ಕಲಬುರಗಿ: ಕಲ್ಲಿನಿಂದ ಜಜ್ಜಿ, ಕಾರಿನಲ್ಲಿಟ್ಟು ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ; ಆರೋಪಿ ಅಂದರ್
ಕಲಬುರಗಿ ಜಿಲ್ಲೆಯ ಆಳಂದ(Aland) ಪಟ್ಟಣದ ಹೊರವಲಯದಲ್ಲಿ ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಇದೀಗ ಕೊಲೆ ಆರೋಪಿ ವಿಜಯಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಲಬುರಗಿ, ಏ.30: ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ(Aland) ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ರವಿಕುಮಾರ್(45) ಕೊಲೆಯಾದ ವ್ಯಕ್ತಿ. ಆರೋಪಿ ವಿಜಯ್ ಕುಮಾರ್ ಪತ್ನಿ ಜೊತೆ ಮೃತ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ. ಈ ಹಿನ್ನಲೆ ಮೊದಲು ರವಿಕುಮಾರ್ನನ್ನು ಕೊಂದು ಬಳಿಕ ತನ್ನ ಪತ್ನಿ ನೀಲಮ್ಮಳ ಕೊಲೆಗೂ ಯತ್ನಿಸಿದ್ದಾನೆ.
ಘಟನೆ ವಿವರ
ಪತ್ನಿ ನೀಲಮ್ಮ ಜೊತೆ ರವಿಕುಮಾರ್ ಅನೈತಿಕ ಸಂಬಂಧ ಹೊಂದಿರುವ ವಿಚಾರ ತಿಳಿದ ವಿಜಯ್ ಕುಮಾರ್, ತನ್ನದೇ ಕಾರಿನಲ್ಲಿ ಹೆಂಡತಿ ಮತ್ತು ರವಿಕುಮಾರ್ನನ್ನು ಕರೆದೊಯ್ದಿದ್ದ. ಕಾರಿನಲ್ಲಿ ರವಿಕುಮಾರ್ ಜೊತೆ ಗಲಾಟೆ ತೆಗೆದು ಬಳಿಕ ಕೊಲೆ ಮಾಡಿದ್ದಾನೆ. ಇನ್ನು ಕೊಲೆ ಆರೋಪಿ ವಿಜಯಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಬೆಂಗಳೂರು: ಆನೇಕಲ್ ತಾಲೂಕಿನ ಬಾಗಲೂರು ಮುಖ್ಯರಸ್ತೆಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೈಕ್ಗೆ ಡಿಕ್ಕಿಯಾಗಿ ನಂತರ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನ ಕೂಡ ಪಲ್ಟಿಯಾಗಿದ್ದು, ಕ್ಯಾಂಟರ್ ಚಾಲಕನಿಗೂ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ಕಿಲೋಮೀಟರ್ವರೆಗೆ ಟ್ರಾಫಿಕ್ಜಾಮ್ ಆಗಿದ್ದು, ಸ್ಥಳಕ್ಕೆ ಸರ್ಜಾಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಹಶೀಲ್ದಾರ್ ಕಾರು, ಖಾಸಗಿ ಬಸ್, ಬೈಕ್ ನಡುವೆ ಸರಣಿ ಅಪಘಾತ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚೆಲ್ದಿಗಾನಹಳ್ಳಿ ಬಳಿ ಶ್ರೀನಿವಾಸಪುರ ತಹಶೀಲ್ದಾರ್ ಕಾರು, ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿದೆ. ತಹಶೀಲ್ದಾರ್ ಸುಧೀಂದ್ರ ಪ್ರಯಾಣಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಜಖಂಗೊಂಡಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:43 pm, Tue, 30 April 24