ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !

ಪಕ್ಕದ ಮನೆಯಲ್ಲಿನ ಹಣ ಮತ್ತು ಚಿನ್ನವನ್ನು ಕಳ್ಳತನ ಮಾಡಿ, ನೇರವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋದ ಆರೋಪಿಗಳು, ದೇವಸ್ಥಾನದ ಹುಂಡಿಯಲ್ಲಿ ಹಣ ಹಾಕಿ ಪರಾರಿಯಾಗಿದ್ದಾರೆ. ಇತ್ತ ಹಣ ಕಳೆದುಕೊಂಡ ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರು ಕೆಜಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !
ಸಾಂದರ್ಭಿಕ ಚಿತ್ರ
Follow us
Shivaprasad
| Updated By: ವಿವೇಕ ಬಿರಾದಾರ

Updated on:Apr 12, 2024 | 10:12 AM

ಬೆಂಗಳೂರು, ಏಪ್ರಿಲ್​ 12: ನಕಲಿ ಕೀಲಿಕೈ ಬಳಸಿ ಪಕ್ಕದ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಕಳ್ಳರನ್ನು ಕೆ.ಜಿ.ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕಿರಣ್, ಆನಂದ್, ನಾನಿ ಬಂಧಿಸಿದ ಬಂಧಿತ ಆರೋಪಿಗಳು. ಚಾಮರಾಜಪೇಟೆಯ (Chamrajpete) ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್ಲೇ ಆರೋಪಿಗಳು ಕಳೆದ 15 ವರ್ಷಗಳಿಂದ ವಾಸವಾಗಿದ್ದಾರೆ. ಆರೋಪಿಗಳು ಮಾರ್ಚ್ 29 ರಂದು ನಕಲಿ ಕೀಲಿಕೈ ಬಳಸಿ ಉಮಾ ಅವರ ಮನೆಯಲ್ಲಿದ್ದ 6 ಲಕ್ಷ ಹಣ ಮತ್ತು 3.22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು, ಮಲೈ ಮಹದೇಶ್ವರ (Male Mahadeshwara Betta) ಬೆಟ್ಟಕ್ಕೆ ತೆರಳಿ ದೇವಸ್ಥಾನದ ಹುಂಡಿಗೆ ಹಣ ಹಾಕಿದ್ದರು. ಕೆ.ಜಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ತಮ್ಮ

ನೆಲಮಂಗಲ: ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ತಮ್ಮ ಚಾಕು ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜೋಗಿಪಾಳ್ಯದಲ್ಲಿ ನಡೆದಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಮಂಜುನಾಥ್​ ಅವರನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಚಾಕು ಇರಿದ ಆರೋಪಿಯಾಗಿದ್ದು, ಘಟನೆ ಬಳಿಕ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 58 ಲಕ್ಷ ರೂ. ಮೌಲ್ಯದ ಬಂಗಾರ ವಶ

ನವೀನ್ ಪತ್ನಿ ದಿನಾಮಣಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ. ಕೆಲಸಕ್ಕೆ ಹೋಗುವ ವಿಚಾರವಾಗಿ ಅಣ್ಣ ಮಂಜುನಾಥ್​​ ತಮ್ಮ ನವೀನ್​ ಪತ್ನಿ ದಿನಾಮಣಿ ಅವರನ್ನು ನಿಂದಿಸಿರುವ ಆರೋಪ ಕೇಳಿಬಂದಿತ್ತು. ಇದರಿಂದ ಕೋಪಗೊಂಡ ನವೀನ್​, ಅಣ್ಣ ಮಂಜುನಾಥ್​ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Fri, 12 April 24

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ