Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ 5 ವರ್ಷಗಳಿಂದ 60ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ

ಕೇರಳದ ಪಥನಾಂತಿಟ್ಟದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 18 ವರ್ಷದ ಯುವತಿಯೊಬ್ಬಳು ತನ್ನ ಮೇಲೆ ಕಳೆದ ಐದು ವರ್ಷಗಳಲ್ಲಿ 60ಕ್ಕೂ ಹೆಚ್ಚು ಜನರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದಾಳೆ. ಕ್ರೀಡಾಪಟುವಾಗಿರುವ ಯುವತಿ ತನ್ನ ಕೋಚ್​ಗಳು, ಸಹಪಾಠಿಗಳು ಸೇರಿದಂತೆ 64 ಜನ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ. ಆರೋಪಿಗಳ ಫೋನ್‌ಗಳಿಂದ ವಶಪಡಿಸಿಕೊಂಡ ಫೋಟೋಗಳಿಂದ 15 ಜನರನ್ನು ಬಂಧಿಸಲಾಗಿದ್ದು, 40 ಆರೋಪಿಗಳನ್ನು ಯುವತಿ ಈಗಾಗಲೇ ಗುರುತಿಸಿದ್ದಾಳೆ.

ಅಪ್ರಾಪ್ತೆ ಮೇಲೆ 5 ವರ್ಷಗಳಿಂದ 60ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ
Sexual Abuse
Follow us
ಸುಷ್ಮಾ ಚಕ್ರೆ
|

Updated on: Jan 11, 2025 | 5:38 PM

ಪಥನಾಂತಿಟ್ಟ: ಕೇರಳ ಪೊಲೀಸರು ಅಪ್ರಾಪ್ತ ಕ್ರೀಡಾಪಟುವಿನ ಮೇಲೆ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸಹಪಾಠಿಗಳು ಮತ್ತು ಆಕೆಯ ತರಬೇತುದಾರರು ಸೇರಿದಂತೆ 64 ವ್ಯಕ್ತಿಗಳ ವಿರುದ್ಧ 4 ಎಫ್​ಐಆರ್​ ದಾಖಲಿಸಿದ್ದಾರೆ. ಎರಡು ತಿಂಗಳ ಹಿಂದೆ 18 ವರ್ಷ ತುಂಬಿದ ಯುವತಿ ಪಥನಾಂತಿಟ್ಟದಲ್ಲಿ 2 ವರ್ಷಗಳ ಅವಧಿಯಲ್ಲಿ ಹಲವು ಬಾರಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎನ್ನಲಾಗಿದೆ. 5 ವರ್ಷಕ್ಕಿಂತ ಹೆಚ್ಚು ವರ್ಷಗಳಿಂದ ಕೋಚ್​ಗಳಿಂದ ಹಾಗೂ ತನ್ನೊಂದಿಗೆ ಸ್ವಿಮ್ಮಿಂಗ್ ಕ್ಲಾಸ್​ಗೆ ಬರುತ್ತಿದ್ದವರಿಂದ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಪ್ರಾಪ್ತ ಯುವತಿ ಹೇಳಿಕೊಂಡಿದ್ದಾಳೆ.

ಪೊಲೀಸರ ಪ್ರಕಾರ, ಅಪ್ರಾಪ್ತ ಯುವತಿ ಹೇಳಿದಂತೆ 60ಕ್ಕೂ ಹೆಚ್ಚು ಆರೋಪಿಗಳಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಸೂಚಿಸಲಾಗಿದೆ. ಈ ಪ್ರಕರಣದ ಐವರು ಆರೋಪಿಗಳು ಪಥನಾಂತಿಟ್ಟ ನಿವಾಸಿಗಳಾಗಿದ್ದಾರೆ. ಬಂಧಿತರ ಮೊಬೈಲ್ ಫೋನ್‌ಗಳಲ್ಲಿನ ಫೋಟೋಗಳಿಂದ ತನ್ನ ಮೇಲೆ ಅತ್ಯಾಚಾರವೆಸಗಿದ ಇತರ 40 ಜನರನ್ನು ಯುವತಿ ಗುರುತಿಸಿದ್ದಾಳೆ.

ಇದನ್ನೂ ಓದಿ: ತಂದೆ, ಚಿಕ್ಕಪ್ಪ, ಅಜ್ಜನಿಂದ ಬಾಲಕಿ ಮೇಲೆ ಅತ್ಯಾಚಾರ, ಆಕೆ ಈಗ ಎರಡು ತಿಂಗಳ ಗರ್ಭಿಣಿ

ಕ್ರೀಡಾಪಟುವಾಗಿರುವ ದಲಿತ ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದಾಗ ವಿವಿಧ ಸ್ಥಳಗಳಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 15 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 16ನೇ ವಯಸ್ಸಿನಿಂದ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿರುವ 18 ವರ್ಷದ ಯುವತಿಯ ಹೇಳಿಕೆಯ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಆಕೆಯ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳು ಸೇರಿದಂತೆ ಹಲವು ವ್ಯಕ್ತಿಗಳು ಆ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬುದಕ್ಕೆ ಪುರಾವೆಗಳು ದೊರೆತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹಣಕ್ಕಾಗಿ ಗೆಳೆಯರಿಗೆ ಹೆಂಡತಿ ಮೇಲೆ ಅತ್ಯಾಚಾರವೆಸಗಲು ಹೇಳಿದ ಗಂಡ

ಈ ಪ್ರಕರಣದಲ್ಲಿ 60ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆಂದು ಶಂಕಿಸಲಾಗಿದ್ದು, ಪಥನಾಂತಿಟ್ಟದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪಥನಾಂತಿಟ್ಟ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪಥನಾಂತಿಟ್ಟ ಜಿಲ್ಲೆಯ ಹೊರಗಿನ ವ್ಯಕ್ತಿಗಳು ಸಹ ಈ ಪ್ರಕರಣದಲ್ಲಿ ಭಾಗಿಯಾಗಿರಬಹುದು ಎಂದು ಹೇಳಿದೆ.

ಸಿಡಬ್ಲ್ಯೂಸಿ ಅಧ್ಯಕ್ಷರ ಪ್ರಕಾರ, ಆ ಹುಡುಗಿಗೆ 13ನೇ ವಯಸ್ಸಾದಾಗಿನಿಂದಲೂ ಆಕೆ ಲೈಂಗಿಕ ಶೋಷಣೆಗೆ ಬಲಿಯಾಗಿದ್ದಾಳೆ. ಇದು ಅಸಾಮಾನ್ಯ ಪ್ರಕರಣವಾದ್ದರಿಂದ, ಹೆಚ್ಚಿನ ಸಮಾಲೋಚನೆಗಾಗಿ ಅವಳನ್ನು ಮನಶ್ಶಾಸ್ತ್ರಜ್ಞರ ಬಳಿಗೆ ಕರೆದೊಯ್ಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ