ಕೇರಳ: ಅಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ; ಬಾಣಂತಿ, ಮಗು ಸಾವು

ಯಾಸ್ ಅವರ ಪತ್ನಿ ಶಮೀರಾ ಬೀವಿ (36) ಮತ್ತು ಅವರ ನವಜಾತ ಶಿಶು ಮಂಗಳವಾರ ಸಾವಿಗೀಡಾಗಿದೆ. ಮಂಗಳವಾರ ಮನೆಯಲ್ಲಿ ಹೆರಿಗೆ ವೇಳೆ ಅತಿಯಾದ ರಕ್ತಸ್ರಾವವಾಗಿ ಶಮೀರಾ ಪ್ರಜ್ಞೆ ತಪ್ಪಿದ್ದರು. ನಂತರ ನಯಾಸ್ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಕಿಲ್ಲಿಪಾಲಂನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ತಾಯಿ ಮತ್ತು ಮಗು ಸಾವಿಗೀಡಾಗಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಕೇರಳ: ಅಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ; ಬಾಣಂತಿ, ಮಗು ಸಾವು
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Feb 22, 2024 | 8:46 PM

ತಿರುವನಂತಪುರಂ ಫೆಬ್ರುವರಿ 22: ಮನೆಯಲ್ಲಿ ಹೆರಿಗೆ ವೇಳೆ ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣದಲ್ಲಿ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳದ (kerala) ತಿರುವನಂತಪುರಂ ಜಿಲ್ಲೆಯ ಕಾರೈಕ್ಕಾಮಂಡಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿರುವ ಪೂಂತುರಾ ಮೂಲದ ನಯಾಸ್ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ನಯಾಸ್ ಅವರ ಪತ್ನಿ ಶಮೀರಾ ಬೀವಿ (36) ಮತ್ತು ಅವರ ನವಜಾತ ಶಿಶು ಮಂಗಳವಾರ ಸಾವಿಗೀಡಾಗಿದೆ. ಮಂಗಳವಾರ ಮನೆಯಲ್ಲಿ ಹೆರಿಗೆ ವೇಳೆ ಅತಿಯಾದ ರಕ್ತಸ್ರಾವವಾಗಿ ಶಮೀರಾ ಪ್ರಜ್ಞೆ ತಪ್ಪಿದ್ದರು. ನಂತರ ನಯಾಸ್ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಕಿಲ್ಲಿಪಾಲಂನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ತಾಯಿ ಮತ್ತು ಮಗು ಸಾವಿಗೀಡಾಗಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಗರ್ಭಿಣಿಯಾಗಿರುವ ಶಮೀರಾ ಅವರಿಗೆ ಆಸ್ಪತ್ರೆಯಿಂದ ಚಿಕಿತ್ಸೆ ಕೊಡಿಸುವಂತೆ ಒತ್ತಾಯಿಸಿದ್ದಕ್ಕೆ ನಯಾಸ್ ಆರೋಗ್ಯ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಒಂದು ತಿಂಗಳ ಹಿಂದೆ ಶಮೀರಾ ಅಸ್ವಸ್ಥಗೊಂಡಿರುವ ಬಗ್ಗೆ ನೆರೆಹೊರೆಯವರು ಹೇಳಿದಾಗ ನಯಾಸ್ ಅವರ ಮೊದಲ ಪತ್ನಿ ಮತ್ತು ಮಗಳು ಬಂದು ಅವರನ್ನು ಕರೆದುಕೊಂಡು ಹೋಗಿದ್ದರು. ಮರಳಿ ಮನೆಗೆ ಬಂದ ನಂತರ ಶಮೀರಾ ಬೀವಿ ಯಾರೊಂದಿಗೂ ಮಾತನಾಡಲಿಲ್ಲ.

ಆಶಾ ಕಾರ್ಯಕರ್ತೆಯರು ಮನೆ ತಲುಪಿದಾಗ ನಯಾಸ್ ಅವರನ್ನು ಗದರಿಸಿದ್ದರು. ಪತ್ನಿಯನ್ನು ಹೇಗೆ ನೋಡಿಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ನೆರೆಹೊರೆಯವರು, ಆಶಾ ಕಾರ್ಯಕರ್ತೆಯರು ಅಡ್ಡಿಪಡಿಸಬಾರದು ಎಂದು ನಯಾಸ್ ಗದರಿದ್ದರು. ನಯಾಸ್ ಪತ್ನಿಗೆ ಅಕ್ಯುಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಕ್ಯುಪಂಕ್ಚರ್ ಚಿಕಿತ್ಸೆಯ ಮೂಲಕ ಹೆರಿಗೆ ಮಾಡುವಂತೆ ನಯಾಸ್ ಪತ್ನಿಗೆ ಹೇಳಿದ್ದನ ಎಂದು ನೆರೆಹೊರೆಯವರು ಹೇಳಿರುವುದಾಗಿ ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.  ಶಮೀರಾ ಅವರ ಮೊದಲ ಹೆರಿಗೆ ನೆಡುಮಂಙಾಡ್ ನಲ್ಲಿ ಆಗಿತ್ತು. ಆಗಲೂ ಪತಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರಲಿಲ್ಲ. ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಮೃತನ ತಂದೆಗೆ ಹಾಸ್ಟೆಲ್ ವಾರ್ಡನ್ ಕರೆ ಮಾಡಿ ಹೇಳಿದ್ದೇನು? ಇಲ್ಲಿದೆ ಆಡಿಯೋ ಸಂಭಾಷಣೆ

ವಾರ್ಡ್ ಕೌನ್ಸೆಲರ್ ಯು.ದೀಪಿಕಾ ಕೂಡ ಪ್ರತಿಕ್ರಿಯಿಸಿದ್ದು, ಶಮೀರಾ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಬಯಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಮನೆಗೆ ಬಂದಾಗ ನಯಾಸ್ ಬಾಗಿಲು ತೆರೆಯಲಿಲ್ಲ. ಕೇರಳದಲ್ಲಿ ಚಿಕಿತ್ಸಾ ವ್ಯವಸ್ಥೆ ಸರಿಯಿಲ್ಲ ಎಂದು ಪತಿ ಹಠ ಹಿಡಿದಿದ್ದು, ಈ ಹಿಂದೆ ಸಿಸೇರಿಯನ್ ಮಾಡಿದ್ದು ತಪ್ಪಾಗಿದೆ. ಹಾಗಾಗಿ ನಾರ್ಮಲ್ ಡೆಲಿವರಿಮಾಡಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ನಾನು ಪೊಲೀಸರನ್ನು ಕರೆದುಕೊಂಡು ಹೋದಾಗ ಇನ್ನು ಮುಂದೆ ತನ್ನ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದಿದ್ದರು ಶಮೀರಾ ಎಂದು ವಾರ್ಡ್ ಕೌನ್ಸಿಲರ್ ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ