕುರಿತು ಮಾತನಾಡಲು ಮನೆಯವರ ಹಿಂದೇಟು ಹಾಕಿದ್ದಾರೆ. ಆತ್ಮಹತ್ಯೆ ಕುರಿತು ಇನ್ನೂ ದೂರು ದಾಖಲಾಗಿಲ್ಲ.

ಚಿಕ್ಕಮಗಳೂರಿನಲ್ಲಿ ಅಪಘಾತ; ಬೈಕ್ ಸವಾರ ಸಾವು: ಚಿಕ್ಕಮಗಳೂರಿನಲ್ಲಿ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ NMC ಸರ್ಕಲ್ ಬಳಿ ದುರ್ಘಟನೆ ನಡೆದಿದೆ. ಬಿಜೆಪಿ ನಾಯಕ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್​ಗೆ ಸೇರಿದ ಟಿಪ್ಪರ್​ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಹಗಲು ಹೊತ್ತಿನಲ್ಲಿ ನಗರದೊಳಗೆ ಟಿಪ್ಪರ್ ಸಂಚಾರಕ್ಕೆ ಅವಕಾಶವಿಲ್ಲದಿದ್ದರೂ ಟಿಪ್ಪರ್ ಚಲಾಯಿಸಲಾಗುತ್ತಿತ್ತು. ಚಿಕ್ಕಮಗಳೂರು ನಗರದಲ್ಲಿ ರಾಕೆಟ್ ಸ್ಪೀಡಿನಲ್ಲಿ ಸಂಚರಿಸುವ ಟಿಪ್ಪರ್​ಗಳಿಂದ ಅನಾಹುತಗಳು ಸಂಭವಿಸುತ್ತಿರುವುದು ಇದೇ ಮೊದಲೇನಲ್ಲ. ಆದರೂ ಪೊಲೀಸರು ಕಣ್ಣುಮುಚ್ಚಿ ಕುಳಿತಿದ್ದಾರೆ.

ವಿಜಯಪುರದಲ್ಲಿ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿ: ಟೈಲ್ಸ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ, ಕ್ಲೀನರ್​​ಗೆ ಗಾಯವಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಅಹಮದಾಬಾದ್​ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿದೆ.

ಇದನ್ನೂ ಓದಿ: Crime News: ಹಸುಗೂಸಿನ ಮೈಗೆ ಬರೆ ಹಾಕಿ ಚಿತ್ರಹಿಂಸೆ ನೀಡಿದ ಬಾಲಕಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರ

Crime News: ಆಲ್ಕೋಹಾಲ್ ತರಲಿಲ್ಲವೆಂದು ಹೊಡೆದ ಮಗನನ್ನೇ ಕೊಂದ ತಾಯಿ!