ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ
Karnataka Former DG And IGP OM Prakash Murder: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆಯಾಗಿದ್ದಾರೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಸ್ಥಳಕ್ಕೆ ಹೆಚ್ಎಸ್ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& ಐಜಿಪಿಯಾಗಿದ್ದರು.
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓಂ ಪ್ರಕಾಶ್ ಅವರ ಮೃತದೇವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಹಿರಿಯ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು 2015ರ ಮಾರ್ಚ್ 01 (ಶನಿವಾರ) ದಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದರು. 1981 ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್, 38ನೇ ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಓಂ ಪ್ರಕಾಶ್ ಬಿಹಾರದ ಚಂಪಾರಣ್ ಜಿಲ್ಲೆಯವರು. ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ನಂತರ, ರಾಜ್ಯ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಎಸ್ಪಿಯಾಗಿ ಮತ್ತು ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್ಪಿಯಾಗಿ ಬಡ್ತಿ ಪಡೆದ್ದರು.
ಇದನ್ನೂ ಓದಿ: ತಮ್ಮ ಮೇಲೆ ಗುಂಡಿನ ದಾಳಿ ಮಾಡಿದವರ ಹೆಸರು ಬಿಚ್ಚಿಟ್ಟ ರಿಕ್ಕಿ ರೈ
1993 ರಲ್ಲಿ ಭಟ್ಕಳ ಕೋಮು ಗಲಭೆಗಳನ್ನು ನಿರ್ವಹಿಸಲು ಅವರನ್ನು ಆಯ್ಕೆ ಮಾಡಲಾಗಿತ್ತು. ಅವರು ಡಿಐಜಿ (ಆಡಳಿತ), ಡಿಐಜಿ-ಉತ್ತರ ವಲಯ, ಡಿಐಜಿ-ತರಬೇತಿ ಮತ್ತು ಡಿಐಜಿ ಅಗ್ನಿಶಾಮಕ ದಳದವರಾಗಿದ್ದರು. ಐಜಿಪಿಯಾಗಿ, ಅವರನ್ನು ಸಿಐಡಿಯಲ್ಲಿ ನೇಮಿಸಲಾಗಿತ್ತು. ಮತ್ತು ಸಾರಿಗೆ ಆಯುಕ್ತರಾಗಿಯೂ ಕೆಲಸ ಮಾಡಿದ್ದರು. ಅವರು ಎಡಿಜಿಪಿ (ಅಪರಾಧ ಮತ್ತು ತಾಂತ್ರಿಕ ಸೇವೆಗಳು) ಮತ್ತು ಎಡಿಜಿಪಿ (ಕುಂದುಕೊರತೆಗಳು ಮತ್ತು ಮಾನವ ಹಕ್ಕುಗಳು) ಆಗಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:18 pm, Sun, 20 April 25