AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಗೋವುಗಳನ್ನು ಸಾಗಿಸಿ ತಲೆಮರೆಸಿಕೊಂಡಿದ್ದ 7 ಮಂದಿ ಬಂಧನ

ಆಗಸ್ಟ್ 3 ಮತ್ತು 22 ರಂದು ಅಕ್ರಮವಾಗಿ ಗೋವುಗಳನ್ನ ಸಾಗಿಸಿದ್ದರು. ಗುಣವಂತೆ, ಮಾವಿನಕಟ್ಟಾದಲ್ಲಿ ಗೋವುಗಳನ್ನ ಕದ್ದಿದ್ದರು. ಗೋವುಗಳನ್ನ ಕದ್ದು ಅಕ್ರಮವಾಗಿ ಸಾಗಿಸಿದ್ದ ಖದೀಮರನ್ನು ಬಂಧಿಸಲಾಗಿದೆ.

ಕಾರವಾರ: ಗೋವುಗಳನ್ನು ಸಾಗಿಸಿ ತಲೆಮರೆಸಿಕೊಂಡಿದ್ದ 7 ಮಂದಿ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 25, 2021 | 11:10 PM

Share

ಕಾರವಾರ: ಗೋವುಗಳನ್ನ ಸಾಗಿಸಿ ತಲೆಮರೆಸಿಕೊಂಡಿದ್ದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ವಾಹನ ಚಾಲಕ ಸೇರಿ 7 ಜನರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಹೊನ್ನಾವರ, ಮಂಕಿ ಠಾಣೆಯ ಪೊಲೀಸರಿಂದ ಗೋ ಕಳ್ಳರ ಬಂಧನವಾಗಿದೆ. ಗೋ ಸಾಗಾಟಕ್ಕೆ ಬಳಸಿದ್ದ ಎರಡು ವಾಹನಗಳನ್ನು ಸೀಜ್ ಮಾಡಲಾಗಿದೆ. ಆಗಸ್ಟ್ 3 ಮತ್ತು 22 ರಂದು ಅಕ್ರಮವಾಗಿ ಗೋವುಗಳನ್ನ ಸಾಗಿಸಿದ್ದರು. ಗುಣವಂತೆ, ಮಾವಿನಕಟ್ಟಾದಲ್ಲಿ ಗೋವುಗಳನ್ನ ಕದ್ದಿದ್ದರು. ಗೋವುಗಳನ್ನ ಕದ್ದು ಅಕ್ರಮವಾಗಿ ಸಾಗಿಸಿದ್ದ ಖದೀಮರನ್ನು ಬಂಧಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರಿಂದ ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಮೀನಿನ ಲಾರಿ ಡಿಕ್ಕಿ ಬಸ್​ ಹಾಗೂ ಮೀನಿನ ಲಾರಿ ಡಿಕ್ಕಿಯಾಗಿ ಚಾಲಕರಿಬ್ಬರಿಗೆ ಗಾಯವಾದ ಘಟನೆ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಾಳೆಗುಳಿ ಎಂಬಲ್ಲಿ ಅಪಘಾತ ಸಂಭವಿಸಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಅಕ್ರಮ ಮದ್ಯ ಮಾರಾಟ ತಡೆಗೆ ಫೀಲ್ಡ್​ಗೆ ಇಳಿದಿ ಎಸ್​ಪಿ ನಾನ್​ವೆಜ್​ ಹೋಟೆಲ್​ಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗೆ ಸ್ವತಃ ಹಾಸನ ಎಸ್​ಪಿ ಶ್ರೀನಿವಾಸಗೌಡ ಫೀಲ್ಡ್​ಗಿಳಿದ ಘಟನೆ ಇಂದು (ಆಗಸ್ಟ್ 25) ನಡೆದಿದೆ. ಒಂದೇ ರಸ್ತೆಯಲ್ಲಿ 20ಕ್ಕೂ ಹೆಚ್ಚು ಬಾರ್​ಗಳಿರುವ ಕಡೆ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ, ಬೇಲೂರು ರಿಂಗ್​ ರಸ್ತೆಯ ಹೋಟೆಲ್​ಗಳ ಮೇಲೆ ಎಸ್​ಪಿ ದಾಳಿ ನಡೆಸಿದ್ದಾರೆ. ಬಾರ್​ ಬಳಿ ನಾನ್​ವೆಜ್ ಹೋಟೆಲ್​ ತೆರೆದು ಮದ್ಯ ಸೇವನೆ ಮಾಡುತ್ತಿದ್ದರು. ಹೋಟೆಲ್​ಗಳಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡ್ತಿದ್ದ ಬಗ್ಗೆ ದೂರು ಕೇಳಿಬಂದಿತ್ತು. ಸಾರ್ವಜನಿಕ ವಲಯದಿಂದ ವ್ಯಾಪಕ ದೂರು ಹಿನ್ನೆಲೆಯಲ್ಲಿ ಎಸ್​ಪಿ ದಾಳಿ ನಡೆಸಿದ್ದಾರೆ. ಹೋಟೆಲ್​ಗಳಲ್ಲಿ ಮದ್ಯ ಸೇವಿಸುತ್ತಿದ್ದವರ ಬೈಕ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಿ ಬಾಗಿಲು ಮುಚ್ಚಿಸಿದ್ದಾರೆ.

ಕೋಲಾರ: ಅಕ್ರಮ ಪಡಿತರ ದಾಸ್ತಾನು ರೈಸ್​ ಮಿಲ್​ನಲ್ಲಿ ಅಕ್ರಮವಾಗಿ ಪಡಿತರ ದಾಸ್ತಾನು ಆರೋಪದಡಿ ರೈಸ್​ ಮಿಲ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋಲಾರ ನಗರದ ಕಾರಂಜಿಕಟ್ಟೆಯ 11ನೇ ಕ್ರಾಸ್​ನಲ್ಲಿರುವ ಬಾಲಾಜಿ ರೈಸ್ ಮಿಲ್​ ಮೇಲೆ ದಾಳಿ ಮಾಡಲಾಗಿದೆ. ಆಂಧ್ರ, ತಮಿಳುನಾಡಿನಿಂದ ಪಡಿತರ ಬರುತ್ತಿದ್ದ ಬಗ್ಗೆ ಮಾಹಿತಿ ಕೇಳಿಬಂದು ಸ್ಥಳಕ್ಕೆ ಕೋಲಾರ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ; ಯುವಕ ಸಾವು ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಪ್ಪಲಮಡಗು ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಅಪಘಾತದಿಂದಾಗಿ ತಾವರೆಕೆರೆ ಗ್ರಾಮದ ಚನ್ನಕೇಶವ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಡಿಹೆಚ್​ಒ ಡಾ.ಕೆ. ರಾಮಕೃಷ್ಣ ಅಮಾನತು ಕರ್ತವ್ಯಲೋಪ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ಆರೋಗ್ಯಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಡಿಹೆಚ್​ಒ ರಾಮಕೃಷ್ಣ ವಿರುದ್ಧ ವ್ಯಾಪಕ ದೂರು ಬಂದಿದ್ದವು. ಸಾರ್ವಜನಿಕರ ದೂರು ಆಧರಿಸಿ ಆಯುಕ್ತರಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಕೋಳಿ ಫಾರಂ​ಗೆ ಅಕ್ರಮ ವಿದ್ಯುತ್ ಸಂಪರ್ಕ; 1 ವರ್ಷ ಜೈಲು, 2.94 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್

ರಾಷ್ಟ್ರೀಯ, ರಾಜ್ಯ ಹೆದ್ದಾರಿಯ 40 ಮೀ.‌ ಅಂತರದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ: ಸರ್ಕಾರದ ಸುತ್ತೋಲೆ ಎತ್ತಿಹಿಡಿದ ಕೋರ್ಟ್

Published On - 11:06 pm, Wed, 25 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!