ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದ ನಿಂಗಪ್ಪ ವಾಲಿಕಾರ್ ಕುಡಿತಕ್ಕೆ ದಾಸನಾಗಿದ್ದನು. ನಿಂಗಪ್ಪ ಅನೇಕ ಕಡೆ ಸಾಲ ಮಾಡಿದ್ದನು. ಕುಡಿದು ಬಂದು ನಿತ್ಯ ಪತ್ನಿಯೊಂದಿಗೆ ಜಗಳವಾಡುತ್ತಿದ್ದನು. ಮಂಗಳವಾರ (ಏ.09)ರ ರಾತ್ರಿ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ
ಕೊಲೆಯಾದ ಲಕ್ಷ್ಮವ್ವಾ ವಾಲಿಕಾರ್ (ಎಡಚಿತ್ರ) ಆತ್ಮಹತ್ಯೆ ಮಾಡಿಕೊಂಡ ನಿಂಗಪ್ಪ (ಬಲಚಿತ್ರ)
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on: Apr 10, 2024 | 8:52 AM

ಕೊಪ್ಪಳ, ಏಪ್ರಿಲ್​ 10: ಪತಿ ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ (Koppal) ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮವ್ವಾ ವಾಲಿಕಾರ್​ (36) ಕೊಲೆಯಾದವರು. ನಿಂಗಪ್ಪ ವಾಲಿಕಾರ್ (40) ಆತ್ಮಹತ್ಯೆ ಮಾಡಿಕೊಂಡವರು. ಕುಡಿತದ ಚಟಕ್ಕೆ ದಾಸನಾಗಿದ್ದ ನಿಂಗಪ್ಪ ಅನೇಕ ಕಡೆ ಸಾಲ ಮಾಡಿದ್ದನು. ಕುಡಿದು ಬಂದು ನಿತ್ಯ ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದನು.

ಮಂಗಳವಾರ (ಏ.09) ರಾತ್ರಿ ನಿಂಗಪ್ಪ ಪತ್ನಿ ಲಕ್ಷ್ಮವ್ವಾ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬಳಿಕ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಓಡಿ ಹೋಗಲು ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ಮಹಿಳೆಯ ಬಂಧನ

ಕಾಮಗಾರಿ ವೇಳೆ ದೂಳು ಬರುತ್ತಿದೆ ಅಂತ ಹಲ್ಲೆ, NHAI ವಾಹನ ಜಖಂ

ಮಂಗಳೂರು: ಕಾಮಗಾರಿ ವೇಳೆ ದೂಳು ಬರುತ್ತಿದೆ ಅಂತ ಹಲ್ಲೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತುರ್ತು ಸೇವೆ ವಾಹನ (NHAI 1033) ವಾಹನವನ್ನು ಜಖಂಗೊಳಿಸಿರುವ ಘಟನೆ ಮಂಗಳವಾರ (ಏ.09)ರ ಸಂಜೆ 5 ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್​ನ ಕೈಕಂಬ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75ರ ಕಾಮಾಗಾರಿ ನಡೆಯುತ್ತಿತ್ತು. ರಸ್ತೆಯಲ್ಲಿ ದೂಳು ಎದ್ದಿದ್ದಕ್ಕೆ ಕೆಲ ದುಷ್ಕರ್ಮಿಗಳು 20 ಕಾರ್ಮಿಕರಿಗೆ ಕಲ್ಲು ಮತ್ತು ಸ್ಥಳದಲ್ಲಿ ಸಿಕ್ಕ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ