ಹಾವೇರಿ, ಜ.13: ಜಿಲ್ಲೆಯ ಹಾನಗಲ್ನಲ್ಲಿ (Hanagal) ನಡೆದ ಮುಸ್ಲಿಂ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಹಾನಗಲ್ ಪಟ್ಟಣದಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕಿಡ್ನಾಪ್ (Kidnap) ಮಾಡಿದ ಪ್ರಕರಣ ನಡೆದಿದೆ.
ಹಾನಗಲ್ ಪಟ್ಟಣದ ನಿವಾಸಿ ಅಪ್ತಾಬ್ ಎಂಬ ಯುವಕ ಕಿಡ್ನಾಪ್ ಮಾಡಿದ್ದಾನೆ ಎಂದು ಆರೋಪಿಸಿ ಯುವತಿಯ ತಂದೆ ದೂರು ನೀಡಿದ್ದು, ಹಾನಗಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಸಿಲಾಗಿದೆ.
ಮಲ್ಲಿಗಾರ್ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿ, ಎಂದಿನಂತೆ ಮನೆಯಿಂದ ಕಾಲೇಜ್ಗೆ ಹೋಗಿದ್ದಾಳೆ. ಆದರೆ, ವಾಪಸ್ ಮನೆಗೆ ಹಿಂದಿರುಗಿರಲಿಲ್ಲ. ಹಾನಗಲ್ನ ಅಪ್ತಾಬ್ ಎಂಬ ಯುವಕನೇ ಅಪಹರಣ ಮಾಡಿದ್ದಾನೆಂದು ಪೋಷಕರು ದೂರು ನೀಡಿದ್ದಾರೆ.
ಇದನ್ನೂ ಓದಿ: ಹಾವೇರಿ: ಗ್ಯಾಂಗ್ ರೇಪ್ ಪ್ರಕರಣವಾಗಿ ಬದಲಾದ ಹಾನಗಲ್ ನೈತಿಕ ಪೊಲೀಸ್ಗಿರಿ ಕೇಸ್
ಇತ್ತೀಚೆಗಷ್ಟೇ ಹಾನಗಲ್ನಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ ನಡೆದಿತ್ತು. ಈ ಪ್ರಕರಣವು ನಂತರ ಗ್ಯಾಂಗ್ ರೇಪ್ ಪ್ರಕರಣವಾಗಿ ಬದಲಾಗಿತ್ತು. ಹಿಂದೂ ವಿವಾಹಿತ ಪುರುಷ ಹಾಗೂ ಮುಸ್ಲಿಂ ವಿವಾಹಿತ ಮಹಿಳೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ವಿಚಾರ ತಿಳಿದ ಮುಸ್ಲಿಂ ಯುವಕರು ದಾಳಿ ನಡೆಸಿ ನೈತಿಕ ಪೊಲೀಸ್ಗಿರಿ ನಡೆಸಿದ್ದರು.
ಹಿಂದೂ ಹುಡಗರ ಜೊತೆ ಕಾಣಿಸಿಕೊಂಡ ಮುಸ್ಲಿಂ ಹುಡುಗಿಯರು, ಮಹಿಳೆಯರನ್ನ ಟಾರ್ಗೆಟ್ ಮಾಡುತ್ತಿದ್ದ ಈ ಆರೋಪಿಗಳು, ಜೋಡಿ ಹಕ್ಕಿಗಳ ಮೇಲೆ ಅಟ್ಯಾಕ್ ಮಾಡಿ ಹುಡುಗಿಯರನ್ನ ಎಳೆದೊಯ್ಯುತ್ತಿದ್ದರು. ಅದೇ ರೀತಿ ಹೊಟೇಲ್ನಿಂದ ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿತ್ತು.
ಇದಾದ ನಂತರ ಆ ಮಹಿಳೆಯನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಏಳು ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಒಬ್ಬರಾದ ಮೇಲೆ ಒಬ್ಬರು ನನ್ನ ರೇಪ್ ಮಾಡಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಳು. ಮತ್ತೊಂದೆಡೆ, ತನ್ನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆಯ ಪತಿ ಕೂಡ ಹೇಳಿಕೆ ನೀಡಿದ್ದು, ಅರಣ್ಯದಲ್ಲಿ ರೇಪ್ ಮಾಡಿದ್ದ ವಿಡಿಯೋ ಇದೆ ಎಂದು ಆರೋಪಿಸಿದ್ದರು.
ವರದಿ: ರವಿ ಹುಗಾರ್, ಟಿವಿ9 ಹಾವೇರಿ
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:32 pm, Sat, 13 January 24