ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​: ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕ ಬಂಧನ

ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್​​ ಅನ್ನು ಹ್ಯಾಕ್​ ಮಾಡಿ ಆರೋಪಿ ದಿಲೀಪ್ ರಾಜೇಗೌಡ ಕೋಟಿ ಕೋಟಿ ಹಣ ದೋಚುತ್ತಿದ್ದದ್ದು ಹೇಗೆ? ಇಲ್ಲಿದೆ ಸ್ಟೋರಿ

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​: ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕ ಬಂಧನ
ಪ್ರಾತಿನಿಧಿಕ ಚಿತ್ರ
Follow us
|

Updated on:May 16, 2023 | 9:25 AM

ಬೆಂಗಳೂರು: ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು (Cyber Crime) ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ರಾಜೇಗೌಡ ಬಂಧಿತ ಆರೋಪಿ. ಇನ್ನು ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್​ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆಯ (Income Tax Department) ವೆಬ್​ಸೈಟ್​ನಲ್ಲಿನ ಲೋಪವನ್ನು ತಿಳಿದುಕೊಂಡ ಆರೋಪಿ, ಆ ಲೋಪದ ಮೂಲಕ ತೆರಿಗೆ ಕಟ್ಟಿದ್ದವರಿಗೆ ಸಲ್ಲಬೇಕಿದ್ದ ರೀ ಫಂಡ್ಸ್​ ಹಣವನ್ನು​ ತನ್ನ ಖಾತೆಗೆ ಜಾಮಾ ಮಾಡಿಕೊಳ್ಳುತ್ತಿದ್ದನು. ಹೀಗೆ ಆದಾಯ ತೆರಿಗೆ ಇಲಾಖೆಗೆ ಬರೋಬ್ಬರಿ 1,41,84,360 ರೂ. ಹಣವನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ.

ಆರೋಪಿ ಹಣ ದೋಚುತ್ತಿದ್ದದ್ದು ಹೇಗೆ?

ಆದಾಯ ತೆರಿಗೆ ಇಲಾಖೆಗೆ ತೆರಿಗೆ ಕಟ್ಟಿದವರ, ರಿಫಂಡ್ ಖಾತೆಗಳನ್ನು ಹ್ಯಾಕ್​ ಮಾಡುತ್ತಿದ್ದನು. ನಂತರ ತೆರಿಗೆದಾರರ ಹೆಸರಲ್ಲಿ ಬೇರೆ ಬ್ಯಾಂಕ್ ಖಾತೆ ತೆರೆದು ನಕಲಿ ದಾಖಲೆಗಳ ಸಹಿತ, ಕೆವೈಸಿ ಕೂಡ ಸೃಷ್ಟಿ ಮಾಡುತ್ತಿದ್ದನು. ನಂತರ ಆದಾಯ ತೆರಿಗೆ ಇಲಾಖೆ ರಿಫಂಡ್ ಮಾಡಿದ ಹಣವನ್ನು ಆರೋಪಿ ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದನು. ಹೀಗೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ವಿಚಾರಣೆ ವೇಳೆ ಬಹಿರಂಗವಾಗಿದೆ.

ವಿಚಾರಣೆ ವೇಳೆ ಮತ್ತಷ್ಟು ಸೈಬರ್ ವಂಚನೆ ಮಾಡಿರುವುದು ಬೆಳಕಿಗೆ…

ಅರೋಪಿ ಈ ಹಿಂದೆ ಇದೇ ರೀತಿ ಮಾಡಿ 3 ಕೋಟಿ 60 ಲಕ್ಷ ರೂ. ಹಣವನ್ನು ತನ್ನ ಖಾತೆಗೆ ಜಮಾ ಮಾಡಿಕೊಂಡಿದ್ದನು. ಹಾಗೇ ಬಾಜಾಜ್ ಕಾರ್ ಲೋನ್ ಕಂಪನಿಗೆ ನಕಲಿ ದಾಖಲೆ ನೀಡಿ ಸಾಲ ಪಡೆದು ವಂಚಿಸಿದ್ದಾನೆ.

ಅಲ್ಲದೇ ಈತ ಸರ್ಕಾರದ ವೈಬ್​​ ಪೋರ್ಟಲ್​​​ಗೂ ಲಗ್ಗೆ ಇಟ್ಟಿದ್ದು, ಕರ್ನಾಟಕ ಸರ್ಕಾರದ ಕಾವೇರಿ ಆನ್ಲೈನ್ ಪೋರ್ಟಲ್​ನಲ್ಲಿ (ಆಸ್ತಿಗಳನ್ನು ರಿಜಿಸ್ಟರ್ ಮಾಡಲು ಬಳಸುವ ವೆಬ್ ಪೋರ್ಟಲ್) ಅನ್ನು ಕೂಡ ಹ್ಯಾಕ್​ ಮಾಡಲು ಯತ್ನಿಸಿದ್ದಾನೆ. ಸದ್ಯ ಅರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಅಷ್ಟಕ್ಕೂ ಯಾರು ಈ ದಿಲೀಪ್ ರಾಜೆಗೌಡ

ಹಾಸನದ ಹಿರಿಸೇವೆಯಲ್ಲಿ ಹುಟ್ಟಿ ಬೆಳೆದಿದ್ದ ದಿಲೀಪ್ ರಾಜೆಗೌಡ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದನು. ಬಳಿಕ ಧಾರವಾಡದಲ್ಲಿ ನಲೆಸಿದ್ದ ಆರೋಪಿ, ಇಲ್ಲಿಂದಲೇ ಕೃತ್ಯ ಎಸಗುತಿದ್ದನು.

ಈ ಹಿಂದೆ ದಾಖಲಾಗಿದ್ದ ಶ್ರೀಕೃಷ್ಣ ಅಲಿಯಾಸ್ ಹ್ಯಾಕರ್ ಶ್ರೀಕಿ ಕೂಡ ಕಾವೇರಿ ವೆಬ್ ಪೋರ್ಟಲ್​ನಿಂದ ಕೋಟ್ಯಾಂತರ ರೂ. ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಅರೋಪ ಕೇಳಿ ಬಂದಿತ್ತು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Tue, 16 May 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ