ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ

| Updated By: ವಿವೇಕ ಬಿರಾದಾರ

Updated on: Apr 16, 2024 | 1:11 PM

ಕಳೆದ ಒಂದು ವರ್ಷದಿಂದ 6ನೇ ತರಗಿತಿ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
Follow us on

ಮಂಗಳೂರು, ಏಪ್ರಿಲ್​ 16: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ (Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.

ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ಐಪೋನ್​ ಕೊಡಿಸದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ ನಿವಾಸಿ ಬಾಲಕ ಶ್ರವಣಕುಮಾರ ತಳವಾರ ಐಪೋನ್ ಕೊಡಿಸದ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದಾನೆ. ಬಾಲಕ ಶ್ರವಣಕುಮಾರ್​ 10ನೇ ತರಗತಿಯಲ್ಲಿ ಓದುತ್ತಿದ್ದಾನೆ. ಬಾಲಕ ಶ್ರವಣಕುಮಾರ್​ ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಕಳೆದ ಶನಿವಾರ ಮನೆ ಬಿಟ್ಟು ಹೋಗಿದ್ದಾನೆ. ಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದಾರೆ.

ಮನೆಗೆ ನುಗ್ಗಿ ನಗ-ನಾಣ್ಯ ಕದ್ದ ಖದೀಮ

ಬೆಂಗಳೂರು: ಮನೆಯಲ್ಲಿದ್ದ 15 ಲಕ್ಷ ಹಣ, ಚಿನ್ನ ದೋಚಿ ಖದೀಮ ಪರಾರಿಯಾಗಿದ್ದು, ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್​​ ಕೃತ್ಯ ಎಸಗಿದ ಆರೋಪಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Tue, 16 April 24