ಬೆಂಗಳೂರು, ಏಪ್ರಿಲ್ 03: ಹೈಕೋರ್ಟ್ನ (High Court) ಹಾಲ್ 1ರಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಸೂರು (Mysore) ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್ ಮೆಟ್ಟಿಲೇರಿದೆ. ಇಂದು (ಏ.03) ಪ್ರಕರಣ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ, ಚಾಕುವಿನಂತಹ ಸಣ್ಣ ವಸ್ತುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಶ್ರೀನಿವಾಸ್ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್ಗೆ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಭೇಟಿ ನೀಡಿದ್ದಾರೆ. ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ವಿಜಯಪುರ: ಸಾಲಬಾಧೆಯಿಂದ ನೊಂದ ರೈತ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೀಮಪ್ಪ ಡೋಣೂರ (76) ಆತ್ಮಹತ್ಯೆಗೆ ಶರಣಾದ ರೈತ. ಬಸವನಬಾಗೇಬಾಡಿ ತಾಲೂಕಿನ ಹುಣಸ್ಯಾಳ ಗ್ರಾಮದ ಭೀಮಪ್ಪ ಕೈಗಡವಾಗಿ ಸಾಲ ಮಾಡಿಕೊಂಡಿದ್ದನು. ಸಾಲ ಮರುಪಾವತಿ ಮಾಡಲಾರದೆ ರೈತ ಭೀಮಪ್ಪ ನೊಂದಿದ್ದರು. ಸ್ಥಳಕ್ಕೆ ಬಸವನಬಾಗೇಬಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವನಬಾಗೇಬಾಡಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಉಡುಪಿ: ಗಂಡ-ಹೆಂಡತಿ ನಡುವೆ ಜಗಳ; ಮಹಿಳಾ ಪೇದೆ ಆತ್ಮಹತ್ಯೆಗೆ ಶರಣು
ಚಿತ್ರದುರ್ಗ: ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಮೃತಪಟ್ಟಿದ್ದಾನೆ. ಹೊಳಲ್ಕೆರೆ ತಾಲೂಕಿನ ಕಾಗಳಗೆರೆ ಗ್ರಾಮದ ರಮೇಶ್ (36) ಮೃತ ವಿಚಾರಣಾಧೀನ ಕೈದಿ. ರಮೇಶ್ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದನು. ರಮೇಶ್ಗೆ ಇಂದು (ಏ.03) ಎದೆನೋವು ಕಾಣಿಸಿಕೊಂಡಿತ್ತು. ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾನೆ. ಚಿತ್ರದುರ್ಗ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:44 pm, Wed, 3 April 24