ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ
ಪ್ರಾತಿನಿಧಿಕ ಚಿತ್ರ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:May 02, 2024 | 7:28 PM

ಬೆಂಗಳೂರು, ಮೇ.02: ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ ಮೃತ ಪತ್ನಿ ಇಂದು ಇಬ್ಬರ ನಡುವಿನ ಭಿನ್ನಾಭಿಪ್ರಾಯದಿಂದ 6 ತಿಂಗಳಿಂದ ದೂರವಾಗಿದ್ದರು. ಇಂದು ಪತ್ನಿ ಜೊತೆ ಜಗಳ ತೆಗೆದು ಡಿಸಿಪಿ ಕಚೇರಿಯ ಕೂಗಳತೆ ದೂರದ ರಸ್ತೆಯಲ್ಲಿ ಇರಿದುಕೊಂದಿದ್ದಾನೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೂರು ನೀಡಿ ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದಂತೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಕೆಲ ತಿಂಗಳಿಂದ ಗಂಡನಿಂದ ದೂರವಿದ್ದರೂ, ತಾನು ಕೆಲಸ ಮಾಡುವ ಸ್ಥಳದಲ್ಲಿ ಸಮಸ್ಯೆ ಮಾಡುತ್ತಿದ್ದಾನೆಂದು ಪತಿ ವಿರುದ್ಧ ಕೋರಮಂಗಲ ಠಾಣೆಗೆ ಇಂದು ಮಧ್ಯಾಹ್ನ ಬಂದು ಪತ್ನಿ ದೂರು ನೀಡಿದ್ದಾರೆ. ದೂರು ಹಿನ್ನೆಲೆ ಪತಿ ಸೆಲ್ವಿನ್ ಫ್ರಾನ್ಸಿಸ್​ಗೆ ಕೊರಮಂಗಲ ಠಾಣೆಯಿಂದ ಕರೆ ಬಂದಿದೆ. ಈ ವೇಳೆ ನಾನು ದೂರದಲ್ಲಿದ್ದೇನೆ ಎಂದು ಪೊಲೀಸರಿಗೆ ಹೇಳಿ, ಠಾಣೆ ಬಳಿಯೇ ಸೆಲ್ವಿನ್ ಬಂದಿದ್ದಾನೆ. ಪತ್ನಿ ಠಾಣೆಯಿಂದ ಹೊರ ಬರುವುದನ್ನೇ ಕಾದು ಕುಳಿತಿದ್ದ ಆತ, ಪತ್ನಿ ಹೊರ ಬರುತ್ತಿದ್ದಂತೆ ಮಾತನಾಡಿ ಕೊಂಚ ದೂರ ಕರೆದೊಯ್ದಿದ್ದಾನೆ. ನಂತರ ಚಾಕುವಿನಿಂದ ದಾಳಿ ಮಾಡಿ ಪತ್ನಿ ಇಂದು ಹತ್ಯೆಗೈದು ಎಸ್ಕೇಪ್​ ಆಗಿದ್ದಾನೆ. ಇದೀಗ ಪರಾರಿಯಾಗಿರುವ ಸೆಲ್ವಿನ್ ಫ್ರಾನ್ಸಿಸ್​ಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಗುಡಿಸಲು ಸುಟ್ಟು ಭಸ್ಮ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಲ್ಲಾ.ಬಿ‌ ಗ್ರಾಮದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು 4 ಗುಡಿಸಲು ಸುಟ್ಟು ಭಸ್ಮವಾಗಿದೆ. ಮಲ್ಲಾರೆಡ್ಡಿ, ಮಲ್ಕಪ್ಪ ಎಂಬುವರಿಗೆ ಸೇರಿದ ಗುಡಿಸಲುಗಳು ಇದಾಗಿದ್ದು, ಒಂದು ಗಂಟೆಗಳ ಕಾಲ‌ ಹರಸಾಹಸಪಟ್ಟು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ವಾಚ್​ಗಾಗಿ ಸ್ನೇಹಿತರ ನಡುವೆ ಜಗಳ; ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಂದ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 2 May 24

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ