ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಯುವಕನ ಹತ್ಯೆ ಪ್ರಕರಣ! ಮೂವರು ಆರೋಪಿಗಳ ಬಂಧನ

ಅಂದು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ 133 ನೇ‌ ಜಯಂತ್ಯೋತ್ಸವ ಅಂಗವಾಗಿ ಇಡೀ ಕಲಬುರಗಿ ನಗರ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಜಯಂತ್ಯೋತ್ಸವ ಹಿನ್ನಲೆಯಲ್ಲಿ ಅನೇಕ ಕಡೆ ಸಂವಿಧಾನ ಶಿಲ್ಪಿಯ ಭವ್ಯ ಮೆರವಣಿಗೆ ನಡೆಯುತ್ತಿದ್ದವು. ಆದರೆ, ಅದೊಂದು ಸ್ಥಳದಲ್ಲಿ ‌ಮಾತ್ರ ನೆತ್ತರು ಹರಿದಿತ್ತು. ಅಷ್ಟಕ್ಕೂ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಕೊಲೆಗಡುಕರನ್ನ ಖಾಕಿಪಡೆ ಹೆಡೆಮೂರಿ ಕಟ್ಟಿ ಶ್ರೀಕೃಷ್ಣನ ಜನ್ಮಸ್ಥಳಕ್ಕೆ ಕಳುಹಿಸಿದೆ.

ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಯುವಕನ ಹತ್ಯೆ ಪ್ರಕರಣ! ಮೂವರು ಆರೋಪಿಗಳ ಬಂಧನ
ಮೃತ ಯುವಕ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 20, 2024 | 5:27 PM

ಕಲಬುರಗಿ, ಏ.20: ಏಪ್ರಿಲ್ 14, ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜನ್ಮತಾಳಿದ ದಿನ. ಈ ದಿನವನ್ನ ಇಡೀ ದೇಶದ್ಯಾಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಅದರಂತೆ ಅಂದು ಕೂಡ ಕಲಬುರಗಿ (Kalaburagi) ನಗರದ ಅಶೋಕ್ ನಗರ ಬಡಾವಣೆಯ ಜ‌ನ, ಅಂಬೇಡ್ಕರ್‌ ಅವರ ಮೂರ್ತಿ‌ ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ನೂರಾರು ಜನ ಭಾಗಿಯಾಗಿದ್ದರು. ಈ ವೇಳೆ ಅದೇ ಬಡಾವಣೆಯ 21 ವರ್ಷದ ಆಕಾಶ್ ಮತ್ತು ನವೀನ್ ಎಂಬಾತನ ಮಧ್ಯೆ ಮೆರವಣಿಗೆಯಲ್ಲಿ ಡಿಜೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿ ಮಾರಮಾರಿ ಆಗಿದೆ. ಇದರಿಂದ ಕೆರಳಿದ ನವೀನ್, ಅಲ್ಲಿಂದ ತೆರಳಿ ಚಾಕುವಿನೊಂದಿಗೆ ಜೇವರ್ಗಿ ಕ್ರಾಸ್ ಬಳಿ ಬಂದಿದ್ದಾನೆ. ಬಂದಿದ್ದೆ ತಡ ಏಕಾಏಕಿ ಆಕಾಶ್‌ಜಿಗೆ ಚಾಕುವಿನಿಂದ ಮನಬಂದಂತೆ ದೇಹದ ತುಂಬೆಲ್ಲ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಅಶೋಕ್ ನಗರ ಠಾಣೆ ಪೊಲೀಸರು ಪ್ರಮುಖ ಆರೋಪಿ ನವೀನ್ ಮತ್ತು ಆದರ್ಶ್​ ಹಾಗೂ ಅಂಬರೀಶ್ ಸೇರಿದಂತೆ ಮೂವರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನು ಕೊಲೆಯಾಗಿದ್ದ ಆಕಾಶ್ ಎಸ್‌ಎಸ್‌ಎಲ್‌ಸಿ ಮುಗಿಸಿ ಕಾಲೇಜು ‌ಮೆಟ್ಟಿಲು ಹತ್ತದೇ ಗಲ್ಲಿಯಲ್ಲಿ ಓಡಾಡಿಕೊಂಡು ಇದ್ದನು. ಕೊಲೆ ಮಾಡಿದ ನವೀನ್ ಮತ್ತು ಕೊಲೆಯಾದ ಆಕಾಶ್ ಒಂದೇ ಬಡಾವಣೆಯ ನಿವಾಸಿಗಳು ಮತ್ತು ಸ್ನೇಹಿತರು. ಇಬ್ಬರ ಮಧ್ಯೆ ಮೇಲಿಂದ ಮೇಲೆ ಸಣ್ಣಪುಟ್ಟ ಕಾರಣಕ್ಕಾಗಿ ಜಗಳ ನಡಿತಾನೇ ಇತ್ತು. ಸಣ್ಣ ಜಗಳ ಇದೀಗ ಬಾಳಿಬದುಕಬೇಕಾಗಿದ್ದ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ:ಗದಗದಲ್ಲಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಪಕ್ಕದ ಜಿಲ್ಲೆ ಕೊಪ್ಪಳ

ಆಕಾಶ್ ಕೊಲೆಗೆ ಸಂಬಂಧಿಸಿದಂತೆ ಅಶೋಕ್ ನಗರ ಠಾಣೆ ಪೊಲೀಸರು ಮೂವರನ್ನ ಬಂಧಿಸಿ ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಆಕಾಶ್ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯಾ ಅನ್ನೊದರ ಬಗ್ಗೆ ಪೊಲೀಸರು ಇಂಚಿಂಚು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದೆನೇ ‌ಇರಲಿ ಡಾ.ಅಂಬೇಡ್ಕರ್ ಮೆರವಣಿಗೆಯಲ್ಲಿ ಯುವಕನ ನೆತ್ತರು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಆದರೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿದ್ದು ಮಾತ್ರ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ