AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ

ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಜೈಪುರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸುಖದೇವ್ ಸಿಂಗ್ ಅವರನ್ನು ಶ್ಯಾಮನಗರದಲ್ಲಿರುವ ಅವರ ಮನೆಯ ಹೊರಗೆ ಗುಂಡು ಹಾರಿಸಲಾಗಿದೆ. ಆಗ ಅವರು ಮನೆಯ ಹೊರಗೆ ನಿಂತಿದ್ದರು. ಸ್ಕೂಟರ್‌ನಲ್ಲಿ ಬಂದ ಇಬ್ಬರು ಯುವಕರು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ
ಸುಖದೇವ್ ಸಿಂಗ್ ಗೊಗಮೆಡಿ
ಅಕ್ಷಯ್​ ಪಲ್ಲಮಜಲು​​
|

Updated on:Dec 05, 2023 | 3:52 PM

Share

ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ( Sukhdev Singh Gogamedi) ಅವರನ್ನು ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ರಾಜ್ಯಾಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಮಂಗಳವಾರ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಹತ್ಯೆ ಮಾಡಲಾಗಿದೆ. ಸುಖದೇವ್ ಸಿಂಗ್ ಅವರನ್ನು ಶ್ಯಾಮನಗರದಲ್ಲಿರುವ ಅವರ ಮನೆಯ ಹೊರಗೆ ಗುಂಡು ಹಾರಿಸಲಾಗಿದೆ. ಆಗ ಅವರು ಮನೆಯ ಹೊರಗೆ ನಿಂತಿದ್ದರು. ಸ್ಕೂಟರ್‌ನಲ್ಲಿ ಬಂದ ಇಬ್ಬರು ಯುವಕರು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಸುಖದೇವ್ ಸಿಂಗ್ ಅವರಿಗೆ ಎರಡು ಗುಂಡುಗಳು ತಗುಲಿದ್ದವು. ತಕ್ಷಣ ಅವರನ್ನು ಮಾನಸ ಸರೋವರದಲ್ಲಿರುವ ಮೆಟ್ರೋ ಮಾಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಚಿಕಿತ್ಸೆ ಆರಂಭಿಸಿದ್ದು, ಸ್ವಲ್ಪ ಸಮಯದ ನಂತರ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.

ಸುಖದೇವ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಇಡೀ ಪೊಲೀಸ್ ಆಡಳಿತದಲ್ಲಿ ಆತಂಕ ಮನೆ ಮಾಡಿದೆ. ಸ್ಥಳೀಯ ಪೊಲೀಸರಲ್ಲದೆ, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸುಖದೇವ್ ಸಿಂಗ್ ಗೊಗಮೆಡಿ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಲಾಗಿದೆ. ಶ್ಯಾಮ್ ನಗರದಲ್ಲಿರುವ ಅವರ ನಿವಾಸದ ಮೇಲೆಯೂ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಇದೀಗ ಆಸ್ಪತ್ರೆಯ ಸುತ್ತ ಜನ ಸೇರಿದ್ದು. ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಗುಂಡು ಹಾರಿಸಿದವರು ಯಾರು ಎಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಖಾಲಿ ಲಿಫ್ಟ್ ಶಾಫ್ಟ್‌ಗೆ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

ಸುಖದೇವ್ ಸಿಂಗ್ ಗೊಗಮೇಡಿ ಅವರು ರಾಷ್ಟ್ರೀಯ ಕರ್ಣಿ ಸೇನೆಯೊಂದಿಗೆ ಬಹಳ ಹಿಂದಿನಿಂದಲೂ ಸಂಬಂಧ ಹೊಂದಿದ್ದಾರೆ. ನಂತರ ಇವರೇ ಈ ಸಂಘಟನೆಯಿಂದ ದೂರವಾಗಿ ಪ್ರತ್ಯೇಕ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯನ್ನು ಕಟ್ಟಿದ್ದಾರೆ. ಪದ್ಮಾವತ್ ಸಿನಿಮಾ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಇವರ ಹೆಸರು ಕೇಳಿ ಬರುತ್ತಿತ್ತು.

ಸುಖದೇವ್ ಸಿಂಗ್ ಗೊಗಮೇಡಿ ಹತ್ಯೆ ನಂತರ ರಾಜ್ಯದಲ್ಲಿ ಹೈ ಅಲರ್ಟ್​​​​​ ಘೋಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆ ಮಾಡಿದವರ ಬಗ್ಗೆ ತನಿಖೆ ಮಾಡಲಾಗುವುದು. ಅವರನ್ನು ಪತ್ತೆ ಮಾಡುವ ಕಾರ್ಯಚರಣೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:26 pm, Tue, 5 December 23

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!