Bangalore: ವಿದೇಶಿ ಪ್ರಜೆಯ ಬರ್ಬರ ಕೊಲೆ
ವಿದೇಶಿ ಪ್ರಜೆಯೊಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು: ವಿದೇಶಿ ಪ್ರಜೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಯೊಬ್ಬ ಅಸೋಲೋಮನ್ ಎಕೆನೆ ಎಂಬಾತನನ್ನು ಓಬಿವರಾ ಎಂಬಾತ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅಕ್ಟೋಬರ್ 8 ರಂದು ದಾಸರಹಳ್ಳಿಯ ಮುನಿಕೆಂಪಣ್ಣ ಲೇಔಟ್ ಬಳಿ ಈ ಘಟನೆ ನಡೆದಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಡರಾತ್ರಿ ಭೀಕರ ರಸ್ತೆ ಅಪಘಾತ; ನಿವೃತ್ತ ಯೋಧ ಸಾವು
ಬೆಂಗಳೂರು: ತಡರಾತ್ರಿ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ರವಿಶಂಕರ್(59) ಸಾವನ್ನಪ್ಪಿದ ನಿವೃತ್ತ ಯೋಧ. ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಕಾರು ಚಲಾಯಿಸಿಕೊಂಡು ಫುಟ್ಪಾತ್ ಮೇಲೆ ನುಗ್ಗಿಸಿದ್ದಾನೆ. ಈ ವೇಳೆ ಕಾರು ರವಿಶಂಕರ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹೋಟೇಲ್ ಸಿಬ್ಬಂದಿ ರಾಘವೇಂದ್ರ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ನಿವೃತ್ತ ಯೋಧ ರವಿಶಂಕರ್ ಮೃತ ದೇಹವನ್ನು ಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ವಿದ್ಯುತ್ ಶಾಕ್ನಿಂದ ಕೈ ಕಾಲು ಸ್ವಾಧೀನ ಕಳೆದುಕೊಂಡ ರೈತ
ಮೈಸೂರು: ವಿದ್ಯುತ್ ಶಾಕ್ನಿಂದ ರೈತರೊಬ್ಬರು ಕೈ ಕಾಲು ಸ್ವಾಧೀನ ಕಳೆದುಕೊಂಡ ಘಟನೆ ಟಿ.ನರಸೀಪುರ ತಾಲ್ಲೂಕಿನ ಮಾದೇಗೌಡನಹುಂಡಿ ಗ್ರಾಮದಲ್ಲಿ ನಡೆದಿದ್ದು, ಚೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಬಸವರಾಜು ಎಂಬವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿದೆ. ರೈತ ಬಸವರಾಜುಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದ ಚೆಸ್ಕಾಂ ಅಧಿಕಾರಿಗಳು ಬಳಿಕ ಮನೆಯತ್ತ ತಿರುಗಿಯೂ ನೋಡಿಲ್ಲ ಎಂದು ಗ್ರಾಮಸ್ಥರು ಚೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪರಿಹಾರ ಒದಗಿಸುವಂತೆ ಆಗ್ರಹಿಸಿ ಟಿ ನರಸೀಪುರ ಚೆಸ್ಕಾಂ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಸಾಂಸ್ಕೃತಿಕ ನಗರಿಯಲ್ಲಿ ಹೆಚ್ಚಾದ ಕಳ್ಳರ ಹಾವಳಿ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಮೈಸೂರಿನ ಒಂಟಿಕೊಪ್ಪಲಿನಲ್ಲಿ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಒಂಟಿಕೊಪ್ಪಲಿನ ಗೋವಿಂದಪ್ಪ ಕಾಂಪ್ಲೆಕ್ಸ್ ಬಳಿ ದೀಪಕ್ ಅವರು ತಮ್ಮ ಮನೆ ಮುಂದೆ ನಿಲ್ಲಿಸಿದ ಕಾರಿನಿಂದ ಖದೀಮರು ನಕಲಿ ಕೀ ಬಳಸಿ ಎಲ್ಇಡಿ ಟಿವಿ, ಸ್ಪೀಕರ್ಗಳನ್ನು ಕಳ್ಳತನ ಮಾಡಿದ್ದಾರೆ. ಇನ್ನೊಂದೆಡೆ ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ್ದು, ಇದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಕ್ರಮ ಮದ್ಯ ಸಾಗಾಟ; ಆರೋಪಿ ಅರೆಸ್ಟ್
ಕೋಲಾರ: ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿyನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ ಸುಮಾರು 50 ಕೇಸ್ ಬಿಯರ್ ಹಾಗೂ ಓಮ್ನಿ ವ್ಯಾನ್ ಅನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ