AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Katihar Mayor Murder: ಕತಿಹಾರ್ ಮೇಯರ್ ಬರ್ಬರ ಹತ್ಯೆ; ನಿನ್ನೆ ರಾತ್ರಿ ನಡುರಸ್ತೆಯಲ್ಲೇ ಗುಂಡು ಹಾರಿಸಿ ಕೊಲೆ

Mayor Shivraj Paswan Murder: ಗುರುವಾರ ರಾತ್ರಿ ತಮ್ಮ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದ ಮೇಯರ್ ಶಿವರಾಜ್ ಪಾಸ್ವಾನ್ ಅವ​ರನ್ನು ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.

Katihar Mayor Murder: ಕತಿಹಾರ್ ಮೇಯರ್ ಬರ್ಬರ ಹತ್ಯೆ; ನಿನ್ನೆ ರಾತ್ರಿ ನಡುರಸ್ತೆಯಲ್ಲೇ ಗುಂಡು ಹಾರಿಸಿ ಕೊಲೆ
ಕತಿಹಾರ್ ಮೇಯರ್ ಶಿವರಾಜ್ ಪಾಸ್ವಾನ್
TV9 Web
| Edited By: |

Updated on:Jul 30, 2021 | 10:27 AM

Share

ಪಾಟ್ನಾ: ಬಿಹಾರದ ಕತಿಹಾರ್ ಮೇಯರ್ ಶಿವರಾಜ್ ಪಾಸ್ವಾನ್ (Moyor Shivraj Paswan) ಅವರ ಮೇಲೆ ಗುಂಡು ಹಾರಿಸಿ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ನಡೆಸಿದ ಈ ಕೃತ್ಯಕ್ಕೆ ಬಿಹಾರ (Bihar)  ರಾಜ್ಯವೇ ಬೆಚ್ಚಿಬಿದ್ದಿದೆ. ನಿನ್ನೆ ರಾತ್ರಿ ತಮ್ಮ ಕೆಲಸ ಮುಗಿಸಿಕೊಂಡು, ಮನೆಗೆ ವಾಪಾಸಾಗುತ್ತಿದ್ದ ಮೇಯರ್​ರನ್ನು ಹತ್ಯೆ ಮಾಡಲಾಗಿದೆ.

ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮೇಯರ್ ಶಿವರಾಜ್ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಗಂಭೀರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.

ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕತಿಹಾರ್ ಡಿಎಸ್​ಪಿ ಅಮರ್ ಕಾಂತ್ ಝಾ, ಸಂತೋಷಿ ಮಂದಿರ್ ಚೌಕಿ ಏರಿಯಾ ಬಳಿ ಈ ಹಲ್ಲೆ ನಡೆದಿದೆ. ಕತಿಹಾರ್ ಮೇಯರ್ ಮನೆಗೆ ವಾಪಾಸ್ ತೆರಳುತ್ತಿದ್ದಾಗ ಇಬ್ಬರು ಮುಸುಕುಧಾರಿಗಳು ಅಡ್ಡಗಟ್ಟಿ ಗುಂಡು ಹಾರಿಸಿದ್ದಾರೆ. ಮೂರು ಗುಂಡುಗಳು ಮೇಯರ್ ಶಿವರಾಜ್ ಪಾಸ್ವಾನ್ ಅವರ ಎದೆಗೆ ತಗುಲಿವೆ. ಕತಿಹಾರ್ ಮೆಡಿಕಲ್ ಕಾಲೇಜಿನಲ್ಲಿ ಅವರನ್ನು ದಾಖಲಿಸಲಾಗಿತ್ತು. ಆದರೆ, ಎದೆಯೊಳಗೆ ಬುಲೆಟ್ ತಾಗಿ, ಗಂಭೀರವಾಗಿ ಗಾಯವಾಗಿದ್ದರಿಂದ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ತಮ್ಮ ಮನೆಗೆ ಕೂಗಳತೆ ದೂರದಲ್ಲೇ ಮೇಯರ್ ಶಿವರಾಜ್ ಪಾಸ್ವಾನ್ ಗುಂಡಿನ ದಾಳಿಯಿಂದ ಹೆಣವಾಗಿದ್ದಾರೆ. 9 ತಿಂಗಳ ಹಿಂದಷ್ಟೇ 38 ವರ್ಷದ ಶಿವರಾಜ್ ಪಾಸ್ವಾನ್ ಕತಿಹಾರದ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದರು.

ಇದನ್ನೂ ಓದಿ: Crime News: ಮನೆಯಿಂದ ಓಡಿಹೋಗಿ ಮದುವೆಯಾಗಿದ್ದಕ್ಕೆ ಅಣ್ಣಂದಿರಿಂದಲೇ ತಂಗಿಯ ಬರ್ಬರ ಹತ್ಯೆ

Murder: ಇದು ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Katihar Mayor Murder Shivraj Paswan shot dead near his residence in Bihar on Thursday Night)

Published On - 10:24 am, Fri, 30 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್