AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಬೆನ್ನಲ್ಲೇ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಕಿಡ್ನಾಪ್!

ಹಾವೇರಿ ಜಿಲ್ಲೆಯ ಹಾನಗಲ್​ನಲ್ಲಿ ನಡೆದ ಮುಸ್ಲಿಂ ಮಹಿಳೆಯ ಗ್ಯಾಂಗ್ ರೇಪ್ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಹಾನಗಲ್ ಪಟ್ಟಣದಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕಿಡ್ನಾಪ್ ಮಾಡಿದ ಪ್ರಕರಣ ನಡೆದಿದೆ. ಅಫ್ತಾಬ್​ ವಿರುದ್ಧ ಯುವತಿಯ ಪೋಷಕರು ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಬೆನ್ನಲ್ಲೇ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಕಿಡ್ನಾಪ್!
ಗ್ಯಾಂಗ್​ರೇಪ್ ಪ್ರಕರಣ ಬೆನ್ನಲ್ಲೇ ಹಾನಗಲ್​ನಲ್ಲಿ ಹಿಂದೂ ಯುವತಿಯ ಕಿಡ್ನಾಪ್; ಮುಸ್ಲಿಂ ಯುವಕನ ವಿರುದ್ಧ ದೂರು ದಾಖಲು
TV9 Web
| Edited By: |

Updated on:Jan 13, 2024 | 6:35 PM

Share

ಹಾವೇರಿ, ಜ.13: ಜಿಲ್ಲೆಯ ಹಾನಗಲ್​ನಲ್ಲಿ (Hanagal) ನಡೆದ ಮುಸ್ಲಿಂ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಹಾನಗಲ್ ಪಟ್ಟಣದಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕಿಡ್ನಾಪ್ (Kidnap) ಮಾಡಿದ ಪ್ರಕರಣ ನಡೆದಿದೆ.

ಹಾನಗಲ್ ಪಟ್ಟಣದ ನಿವಾಸಿ ಅಪ್ತಾಬ್ ಎಂಬ ಯುವಕ ಕಿಡ್ನಾಪ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ತಂದೆ ದೂರು ನೀಡಿದ್ದು, ಹಾನಗಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಸಿಲಾಗಿದೆ.

ಮಲ್ಲಿಗಾರ್ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ‌ನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿ, ಎಂದಿನಂತೆ ಮನೆಯಿಂದ ಕಾಲೇಜ್​ಗೆ ಹೋಗಿದ್ದಾಳೆ. ಆದರೆ, ವಾಪಸ್ ಮನೆಗೆ ಹಿಂದಿರುಗಿರಲಿಲ್ಲ. ಹಾನಗಲ್​ನ ಅಪ್ತಾಬ್ ಎಂಬ ಯುವಕನೇ ಅಪಹರಣ ಮಾಡಿದ್ದಾನೆಂದು ಪೋಷಕರು ದೂರು ನೀಡಿದ್ದಾರೆ.

ಇದನ್ನೂ ಓದಿ: ಹಾವೇರಿ: ಗ್ಯಾಂಗ್​ ರೇಪ್​ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್​ಗಿರಿ ಕೇಸ್

ಇತ್ತೀಚೆಗಷ್ಟೇ ಹಾನಗಲ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ ನಡೆದಿತ್ತು. ಈ ಪ್ರಕರಣವು ನಂತರ ಗ್ಯಾಂಗ್ ರೇಪ್ ಪ್ರಕರಣವಾಗಿ ಬದಲಾಗಿತ್ತು. ಹಿಂದೂ ವಿವಾಹಿತ ಪುರುಷ ಹಾಗೂ ಮುಸ್ಲಿಂ ವಿವಾಹಿತ ಮಹಿಳೆ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದ ವಿಚಾರ ತಿಳಿದ ಮುಸ್ಲಿಂ ಯುವಕರು ದಾಳಿ ನಡೆಸಿ ನೈತಿಕ ಪೊಲೀಸ್​ಗಿರಿ ನಡೆಸಿದ್ದರು.

ಹಿಂದೂ ಹುಡಗರ ಜೊತೆ ಕಾಣಿಸಿಕೊಂಡ ಮುಸ್ಲಿಂ ಹುಡುಗಿಯರು, ಮಹಿಳೆಯರನ್ನ ಟಾರ್ಗೆಟ್ ಮಾಡುತ್ತಿದ್ದ ಈ ಆರೋಪಿಗಳು, ಜೋಡಿ ಹಕ್ಕಿಗಳ ಮೇಲೆ‌ ಅಟ್ಯಾಕ್ ಮಾಡಿ ಹುಡುಗಿಯರನ್ನ ಎಳೆದೊಯ್ಯುತ್ತಿದ್ದರು. ಅದೇ ರೀತಿ ಹೊಟೇಲ್​ನಿಂದ ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿತ್ತು.

ಇದಾದ ನಂತರ ಆ ಮಹಿಳೆಯನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಏಳು ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಒಬ್ಬರಾದ ಮೇಲೆ ಒಬ್ಬರು ನನ್ನ ರೇಪ್ ಮಾಡಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಳು. ಮತ್ತೊಂದೆಡೆ, ತನ್ನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆಯ ಪತಿ ಕೂಡ ಹೇಳಿಕೆ ನೀಡಿದ್ದು, ಅರಣ್ಯದಲ್ಲಿ ರೇಪ್ ಮಾಡಿದ್ದ ವಿಡಿಯೋ ಇದೆ ಎಂದು ಆರೋಪಿಸಿದ್ದರು.

ವರದಿ: ರವಿ ಹುಗಾರ್, ಟಿವಿ9 ಹಾವೇರಿ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Sat, 13 January 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?