Shocking News: ಬಸ್​ನಲ್ಲಿ ಮಗಳ ಮೈ ಮುಟ್ಟಿದ ಕುಡುಕನ ಮೂಗು ಮುರಿದ ತಾಯಿ

Crime News Today: ಬಸ್​ನಲ್ಲಿ ಹೋಗುತ್ತಿದ್ದಾಗ ತನ್ನ ಮಗಳ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕುಡುಕನ ಮೂಗನ್ನು ಆ ಬಾಲಕಿಯ ಕೇರಳದ ಮಹಿಳೆಯೊಬ್ಬರು ಮುರಿದಿರುವ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ.

Shocking News: ಬಸ್​ನಲ್ಲಿ ಮಗಳ ಮೈ ಮುಟ್ಟಿದ ಕುಡುಕನ ಮೂಗು ಮುರಿದ ತಾಯಿ
ಲೈಂಗಿಕ ಕಿರುಕುಳ ನೀಡಿದ ಕುಡುಕನ ಮೂಗು ಮುರಿದು ಹಾಕಿದ ತಾಯಿ Image Credit source: Mathrubhumi
Follow us
ಸುಷ್ಮಾ ಚಕ್ರೆ
|

Updated on:Jun 26, 2024 | 9:45 PM

ಕೊಟ್ಟಾಯಂ: ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಎಸಗಿದ 59 ವರ್ಷದ ವ್ಯಕ್ತಿಯೊಬ್ಬನಿಗೆ ಮಹಿಳೆ ಗುದ್ದಿದ್ದಾಳೆ. ಈ ವೇಳೆ ಆ ಕುಡುಕನ ಮೂಗಿನಲ್ಲಿ ರಕ್ತ ಸೋರತೊಡಗಿದೆ. ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಪಿಯುಸಿ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ನೆಲ್ಲಿಮುಕಲ್ ಜಂಕ್ಷನ್‌ನಲ್ಲಿ ಈ ಘಟನೆ (Shocking News) ನಡೆದಿದೆ. ಕೂಡಲೇ ಆಕೆಗೆ ಕಿರುಕುಳ ನೀಡಿದ ಕುಡುಕನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆಕೆಯ ಮಗಳು ಬಸ್ ಇಳಿಯುವಾಗ ಪಿಳ್ಳೈ ಎಂಬಾತ ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಸ್‌ನಿಂದ ಇಳಿದ ಬಳಿಕ ಬಾಲಕಿ ತನ್ನ ತಾಯಿಗೆ ಫೋನ್ ಮಾಡಿ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ: ನಾಶ ಪಡಿಸಿದ್ದ ಮೊಬೈಲ್​ಗಳ ಮಾಹಿತಿ ಹೊರತೆಗೆಯಲಿರುವ ಪೊಲೀಸರು

ಇದರಿಂದ ಕೋಪಗೊಂಡ ತಾಯಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಿಚಾರಿಸಿದ್ದಾರೆ. ಪಿಳ್ಳೈ ಆಗ ಕುಡಿತದ ಅಮಲಿನಲ್ಲಿ ಆ ಮಹಿಳೆಯ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆಕೆ ಆತನ ಕೈ ಹಿಡಿದು, ಆತನ ಮೂಗಿಗೆ ಗುದ್ದಿದ್ದಾಳೆ. ಇದರಿಂದ ಆತನ ಮೂಗು ಮುರಿದುಹೋಗಿದೆ. ಬಳಿಕ ಪೋಲೀಸರು ಪಿಳ್ಳೈಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆತನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಿದ್ದಾರೆ.

ಆ ಕುಡುಕನ ಮುಖಕ್ಕೆ ಹೊಡೆದು ಮೂಗು ಮುರಿದು ರಕ್ತ ಸುರಿದಿರುವ ಕಾರಣದಿಂದ ಪೊಲೀಸರು ಮಹಿಳೆಯ ಮೇಲೆ ಐಪಿಸಿಯ ಸೆಕ್ಷನ್ 325 (ಘೋರವಾದ ಗಾಯವನ್ನು ಉಂಟುಮಾಡುತ್ತದೆ) ಅಡಿಯಲ್ಲಿ ಆರೋಪ ಹೊರಿಸುವ ಸಾಧ್ಯತೆಯಿದೆ. ಪೊಲೀಸರು ಪೋಕ್ಸೊ ದೂರು ದಾಖಲಿಸಿದ್ದು, ಆತ್ಮರಕ್ಷಣೆಗಾಗಿ ಈ ಕೃತ್ಯ ಎಸಗಿದ್ದೇನೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಪೊಲೀಸರು ತಾಯಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಆಕೆಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈದ್ಯಕೀಯ ವರದಿಗಳು ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಗಣಿಸುತ್ತಾರೆ. ಆರೋಪಿಯ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 26 June 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?