ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕುಟುಂಬಸ್ಥರು

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ ಸಂಬಂಧ ವೈದ್ಯರ ವಿರುದ್ಧ ಕುಣಿಗಲ್ ಪಟ್ಟಣದಲ್ಲಿ ಮೃತಳ ಕುಟುಂಬಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕುಟುಂಬಸ್ಥರು
ಮೃತಪಟ್ಟ ಪಲ್ಲವಿ ಮತ್ತು ಪ್ರತಿಭಟಿಸುತ್ತಿರುವ ಮೃತಳ ಕುಟುಂಬಸ್ಥರು
Follow us
TV9 Web
| Updated By: Rakesh Nayak Manchi

Updated on:Jul 30, 2022 | 3:02 PM

ತುಮಕೂರು: ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವನ್ನಪ್ಪಿದ್ದಾಗಿ ಆರೋಪಿಸಿ ಮೃತಳ ಕುಟುಂಬಸ್ಥರು ಜಿಲ್ಲಾ ಆಸ್ಪತ್ರೆ ಎದುರು ಜಮಾಯಿಸಿ ಗಲಾಟೆ ಮಾಡಿದ್ದಲ್ಲದೆ, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆರಿಗೆ ನಂತರ ಅತಿಯಾದ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಸಿಬ್ಬಂದಿ ಬಿಜಿಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ವೇಳೆ ಬಾಣಂತಿ ಸಾವನ್ನಪ್ಪಿದ್ದಾಳೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪಲ್ಲವಿ ಕುಟುಂಬಸ್ಥರು, ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಜಿಲ್ಲೆಯ ಕುಣಿಗಲ್ ತಾಲೂಕಿನ ತೆರೆದಕುಪ್ಪೆ ಗ್ರಾಮದ ಪಲ್ಲವಿ ಜು.6ರಂದು ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಡೆಲಿವರಿ ಮಾಡಲಾಗಿದ್ದು, ಗಂಡು ಮಗು ಜನಿಸಿತ್ತು. ಅದಾಗ್ಯೂ ಹೆರಿಗೆ ಸಮಯದಲ್ಲಿ ಅತಿಯಾದ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಪಲ್ಲವಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೇವಾ ಆಸ್ಪತ್ರೆಗೆ ಪೋಷಕರಿಗೆ ತಿಳಿಸದೆ ರವಾನಿಸಲಾಗಿತ್ತು. ಆಸ್ಪತ್ರೆ ತಲುಪಿದಾಗ ಬಾಣಂತಿ ಪಲ್ಲವಿ ಕೊನೆಯುಸಿರೆಳೆದಿದ್ದಾರೆ.

ಇದರಿಂದ ಆಕ್ರೋಶಗೊಂಡ ಪಲ್ಲವಿ ಮನೆಯವರು ಮತ್ತು ಸಂಬಂಧಿಕರು, ಕುಣಿಗಲ್ ಸರ್ಕಾರಿ ಆಸ್ಪತ್ರೆಯ ಮುಂದೆ ಜಮಾಯಿಸಿ ಗಲಾಟೆ ಮಾಡಿದ್ದಾರೆ. ಅಲ್ಲದೆ ವೈದ್ಯರ ವಿರುದ್ಧ ರೊಚ್ಚಿಗೆದ್ದು ಕುಣಿಗಲ್ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರೆ, ಇನ್ನೊಂದೆಡೆ ಬೆಂಗಳೂರು-ಮಂಗಳೂರು ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ್ದಾರೆ.

ಹಾಡು ಹಗಲೇ ಮಹಿಳೆ ಬರ್ಬರ ಹತ್ಯೆ

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಹಾಡು ಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಲಕ್ಷ್ಮಿಪುರಂ ಬಡಾವಣೆಯ ಮನೆಯಲ್ಲಿ ಮಂಜುಳಾ(42) ಅವರು ಒಂಟಿಯಾಗಿದ್ದಾಗ ಬಂದ  ಇಬ್ಬರು ವ್ಯಕ್ತಿಗಳು ಚಹಾ ಕುಡಿದ ನಂತರ ಹತ್ಯೆಗೈದು 1ಕೆಜಿ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಮನೆಗೆ ಬಂದ ದುಷ್ಕರ್ಮಿಗಳಿಂದ ಈ ಕೃತ್ಯ ಎಸಗಲಾಗಿದ್ದು, ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಧ್ಯಾಹ್ನ ಮಂಜುಳಾ ಅವರ ಪತಿ ಕುಮಾರ್ ಊಟಕ್ಕೆ ಬಂದಾಗ ಕೊಲೆಯಾಗಿರುವುದು ತಿಳಿದುಬಂದಿದೆ.

ರೈಲ್ವೆ ಸ್ಟೇಷನ್ ಬಳಿ ವ್ಯಕ್ತಿ ಅನುಮಾನಸ್ಪದ ಸಾವು

ಚಿಕ್ಕಬಳ್ಳಾಫುರ: ಜಿಲ್ಲೆಯ ವೈ ಹುಣಸೇನಹಳ್ಳಿ ರೈಲ್ವೆ ಸ್ಟೇಷನ್ ಬಳಿ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ನಾರಾಯಣದಾಸರಹಳ್ಳಿ ನಿವಾಸಿ ನರಸಿಂಹಮೂರ್ತಿ ಸಾವನ್ನಪ್ಪಿದವರು. ಸ್ಥಳಿಯ ಖಾಸಗಿ ಶಾಲೆಯ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ ನರಸಿಂಹಮೂರ್ತಿ ಅವರ ಮೃತದೇಹ ರೈಲ್ವೇ ಸ್ಟೇಷನ್ ಬಳಿ ಪತ್ತೆಯಾಗಿದೆ. ಶವದ ಬಳಿ ಮೊಬೈಲ್ ಹಾಗೂ ಬೈಕ್ ಪತ್ತೆಯಾಗಿದ್ದು, ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 2:53 pm, Sat, 30 July 22