ಭಾರತ ಮಾತೆ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ಬಂಧನ

| Updated By: ವಿವೇಕ ಬಿರಾದಾರ

Updated on: Apr 10, 2024 | 10:03 AM

ಭಾರತ ಮಾತೆ ಫೋಟೋ​​ವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೋಟೋ ಹರಿಬಿಟ್ಟ ಆರೋಪಿ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಭಾರತ ಮಾತೆ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ಬಂಧನ
ಶಿವಾಜಿನಗರ ಪೊಲೀಸ್​ ಠಾಣೆ
Follow us on

ಬೆಂಗಳೂರು, ಏಪ್ರಿಲ್​ 10: ಭಾರತ ಮಾತೆ (Bharat Mata) ಫೋಟೋ​​ವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ (Shivajinagar Police Station) ದೂರು ದಾಖಲಿಸಿದ್ದಾರೆ. ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ್ದ ಯುವಕ

2024ರ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಈ  ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಇದನ್ನು ಕಂಡ ಹಿಂದೂಪರ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದರು. ಗಜೇಂದ್ರಗಡ ಪೊಲೀಸರು ಆರೋಪಿ ತಾಜುದ್ದೀನ್‌ ದಫೇದಾ‌ರ್​ನನ್ನು ಬಂಧಿಸಿದ್ದರು.

ಯುವತಿಯ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ

ಜೈಲಿನಲ್ಲಿ ಇದ್ದುಕೊಂಡೇ ಯುವತಿಯ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ರೌಡಿಶೀಟರ್​​​ ಮನೋಜ್ ಅಲಿಯಾಸ್​​ ಕೆಂಚ ಬ್ಯ್ಲಾಕ್​ಮೇಲ್ ಮಾಡಿದ ಆರೋಪಿ. ರೌಡಿಶೀಟರ್​​​ ಮನೋಜ್ ಕಳೆದ ವರ್ಷ ಅಗಸ್ಟ್​​ನಲ್ಲಿ ಯುವತಿಯ ತಾಯಿಗೆ ಕರೆ ಮಾಡಿ, ನಿನ್ನ ಮಗಳ ಬೆತ್ತಲೆ ಫೋಟೋವನ್ನು ನಿನ್ನ ಅಳಿಯನಿಗೆ ಕಳುಹಿಸುತ್ತೇನೆ ಅಂತ ಬೆದರಿಕೆ ಹಾಕಿದ್ದನು. ಇದರಿಂದ ಬೆದರಿದ ಯುವತಿಯ ತಾಯಿ, ರೌಡಿಶೀಟರ್​​​ ಮನೋಜ್​​ಗೆ 40 ಸಾವಿರ ಹಣ ನೀಡಿದ್ದರು.

ಇದನ್ನೂ ಓದಿ: ವಿಡಿಯೋ ಕಾಲ್​​ನಲ್ಲಿ ಬೆಂಗಳೂರು ಮಹಿಳೆಯ ಬೆತ್ತಲಾಗಿಸಿ 14.57 ಲಕ್ಷ ರೂ. ಎಗರಿಸಿದ ಸೈಬರ್ ವಂಚಕರು!

ನಂತರ ಫೆಬ್ರವರಿ 9 ರಂದು ಮನೋಜ್​ ಸಹಚರ ಕಾರ್ತಿಕ್​ ಯುವತಿಯ ತಾಯಿಗೆ ವಾಟ್ಸಪ್ ಮೂಲಕ ಕರೆ ಮಾಡಿ, ನಾನು (ಕಾರ್ತಿಕ್​) ಮನೋಜ್​ ಕಡೆಯ ಹುಡುಗ. ನೀವು 5 ಲಕ್ಷ ರೂ. ಕೊಡದಿದ್ದರೆ ನಿಮ್ಮಗಳ ಮಗಳ ನಗ್ನ ಫೋಟೋವನ್ನು ನಿನ್ನ ಅಳಿಯನಿಗೆ ಕಳಸುತ್ತೇನೆ ಅಂತ ಬ್ಲ್ಯಾಕ್​ಮೇಲ್​ ಮಾಡಿದ್ದನು. ಇದಾದ ಬಳಿಕ ಫೆಬ್ರವರಿ 12 ರಂದು ಮನೋಜ್​​ ಜೈಲಿನಿಂದಲೇ ಯುವತಿಯ ತಾಯಿಗೆ ವಾಟ್ಸಾಪ್ ಹಾಗೂ ಮೆಸೆಂಜರ್ ಮೂಲಕ ಕರೆ ಮಾಡಿ, ಹಣ ನೀಡದಿದ್ದರೆ ನಿನ್ನ ಮಗಳ ನಗ್ನ ಫೋಟೋ ರಿವೀಲ್ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದನು.

ಇದರಿಂದ ರೋಸಿಹೋದ ಸಂತ್ರಸ್ತರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ 67, ಐಪಿಸಿ 34 ಅಂಡ್ 384 ಅಡಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Wed, 10 April 24