AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿಬಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on: Sep 19, 2023 | 12:54 PM

Share

ಬೆಂಗಳೂರು ಸೆ.19: ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯ ಕುತ್ತಿಗೆ ಕೂಯ್ದು ಕೊಲೆ ಮಾಡಿದ್ದ ಆರೋಪಿಗಳನ್ನು ಸಂಪಿಗೆಹಳ್ಲಿ ಪೊಲೀಸ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಬಂಧಿತ ಅರೋಪಿಗಳು. ಆರೋಪಿಗಳು ಸೋಮವಾರ ಬೆಳಿಗ್ಗೆ ಫಾರೂಕ್ ಖಾನ್ ಅವರನ್ನು ಆಟೋದಲ್ಲಿ ಕಿಡ್ನಾಪ್ (Kidnap) ಮಾಡಿಕೊಂಡು ಹೋಗಿದ್ದಾರೆ. ನಂತರ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿಬಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಫಾರೂಕ್​ ಖಾನ್​ ಕಾಣದಿದ್ದಾಗ, ಕುಟುಂಬಸ್ಥರು ಸಂಪಿಗೆಹಳ್ಳಿ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಇದೇ ವೇಳೆ ಈ ವೇಳೆ ಕೊಲೆ ಮಾಡಿರುವ ಆರೋಪಿಗಳು ಸಹ ಪೊಲೀಸ್​ ಠಾಣೆಗೆ ಬಂದು, ತಾವೇ ತಮ್ಮ ದ್ವೇಷಕ್ಕಾಗಿ ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಆರೋಪಿಗಳು ಮತ್ತು ಫಾರೂಕ್​ ಖಾನ್​ ಎಲ್ಲರೂ ಪರಿಚಿತರೇ ಆಗಿದ್ದಾರೆ. ಆರೋಪಿ ಸುಹೇಲ್​​ಗೆ, “ನೀನು ಕೆಟ್ಟದಾಗಿ ಮಾತನಾಡುತ್ತೀಯಾ, ನನ್ನನ್ನು ಕೆಟ್ಟದಾಗಿ ಬಿಂಬಿಸುತ್ತಿಯಾ ಮತ್ತು ಗಾಂಜಾ ಮಾರಾಟ ಮಾಡುತ್ತೀಯಾ. ಈ ಬಗ್ಗೆ ನಾನು ಪೊಲೀಸರಿಗೆ ಹೇಳುತ್ತೇನೆ” ಎಂದು ಫಾರೂಕ್​ ಖಾನ್ ಹೇಳಿದ್ದರು.

ಇದನ್ನೂ ಓದಿ: ಒಂಬತ್ತು ಇಂಚು ಜಾಗಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಇದರಿಂದ ಕೋಪಗೊಂಡಿದ್ದ ಸುಹೇಲ್​ “ನಾನು ಗಾಂಜಾ ವ್ಯವಹಾರ ನಡೆಸುತಿರಲಿಲ್ಲ. ಆದರೂ ಸಹ ನನ್ನ ಬಗ್ಗೆ ಕೆಟ್ಟದಾಗಿ ಮಾತಾಡ್ತಾನೆ” ಎಂದು ಸುಹೇಲ್​ ಆಟೋದಲ್ಲಿ ಕರೆದುಕೊಂಡು ಹೋಗಿ ಇತರರೊಂದಿಗೆ ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್