ಹನಿಟ್ರ್ಯಾಪ್​ ಜಾಲದಲ್ಲಿ ಸಿಲುಕಿ ಲಕ್ಷ ಲಕ್ಷ ಹಣ ಕಳೆದುಕೊಂಡ ಕರ್ನಾಟಕದ ಮಾಜಿ ಸಿಎಂ ವಿಶೇಷ ಅಧಿಕಾರಿ

ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹನಿಟ್ರ್ಯಾಪ್​ ಜಾಲದಲ್ಲಿ ಸಿಲುಕಿ 6.8 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಹನಿಟ್ರ್ಯಾಪ್​ ಜಾಲದಲ್ಲಿ ಸಿಲುಕಿ ಲಕ್ಷ ಲಕ್ಷ ಹಣ ಕಳೆದುಕೊಂಡ ಕರ್ನಾಟಕದ ಮಾಜಿ ಸಿಎಂ ವಿಶೇಷ ಅಧಿಕಾರಿ
ಸಾಂದರ್ಭಿಕ ಚಿತ್ರ
Follow us
|

Updated on: Aug 08, 2023 | 11:10 AM

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ಸೇವೆ ಸಲ್ಲಿಸಿದ್ದ ಹನಿಟ್ರ್ಯಾಪ್​ ಜಾಲದಲ್ಲಿ ಸಿಲುಕಿ 6.8 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೈಬರ್ ಕ್ರೈಂ (Cyber Crime) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ನಿವಾಸಿಯಾಗಿರುವ 58 ವರ್ಷದ ಅಧಿಕಾರಿ ಜೂ.12 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಅತಿಥಿ ಗೃಹದಲ್ಲಿ ತಂಗಿದ್ದರು. ಅಂದು ಸ್ನಾನದ ನಂತರ ಬಚ್ಚಲು ಮನೆಯಿಂದ ಹೊರ ಬಂದ ಕೂಡಲೇ ವಿಡಿಯೋ ಕರೆಯೊಂದು ಬಂದಿದೆ. ಈ ಕರೆಗೆ ಉತ್ತರಿಸಿದ್ದಾರೆ. ಇವರು ವಿಡಿಯೋ ಕಾಲ್​ನಲ್ಲಿ ಮಾತನಾಡಿದನ್ನು ರೆಕಾರ್ಡ್​ ಮಾಡಿಕೊಂಡು ಬ್ಲ್ಯಾಕ್​ಮೇಲ್ ಮಾಡಲು ಆರಂಭಿಸಿದ್ದಾರೆ.

ಘಟನೆ ನಡೆದ ಮರುದಿನ ಅಧಿಕಾರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದೆ. ಆದರೆ ಅಧಿಕಾರಿ ಕರೆಯನ್ನು ಸ್ವೀಕರಿಸಲಿಲ್ಲ. ಮತ್ತೆ ಮರುದಿನ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಮತ್ತೆ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ನಾನು ಮಹೇಂದ್ರ ಸಿಂಗ್, ರಾಷ್ಟ್ರೀಯ ಹಿಂದಿ ಸುದ್ದಿ ವಾಹಿನಿಯೊಂದರ ವರದಿಗಾರ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮ್ಮ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ನೀವು ಮಹಿಳೆಯೊಂದಿಗೆ ವೀಡಿಯೊ ಕಾಲ್​ನಲ್ಲಿ ಅನುಚಿತವಾಗಿ ವರ್ತಿಸಿದ್ದೀರಿ. ಈ ವಿಡಿಯೋ ನಮಗೆ ಲಭ್ಯವಾಗಿದೆ ಎಂದು ಹೇಳಿದ್ದಾನೆ.

ಇದನ್ನೂ ಓದಿ: Honeytrap: ‘ಮಾರುಕಟ್ಟೆಗೆ ಹೊಸ ಹುಡುಗಿ ಬಂದಿದ್ದಾಳೆ’ ಎಂಬ ಸಂದೇಶಕ್ಕೆ ಸೋತು, ಹನಿಟ್ರ್ಯಾಪ್​​ಗೆ ಸಿಲುಕಿಕೊಂಡ ಉದ್ಯಮಿ

ನಂತರ ಈ ವಿಡಿಯೋವನ್ನು ಯೂಟ್ಯೂಬ್ ಮತ್ತು ಫೇಸ್‌ಬುಕ್​ನಲ್ಲಿ ಹರಿಬಿಡುವುದಾಗಿ ಹೆದರಿಸಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡದಿರಲು ನಾವು ಕೇಳಿದಷ್ಟು ಹಣ ನೀಡು ಎಂದಿದ್ದಾನೆ. ಹಣ ಪಡೆದ ನಂತರ ವಿಡಿಯೋ ಡಿಲೀಟ್​ ಮಾಡುವುದಾಗಿ ಸಿಂಗ್ ಹೇಳಿದ್ದಾನೆ. ಅದರಂತೆ ಅಧಿಕಾರಿ ಆತ ಕೇಳಿದಷ್ಟು ಹಣ ನೀಡಲು ಆರಂಭಿಸಿದ್ದಾರೆ.

ಅಧಿಕಾರಿ ಮೊದಲು 1.5 ಲಕ್ಷ ರೂ. ನಂತರ 50 ಸಾವಿರ ರೂ.ಗಳನ್ನು ಆರೋಪಿ ನೀಡಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಮತ್ತೆ ಜು.14 ರಂದು ಪದೇ ಪದೇ ಕರೆ ಮಾಡಿ ಎರಡು ಪ್ರತ್ಯೇಕ ಬ್ಯಾಂಕ್​ ಖಾತೆಗಳಿಗೆ 2 ಲಕ್ಷ ರೂ. ಹಾಗೂ 2.8 ಲಕ್ಷ ರೂ.ಗಳನ್ನು ವರ್ಗಾಯಿಸುವಂತೆ ಒತ್ತಾಯಿಸಿದ್ದಾನೆ. ಒಟ್ಟು 6.8 ಲಕ್ಷ ರೂ. ಅನ್ನು ಅಧಿಕಾರಿಯಿಂದ ವಂಚಕರು ಸುಲಿಗೆ ಮಾಡಿದ್ದಾರೆ.

ಅದೇ ದಿನ ಮತ್ತೆ ಕರೆ ಮಾಡಿ 7.2 ಲಕ್ಷ ರೂ. ನೀಡುವಂತೆ ಹೇಳಿದಾಗ, ಅಧಿಕಾರಿ ನಗರ ಪೊಲೀಸ್ ಕಮಿಷನರ್‌ ಅವರಿಗೆ ತಿಳಿಸಿ, ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ