Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ ಒಪ್ಪಿಸಿದ ರಾಜ್ಯ ಸರ್ಕಾರ

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಮೇಲೆ ಪಿಎಸ್​ಐ, ಎಎಸ್ಐ, ಹೆಡ್ ಕಾನ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ವಕೀಲರು ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇನ್ನೊಂದೆಡೆ, ವಕೀಲರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರೂ ಪ್ರತಿಭಟನೆ ನಡೆಸಿದ್ದರು.

ಚಿಕ್ಕಮಗಳೂರು: ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ ಒಪ್ಪಿಸಿದ ರಾಜ್ಯ ಸರ್ಕಾರ
ಚಿಕ್ಕಮಗಳೂರು ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿದ ಕರ್ನಾಟಕ ಸರ್ಕಾರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi

Updated on: Dec 03, 2023 | 7:07 PM

ಚಿಕ್ಕಮಗಳೂರು, ಡಿ.3: ನಗರ ಪೊಲೀಸ್​ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ (Assault) ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. ಇಂದು ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿಲಾಗಿದೆ. ಈ ಬಗ್ಗೆ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?

ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30 ರಂದು ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ (PSI), ಒಬ್ಬ ಎಎಸ್​ಐ, ಒಬ್ಬ ಹೆಡ್ ಕಾಸ್​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆ ಠಾಣೆ ಮುಂದೆ ವಕೀಲರು ಜಮಾಯಿಸಿ ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ, ವಿಚಾರಣೆ ನಡೆಸಿ ಪಿಎಸ್​ಐ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತು ಮಾಡಿದ್ದರು. ಜೊತೆಗೆ ಹಲ್ಲೆ ಮಾಡಿದ ಪೊಲೀಸರ ವಿರುದ್ದ ಐಪಿಸಿ ಸೆಕ್ಷನ್​​​​​​ 307, 324, 506, 504ರ ಅಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹೆಲ್ಮೆಟ್ ವಿಚಾರಕ್ಕೆ ವಕೀಲನ ಮೇಲೆ ಹಲ್ಲೆ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕೋರ್ಟ್

ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ತಲೆಮರೆಸಿಕೊಂಡಿದ್ದು, ಇವರ ಬಂಧನಕ್ಕೆ ಚಿಕ್ಕಮಗಳೂರು DYSP ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ನಡುವೆ, ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ