AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿ, ಬಾಣಂತಿ ಮತ್ತು ಅಪೌಷ್ಟಿಕತೆಯಿಂದ ಬಳಲುವವರಿಗೆ ನೀಡುವ ಲಕ್ಷಾಂತರ ಮೌಲ್ಯದ ಮಾತ್ರೆಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿ; ಸ್ಥಳೀಯರ ಆಕ್ರೋಶ

ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಅಪೌಷ್ಟಿಕತೆಯಿಂದ ಬಳಲುವವರಿಗೆ ನೀಡುವ ಲಕ್ಷಾಂತರ ಮೌಲ್ಯದ ಮಾತ್ರೆಗಳು ಬಳಕೆ ಮಾಡದೆ ರಸ್ತೆಗೆ ಚೆಲ್ಲಲಾಗಿದೆ.

ಗರ್ಭಿಣಿ, ಬಾಣಂತಿ ಮತ್ತು ಅಪೌಷ್ಟಿಕತೆಯಿಂದ ಬಳಲುವವರಿಗೆ ನೀಡುವ ಲಕ್ಷಾಂತರ ಮೌಲ್ಯದ ಮಾತ್ರೆಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿ; ಸ್ಥಳೀಯರ ಆಕ್ರೋಶ
ಲಕ್ಷಾಂತರ ಮೌಲ್ಯದ ಮಾತ್ರೆಗಳು ಕುಪ್ಪೆಗೆ
TV9 Web
| Edited By: |

Updated on:Apr 22, 2022 | 12:48 PM

Share

ವಿಜಯನಗರ: ಜಿಲ್ಲೆಯ ಹೊಸಪೇಟೆಯ ಸಂಡೂರು ರಸ್ತೆಯ LFS ಶಾಲೆ ಬಳಿ ಅವಧಿ ಮೀರಿದ ಅಪಾರ ಪ್ರಮಾಣದ ಮಾತ್ರೆಗಳು ಪತ್ತೆಯಾಗಿವೆ. ಗರ್ಭಿಣಿಯರು, ಬಾಣಂತಿಯರಿಗೆ ಮತ್ತು ಅಪೌಷ್ಟಿಕತೆಯಿಂದ ಬಳಲುವವರಿಗೆ ನೀಡುವ ಲಕ್ಷಾಂತರ ಮೌಲ್ಯದ ಮಾತ್ರೆಗಳು ಬಳಕೆ ಮಾಡದೆ ರಸ್ತೆಗೆ ಚೆಲ್ಲಲಾಗಿದೆ. ರಸ್ತೆಗೆ ಮಾತ್ರೆಗಳನ್ನ ಚೆಲ್ಲಿದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಂಠಿಯ ಚೀಲದ ಕೆಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ದಿಮ್ಮಿ ವಶ ಶುಂಠಿ ಚೀಲದ ಕೆಳಗೆ ಇರಿಸಿ ಕೇರಳಕ್ಕೆ ಸಾಗಿಸುತ್ತಿದ್ದ 8 ಲಕ್ಷ ರೂ. ಮೌಲ್ಯದ ಬೀಟೆ ಮರದ ದಿಮ್ಮಿ ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯ ಹರೀಶ್ ಪೊನ್ನಪ್ಪಗೆ ಸೇರಿದ ವಾಹನದಲ್ಲಿ ಕೃತ್ಯ ನಡೆದಿದ್ದು ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ಬೀಟೆ ಮರದ ದಿಮ್ಮಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಹಾಗೂ ದಿಮ್ಮಿ ವಶಕ್ಕೆ ಪಡೆದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಶೋಧದ ವೇಳೆ ಚಾಲಕ ಪರಾರಿಯಾಗಿದ್ದಾನೆ. ಶನಿವಾರ ಸಂತೆಯಿಂದ ಹುಣಸೂರು, ಹೆಚ್.ಡಿ.ಕೋಟೆ ಮಾರ್ಗವಾಗಿ ಬಾವಲಿ ಚೆಕ್ಪೋಸ್ಟ್ ಮೂಲಕ ಕೇರಳಕ್ಕೆ ಸಾಗಿಸಲು ಯತ್ನಿಸಿದ್ದರು. ಅರಣ್ಯ ಸಿಬ್ಬಂದಿ ಬೀಟೆ ಮರದ ದಿಮ್ಮಿ, ಗೂಡ್ಸ್ ವಾಹನ ವಶಕ್ಕೆ ಪಡೆದಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಷ್ಟ್ರ ಪಕ್ಷಿ ನವಿಲು ಸಾಗಿಸುತ್ತಿದ್ದವರಿಗೆ ದಂಡ ಹಾಕಿ ಮನೆ ಕಳಿಸಿದ ಪೊಲೀಸರು ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿ ಬೈಕ್ ಮೇಲೆ ರಾಷ್ಟ್ರ ಪಕ್ಷಿ ನವಿಲುಯೊಂದನ್ನು ಚೀಲದಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಮೂವರು ಯುವಕರನ್ನು ಪೊಲೀಸರು ಹಿಡಿದಿದ್ದಾರೆ. ಮೊದಲಿಗೆ ಪೊಲೀಸರನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಆದ್ರೆ ವಾಹನ ತಪಾಸಣೆ ಮಾಡುತ್ತಿದ್ದ ನಗರಠಾಣೆ ಪೊಲೀಸರು ಪರಾರಿಯಾಗುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಮೂವರು ಯುವಕರ ಪೈಕಿ ಒಬ್ಬ ಪರಾರಿಯಾಗಿದ್ದು ಹೆಲ್ಮೆಟ್ ಹಾಕಿಲ್ಲ ಎಂದು ದಂಡ ವಿಧಿಸಿ ಪೊಲೀಸರು ಬಿಟ್ಟು ಕಳಿಸಿದ್ದಾರೆ. ನವಿಲು ಸಾಗಿಸುತ್ತಿದ್ದವರಿಗೆ ಹೆಲ್ಮೆಟ್ ದಂಡ ವಿಧಿಸಿರುವುದು ಅನುಮಾನ ತಂದಿದೆ. ಪೊಲೀಸರ ನೆಡೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ವಾಯುವಿಹಾರಕ್ಕೆ ಹೋದ ವೃದ್ದನಿಗೆ ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಸಾವು ದಾವಣಗೆರೆ: ಜಗಳೂರು ಪಟ್ಟಣದ ಕೊಟ್ಟೂರು ರಸ್ತೆಯ ಕೆರೆ ಏರಿ ಮೇಲೆ ವಾಯುವಿಹಾರಕ್ಕೆ ತೆರಳಿದ್ದ ವೃದ್ಧನಿಗೆ ಲಾರಿ ಡಿಕ್ಕಿ ಹೊಡೆದಿದ್ದು ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸಕೆರೆ ಬಡಾವಣೆ ನಿವಾಸಿ ಹನುಮಂತಪ್ಪ(80) ಮೃತರು. ಘಟನೆ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಮತ್ತು ಒಮ್ನಿ ಮುಖಾಮುಖಿ, ಇಬ್ಬರ ಸಾವು ದ.ಕನ್ನಡ: ಮುಲ್ಕಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಒಮ್ನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಭುಜಂಗ(58), ವಸಂತ ಕುಂದರ್ ಮೃತರು. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಮ್ನಿ ಕಾರ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Petrol Price Today: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ದೆಹಲಿ, ಬೆಂಗಳೂರು ಸಹಿತ ಇತರ ನಗರಗಳಲ್ಲಿ ದರ ಹೀಗಿದೆ ನೋಡಿ

MS Dhoni: ಇದು ಹಳೆಯ ಧೋನಿ ಇನ್ನಿಂಗ್ಸ್! ಕೊನೆಯ 4 ಎಸೆತಗಳಲ್ಲಿ 16 ರನ್​ ಚಚ್ಚಿ ತಂಡ ಗೆಲ್ಲಿಸಿದ MSD- ವಿಡಿಯೋ ಇಲ್ಲಿದೆ

Published On - 9:21 am, Fri, 22 April 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ