ಬೆಂಗಳೂರು: ಹೈಕೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಹೈಕೋರ್ಟ್​ನ ಹಾಲ್ 1ರಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಶ್ರೀನಿವಾಸ್​ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್​ಗೆ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರು: ಹೈಕೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಹೈಕೋರ್ಟ್
Follow us
Ramesha M
| Updated By: ವಿವೇಕ ಬಿರಾದಾರ

Updated on:Apr 03, 2024 | 2:51 PM

ಬೆಂಗಳೂರು, ಏಪ್ರಿಲ್​ 03: ಹೈಕೋರ್ಟ್​ನ (High Court) ಹಾಲ್ 1ರಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರು (Mysore) ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶ್ರೀನಿವಾಸ್ ಅವರಿ​ಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್​ ಮೆಟ್ಟಿಲೇರಿದೆ. ಇಂದು (ಏ.03) ಪ್ರಕರಣ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್​ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ, ಚಾಕುವಿನಂತಹ ಸಣ್ಣ ವಸ್ತುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಶ್ರೀನಿವಾಸ್​ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್​ಗೆ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಭೇಟಿ ನೀಡಿದ್ದಾರೆ. ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ರೈತ ಆತ್ಮಹತ್ಯೆ

ವಿಜಯಪುರ: ಸಾಲಬಾಧೆಯಿಂದ ನೊಂದ ರೈತ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೀಮಪ್ಪ ಡೋಣೂರ (76) ಆತ್ಮಹತ್ಯೆಗೆ ಶರಣಾದ ರೈತ. ಬಸವನಬಾಗೇಬಾಡಿ ತಾಲೂಕಿನ ಹುಣಸ್ಯಾಳ ಗ್ರಾಮದ ಭೀಮಪ್ಪ ಕೈಗಡವಾಗಿ ಸಾಲ ಮಾಡಿಕೊಂಡಿದ್ದನು. ಸಾಲ ಮರುಪಾವತಿ ಮಾಡಲಾರದೆ ರೈತ ಭೀಮಪ್ಪ ನೊಂದಿದ್ದರು. ಸ್ಥಳಕ್ಕೆ ಬಸವನಬಾಗೇಬಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವನಬಾಗೇಬಾಡಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಉಡುಪಿ: ಗಂಡ-ಹೆಂಡತಿ ನಡುವೆ ಜಗಳ; ಮಹಿಳಾ ಪೇದೆ ಆತ್ಮಹತ್ಯೆಗೆ ಶರಣು

ವಿಚಾರಣಾಧೀನ ಕೈದಿ ಸಾವು

ಚಿತ್ರದುರ್ಗ: ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಮೃತಪಟ್ಟಿದ್ದಾನೆ. ಹೊಳಲ್ಕೆರೆ ತಾಲೂಕಿನ ಕಾಗಳಗೆರೆ ಗ್ರಾಮದ ರಮೇಶ್ (36) ಮೃತ ವಿಚಾರಣಾಧೀನ ಕೈದಿ. ರಮೇಶ್ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದನು. ರಮೇಶ್​ಗೆ ಇಂದು (ಏ.03) ಎದೆನೋವು ಕಾಣಿಸಿಕೊಂಡಿತ್ತು. ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾನೆ. ಚಿತ್ರದುರ್ಗ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:44 pm, Wed, 3 April 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ