CCB ಪೊಲೀಸರ ಕಾರ್ಯಾಚರಣೆ: ಖಲಿಸ್ತಾನದ ಪ್ರತ್ಯೇಕತಾವಾದಿ ಬೆಂಗಳೂರಲ್ಲಿ ಅರೆಸ್ಟ್​

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಬಹುದೊಡ್ಡ ಕಾರ್ಯಾಚರಣೆ ನಡೆಸಿ ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬಂಧಿಸಿದ್ದಾರೆ. ಕಳೆದ 6 ತಿಂಗಳಿಂದ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ವಾಸವಿದ್ದ ಜರ್ನಲ್ ಸಿಂಗ್ ಸಿದ್ದುರನ್ನು ಅರೆಸ್ಟ್ ಮಾಡಿದ್ದಾರೆ. ಮೂಲತಹ ಹೈದರಾಬಾದ್​ ನಿವಾಸಿಯಾದ ಜರ್ನಲ್ ಸಿಂಗ್ ಸಿದ್ದು ಸಂಪಿಗೆಹಳ್ಳಿಯ ರಾಧಾಕೃಷ್ಣ ಪಿಜಿಯಲ್ಲಿ ವಾಸವಿದ್ದ. ಇಂಜಿನಿಯರಿಂಗ್ ಮಾಡಿಕೊಂಡಿದ್ದ ಸಿದ್ದು, ನಗರದ ಬಾಗಮನೆ ಟೆಕ್ ಪಾರ್ಕ್​ನಲ್ಲಿ ಕೆಲಸ ಮಾಡುತ್ತಿದ್ದ. ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದ ಜರ್ನಲ್ ಸಿಂಗ್, ಸಿಖ್ ಧರ್ಮದವರಿಗಾಗಿಯೇ ಪ್ರತ್ಯೇಕ ದೇಶಬೇಕು ಎಂದು ಹೋರಾಟ ಮಾಡುತ್ತಿದ್ದ. ಪಂಜಾಬ್ […]

CCB ಪೊಲೀಸರ ಕಾರ್ಯಾಚರಣೆ: ಖಲಿಸ್ತಾನದ ಪ್ರತ್ಯೇಕತಾವಾದಿ ಬೆಂಗಳೂರಲ್ಲಿ ಅರೆಸ್ಟ್​
Follow us
ಸಾಧು ಶ್ರೀನಾಥ್​
|

Updated on: Jan 12, 2020 | 2:06 PM

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಬಹುದೊಡ್ಡ ಕಾರ್ಯಾಚರಣೆ ನಡೆಸಿ ಖಲಿಸ್ತಾನದ ಪ್ರತ್ಯೇಕತಾವಾದಿಯನ್ನು ಬಂಧಿಸಿದ್ದಾರೆ. ಕಳೆದ 6 ತಿಂಗಳಿಂದ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ವಾಸವಿದ್ದ ಜರ್ನಲ್ ಸಿಂಗ್ ಸಿದ್ದುರನ್ನು ಅರೆಸ್ಟ್ ಮಾಡಿದ್ದಾರೆ.

ಮೂಲತಹ ಹೈದರಾಬಾದ್​ ನಿವಾಸಿಯಾದ ಜರ್ನಲ್ ಸಿಂಗ್ ಸಿದ್ದು ಸಂಪಿಗೆಹಳ್ಳಿಯ ರಾಧಾಕೃಷ್ಣ ಪಿಜಿಯಲ್ಲಿ ವಾಸವಿದ್ದ. ಇಂಜಿನಿಯರಿಂಗ್ ಮಾಡಿಕೊಂಡಿದ್ದ ಸಿದ್ದು, ನಗರದ ಬಾಗಮನೆ ಟೆಕ್ ಪಾರ್ಕ್​ನಲ್ಲಿ ಕೆಲಸ ಮಾಡುತ್ತಿದ್ದ. ಪ್ರತ್ಯೇಕ ಖಲಿಸ್ತಾನ ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದ ಜರ್ನಲ್ ಸಿಂಗ್, ಸಿಖ್ ಧರ್ಮದವರಿಗಾಗಿಯೇ ಪ್ರತ್ಯೇಕ ದೇಶಬೇಕು ಎಂದು ಹೋರಾಟ ಮಾಡುತ್ತಿದ್ದ. ಪಂಜಾಬ್ ಅನ್ನು ಪ್ರತ್ಯೇಕ‌ ಖಲಿಸ್ತಾನ ಮಾಡಬೇಕೆಂದು ನಿರಂತರ ಹೋರಾಟ ಮಾಡುತ್ತಿದ್ದ.

ಕೇಸ್ ದಾಖಲಾಗುತ್ತಿದ್ದಂತೆ ಬೆಂಗಳೂರಿಗೆ ಎಸ್ಕೇಪ್ ಆಗಿದ್ದ: ತೆಲಂಗಾಣದವನಾಗಿದ್ದರು ಪಂಜಾಬ್​ನಲ್ಲಿ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ. ಸಿಖ್ ಧರ್ಮದ ವಿರುದ್ಧ ಕೆಲಸ ಮಾಡುವವರ ವಿರುದ್ಧ ಸಮರ ಸಾರುತ್ತಿದ್ದ. ಗಲಾಟೆಯೊಂದರಲ್ಲಿ ಪಂಜಾಬ್​ನ ಮೊಹಾಲಿಯಲ್ಲಿ ಜರ್ನಲ್ ಸಿಂಗ್ ಮೇಲೆ ಪ್ರಕರಣ ದಾಖಲಾಗಿತ್ತು. 2019ರ ಫೆಬ್ರವರಿ ತಿಂಗಳಲ್ಲಿ ಮೊಹಾಲಿಯಲ್ಲಿ ಆಂತರಿಕ ಭದ್ರತಾ ವಿಭಾಗ ಪ್ರಕರಣ ದಾಖಲಿಸಿತ್ತು. ಕೇಸ್ ದಾಖಲಾಗುತ್ತಿದ್ದಂತೆ ಮೊಹಾಲಿಯಿಂದ ಬೆಂಗಳೂರಿಗೆ ಎಸ್ಕೇಪ್ ಆಗಿದ್ದ ಆರೋಪಿ.

ಜರ್ನಲ್ ಸಿಂಗ್ ಸಿದ್ದು, ಪಾಕಿಸ್ತಾನದ ಐಎಸ್ಐ ಏಜೆಂಟ್ ನಿಹಾಲ್ ಸಿಂಗ್ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಪ್ರತ್ಯೇಕ ಖಲಿಸ್ತಾನದ ಹೋರಾಟಕ್ಕೆ ಸಹಾಯ ಮಾಡುವಂತೆ ಮನವಿ ಮಾಡಿದ್ದ. ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದ ಪಂಜಾಬ್ ಪೊಲೀಸರು, ಬೆಂಗಳೂರು ಸಿಸಿಬಿ ಪೊಲೀಸರಿಗೆ ಮನವಿ ಮಾಡಿದ್ದರು. ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಆಪರೇಷನ್ ನಡೆಸಿದ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿ ಪಂಜಾಬ್ ಪೊಲೀಸರಿಗೆ ಒಪ್ಪಿಸಿದ್ದಾರೆ.

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ