Human Sacrifice Case: ಕೇರಳದ ನರಬಲಿ ಪ್ರಕರಣ, ಆರೋಪಿಗಳು ಇನ್ನೂ 9 ದಿನ ಪೊಲೀಸ್ ಕಸ್ಟಡಿಗೆ

ಕೇರಳದ (Kerala) ನರಬಲಿ (human sacrifice) ಪ್ರಕರಣದ ಎಲ್ಲಾ ಆರೋಪಿಗಳನ್ನು ಇನ್ನೂ ಒಂಬತ್ತು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲು ಎರ್ನಾಕುಲಂ ಜಿಲ್ಲೆಯ ಪೆರುಂಬವೂರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆದೇಶವನ್ನು ನೀಡಿದೆ.

Human Sacrifice Case: ಕೇರಳದ ನರಬಲಿ ಪ್ರಕರಣ, ಆರೋಪಿಗಳು ಇನ್ನೂ 9 ದಿನ ಪೊಲೀಸ್ ಕಸ್ಟಡಿಗೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 27, 2022 | 3:20 PM

ಎರ್ನಾಕುಲಂ: ದೇಶದ್ಯಾಂತ ಸದ್ದು ಮಾಡಿದ ಕೇರಳದ (Kerala) ನರಬಲಿ (human sacrifice) ಪ್ರಕರಣದ ಎಲ್ಲಾ ಆರೋಪಿಗಳನ್ನು ಇನ್ನೂ ಒಂಬತ್ತು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲು ಎರ್ನಾಕುಲಂ ಜಿಲ್ಲೆಯ ಪೆರುಂಬವೂರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆದೇಶವನ್ನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಮುಹಮ್ಮದ್ ಶಫಿ, ಭಗವಲ್ ಸಿಂಗ್ ಮತ್ತು ಲೈಲಾನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಈ ಪೊಲೀಸರು ನ್ಯಾಯಲಯದ ಮುಂದೆ ಆರೋಪಿಗಳನ್ನು ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿರಿಸುವಂತೆ ಕೋರಿದರು ಆದರೆ ನ್ಯಾಯಲಯವು ಒಂಬತ್ತು ದಿನಗಳ ಕಾಲ ಮಾತ್ರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ, 12 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ ಎರ್ನಾಕುಲಂನ ಜುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೂವರು ಆರೋಪಿಗಳು ಕೇರಳ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಈ ಆದೇಶವನ್ನು ರದ್ದುಗೊಳಿಸುವಂತೆ ಕೋರಿದರು.

ಇದರ ಜೊತೆಗೆ ತಮ್ಮ ವಿಚಾರಣೆಯ ಸಮಯದಲ್ಲಿ ತಮ್ಮ ವಕೀಲರನ್ನು ಭೇಟಿ ಮಾಡಲು ಅನುಮತಿ ಕೋರಿದರು ಮತ್ತು ಮಾಧ್ಯಮಗಳ ಮೂಲಕ ತಮ್ಮ ತಪ್ಪೊಪ್ಪಿಗೆ ಹೇಳಿಕೆಯ ವಿವರಗಳನ್ನು ಬಿಡುಗಡೆ ಮಾಡದಂತೆ ಕೋರಿದರು. ಇದನ್ನು ಕೇರಳ ಹೈಕೋರ್ಟ್ ಈ ಮನವಿಯನ್ನು ವಜಾಗೊಳಿಸಿದೆ ಆದರೆ ಅವರ ವಕೀಲರನ್ನು ಭೇಟಿ ಮಾಡಲು ಅನುಮತಿ ನೀಡದೆ.

ಇದನ್ನು ಓದಿ; ಕೇರಳದ ನರಬಲಿ ಪ್ರಕರಣ: ಯೌವನ ಕಾಪಾಡುವುದಕ್ಕಾಗಿ ಮಹಿಳೆಯರನ್ನು ಕೊಂದು ತಿಂದ ಆರೋಪಿಗಳು

ಕೇರಳದ ಜನರು ಈ ಘಟನೆಯಿಂದ ಭಯಗೊಂಡಿದ್ದಾರೆ, ಈ ಕಾರಣಕ್ಕಾಗಿ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ. ಎಚ್ಚರಿಕೆ ಕ್ರಮವಾಗಿ 22 ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಆದೇಶವನ್ನು ನೀಡಿದೆ. ಕೆಳ ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಅರ್ಜಿಯಲ್ಲಿ ತಿಳಿಸಿದೆ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವ ಆದೇಶವನ್ನು ರದ್ದುಗೊಳಿಸುವಂತೆ ಕೋರಿದರು.

ಕೇರಳದ ಪತ್ತನಂತಿಟ್ಟ ಜಿಲ್ಲೆಯ (Pathanamthitta) ಎಲಂತೂರ್ ಗ್ರಾಮದಲ್ಲಿ (Elanthoor) ವಾಮಾಚಾರದ ಭಾಗವಾಗಿ ಇಬ್ಬರು ಮಹಿಳೆಯರನ್ನು ಕೊಂದು ಅವರ ದೇಹದ ಭಾಗಗಳನ್ನು ಕತ್ತರಿಸಿದ ‘ನರಬಲಿ’ ಎಂದು ಕರೆಯಲ್ಪಡುವ ಪ್ರಕರಣದ ಇನ್ನಷ್ಟು ಆಘಾತಕಾರಿ ವಿವರಗಳು ಮುನ್ನೆಲೆಗೆ ಬಂದಿವೆ. ಈ ಸಂಬಂಧ ದಂಪತಿ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ದಿನ ನಿತ್ಯದ ಬದುಕು ಸಾಗಿಸಲು ಈ ಮಹಿಳೆಯರು ಬೀದಿಗಳಲ್ಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದರು. ದಂಪತಿಗಳ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅವರ ಜೀವನದಲ್ಲಿ ಸಮೃದ್ಧಿಯನ್ನು ತರಲು ಆರೋಪಿಗಳು ನರಬಲಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 3:20 pm, Thu, 27 October 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್