ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್​ವಾರ್: ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಹತ್ಯೆ

ಶಿವಮೊಗ್ಗದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್​ವಾರ್: ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಹತ್ಯೆ
ಶಿವಮೊಗ್ಗದಲ್ಲಿ ಜೋಡಿ ಕೊಲೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 08, 2024 | 7:45 PM

ಶಿವಮೊಗ್ಗ, ಮೇ.08: ಲೋಕಸಭಾ ಚುನಾವಣೆ ಮತದಾನ ಮುಗಿದ ಮಾರನೇ  ದಿನವಾದ ಇಂದು(ಮೇ.08) ಶಿವಮೊಗ್ಗದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಗೌಸ್(30) ಮತ್ತು ಶೋಹೆಬ್(35) ಕೊಲೆಯಾದ ವ್ಯಕ್ತಿಗಳು. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಹೊಂಡದ ತೀರ್ಥ ತರಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಗುಡ್ಡದ ದೇವಸ್ಥಾನದ ಅರಶಿನ ಹೊಂಡದಲ್ಲಿ ತೀರ್ಥ ತರಲು ಹೋದ ಯುವಕ ಕಾಲು ಜಾರಿ ಬಿದ್ದು ನಿನ್ನೆ(ಮೇ.7) ಸಾವನ್ನಪ್ಪಿದ್ದಾನೆ. ಕೆ. ಗೋಣಿಸ್ವಾಮೀ (24) ಮೃತ ಯುವಕ. ಇತ ಚಿತ್ರದುರ್ಗದ ಸರಸ್ವತಿ ಕಾಲೇಜಿನಲ್ಲಿ ಎಲ್​ಎಲ್​ಬಿ ಓದುತ್ತಿದ್ದ. ಕಾಲೇಜು ರಜೆ ಇದ್ದ ಹಿನ್ನೆಲೆ ಪುಣ್ಯಕ್ಷೇತ್ರದ ಅರಶಿನಹೊಂಡದಲ್ಲಿ ತೀರ್ಥ ತರಲು ಹೋದಾಗ ಈ ದುರ್ಘಟನೆ ನಡೆದಿದೆ. ಸ್ಥಳೀಯರೊಬ್ಬರು ರಕ್ಷಣೆ ಮಾಡಲು ಪ್ರಯತ್ನಿಸಿದರೂ ವಿಫಲವಾಗಿದೆ. ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Wed, 8 May 24

ತಾಜಾ ಸುದ್ದಿ